ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸಿಎಂ, ಜಲಜೀವನ್ ಮಿಷನ್ ಯೋಜನೆಗಳ ಕುರಿತು ಚರ್ಚೆ

ನವದೆಹಲಿ,ಡಿಸೆಂಬರ್ 1: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಚರ್ಚೆ ನಡೆಸಿದರು. ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ದೊರೆಯ ಬೇಕಾದ ತೀರುವಳಿಗಳನ್ನು ಶೀಘ್ರವೇ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ತೀವ್ರಗತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ರಾಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾದ ಭಗವಂತ ಖೂಬ ,ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ,ಮುಖ್ಯಮಂತ್ರಿಗಳ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು .

CM Bommai meets Union Jal Shakti Minister; discusses irrigation projects, Jal Jeevan Mission scheme

ಹಿರಿಯ ವಕೀಲ ಫಾಲಿ .ಎಸ್. ನಾರಿಮನ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ವಕೀಲ ಫಾಲಿ .ಎಸ್. ನಾರಿಮನ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿರುವುದಾಗಿ ಹೇಳಿದರು.

CM Bommai meets Union Jal Shakti Minister; discusses irrigation projects, Jal Jeevan Mission scheme

ರಾಜ್ಯಕ್ಕೆ 5 ದಶಕಗಳ ಕಾಲ ಸೇವೆ ಸಲ್ಲಿಸಿರುವ ನಾರಿಮನ್ ಅವರು ಕರ್ನಾಟಕದ ನೀರಿನ ಹಿತರಕ್ಷಣೆ ಮಾಡಿದ್ದಾರೆ. ಈಗಲೂ ಅವರ ಸಲಹೆ ಸೂಚನೆಗಳಿಗೆ ಮೌಲ್ಯ ಇದೆ. ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗ್ಗಡೆ,ಎಸ್.ಆರ್.ಬೊಮ್ಮಾಯಿ ಹೆಚ್.ಡಿ.ದೇವೇಗೌಡರ ಕಾಲದಲ್ಲಿ ಅವರು ಅನನ್ಯ ಸೇವೆ ಸಲ್ಲಿಸಿದ್ದಾರೆ. ಇದೊಂದು ಸೌಜನ್ಯದ ಭೇಟಿಯಾಗಿದ್ದು ಅವರಿಗೆ ಧನ್ಯವಾದವನ್ನು ಹೇಳುವುದಕ್ಕೆ ಬಂದಿದ್ದೇನೆ. ಗಡಿ, ಜಲ ವಿವಾದದ ಬಗ್ಗೆ ಯಾವುದೇ ವಿಶೇಷ ಚರ್ಚೆ ಮಾಡಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+