ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಿಜೆಪಿಯು 300 ಪರ್ಸೆಂಟ್ ಕಮಿಷನ್ ಸರ್ಕಾರ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಡಿಸೆಂಬರ್ 30: ಕರ್ನಾಟಕದಲ್ಲಿರುವ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇದು 300 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹೇಮಾವತಿ ಜಲಾಶಯ, ನಾರಾಯಣಪುರ ಜಲಾಶಯ ಸೇರಿದಂತೆ ಕೆಲವು ಯೋಜನೆಗಳ ಒಟ್ಟು ಅಂದಾಜು 800 ಕೋಟಿ ಎನ್ನಲಾಗಿದೆ. ಕಾಮಗಾರಿ ನಡೆಯದ ವಿವಿಧ ಯೋಜನೆಗಳಿಗೆ ಎರಡು ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲು ಮುಂದಾಗಿದೆ. ರಾಜ್ಯದ ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಅವರು ಆರೋಪಿಸಿದರು.

ರಸ್ತೆ ಅಪಘಾತಗಳಿಂದ ಹೆಚ್ಚು ಸಾವು ಸಂಭವಿಸುವ ನಗರಗಳಲ್ಲಿ ಬೆಂಗಳೂರು ಒಂದುರಸ್ತೆ ಅಪಘಾತಗಳಿಂದ ಹೆಚ್ಚು ಸಾವು ಸಂಭವಿಸುವ ನಗರಗಳಲ್ಲಿ ಬೆಂಗಳೂರು ಒಂದು

ಸರ್ಕಾರದಲ್ಲಿ ಬೃಹತ್‌ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದರಿಂದ ಸದನದಲ್ಲಿ ವಿಪಕ್ಷಗಳ ನಾಯಕರ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಸಭಾಧ್ಯಕ್ಷರು ಸಹ ಕೂಡ ಅವರ ಬೆಂಬಲಕ್ಕೆ ಇದ್ದಾರೆ. ಗುತ್ತಿಗೆದಾರರ ಸಂಘದ ಮುಖಂಡ ಕೆಂಪಣ್ಣ ಅವರನ್ನು ಬಂಧಿಸಲಾಗಿದೆ. ಸರ್ಕಾರಕ್ಕೆ ಈ ವಿಷಯಗಳ ಬಗ್ಗೆ ಚರ್ಚೆ ಮಾಡುವ ಆಸಕ್ತಿ ಇಲ್ಲ, ಬಿಜೆಪಿ ನಾಯಕರು ಚರ್ಚೆಯಿಂದ ದೂರ ಓಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ದೂರಿದರು.

CM Bommai led BJP govt is 300% commission government Alleged by Siddaramaiah.

ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿಲ್ಲ, ಪ್ರವಾಹದಿಂದ ಬರುವ ರೋಗಗಳು ರೈತರನ್ನು ತುಂಬಾ ಸಂಕಷ್ಟಕ್ಕೆ ದೂಡಿವೆ' ಈ ಬಗ್ಗೆ ರಾಜ್ಯ ಸರ್ಕಾರ ಚರ್ಚಿಸುತ್ತಿಲ್ಲ. ಅತಿವೃಷ್ಟಿಯಿಂದಾಗಿ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರಕ್ಕೆ ಈ ಬಗ್ಗೆ ಯೋಚನೆ ಇಲ್ಲ ಎಂದು ರೈತರ ಸಮಸ್ಯೆಗಳನ್ನು ಪ್ರಸ್ತಾಪಿಸದರು.

ಪ್ರತಿಭಟನೆ: ಡಿಪಿಆರ್‌ಗೆ ಸರ್ಕಾರದ ತರಾತುರಿ ಒಪ್ಪಿಗೆ

ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಮಹದಾಯಿ ನದಿ ವಿವಾದದ ಕುರಿತು ಸಿದ್ದರಾಮಯ್ಯ ಅವರು, ಹಿಂದೆ ನಾವು ಎಲ್ಲವನ್ನೂ ಮಾಡಿದ್ದೇವೆ. ನಾವು ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಘೋಷಿಸಿದ ನಂತರ ಆಡಳಿತ ಪಕ್ಷ ಎಚ್ಚೆತ್ತುಕೊಂಡಿದೆ. ಅವರು ಕೇವಲ ಭರವಸೆ ನೀಡಿದ್ದಾರೆ.

ಮಹಾದಾಯಿ ವಿಚಾರದಲ್ಲಿ ಬಿಜೆಪಿ ಈಗ ತಮ್ಮ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಈಗ ಹೀಗಿರುವ ಬೆಜೆಪಿ ಸರ್ಕಾರ ಯಾಕೆ ಮಹದಾಯಿ ವಿಷಯದಲ್ಲಿ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ತೆರವು ಮಾಡಿತ್ತು. ಕಾಂಗ್ರೆಸ್ ಪ್ರತಿಭಟನೆಗೆ ಹೆದರುವವರು ಉತ್ತರಿಸಬೇಕು ಎಂದು ಪ್ರಶ್ನಿಸಿದರು.

ಡಿಸೆಂಬರ್ 30 ರಿಂದ ವಿಜಯಪುರ ಮತ್ತು ರಾಜ್ಯದ ಇತರ ಕಡೆಗಳಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಈ ಸಂಬಂಧ ಹೆದರಿರುವ ಬಿಜೆಪಿ ಮಹದಾಯಿ ವಿಚಾರದಲ್ಲಿ ವಿಸ್ತೃತ ಯೋಜನಾ ವರದಿಗೆ ತರಾತುರಿಯಲ್ಲಿ ಅನುಮತಿ ನೀಡಿದೆ ಎಂದು ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.

English summary
CM Basavaraj Bommai led Karnataka BJP government is 300% commission government Alleged by opposition party leader Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X