ಮಾ.24ಕ್ಕೆ ಸಚಿವ ಸಂಪುಟ ಸಭೆ, ಬಳಿಕವೇ ಪಂಚಮಸಾಲಿ ಮೀಸಲಾತಿ ನಿರ್ಧಾರ ಬಹಿರಂಗ, ಕಾಂಗ್ರೆಸ್ ಗ್ಯಾರಂಟಿಗೆ ಸಿಎಂ ತಿರುಗೇಟು
ಕರ್ನಾಟಕದ ಪಂಚಾಮಸಾಲಿ ಸಮುದಾಯಗಳಿಗೆ ಸಿಹಿ ಸುದ್ದಿಯೊಂದು ಸಿಗುವ ಮುನ್ಸೂಚನೆ ದೊರೆತಿದೆ. ಬಹುಬೇಡಿಕೆಗೆ ಮೀಸಲಾತಿ ಕನಸು ನನಸಾಗುವ ಸಾಧ್ಯತೆ ಇದೆ ಎಂಬ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.
ಬಾಗಲಕೋಟೆ, ಮಾರ್ಚ್ 21: ಕರ್ನಾಟಕದ ಪಂಚಾಮಸಾಲಿ ಸಮುದಾಯಗಳಿಗೆ ಸಿಹಿ ಸುದ್ದಿಯೊಂದು ಸಿಗುವ ಮುನ್ಸೂಚನೆ ದೊರೆತಿದೆ. ಬಹುಬೇಡಿಕೆಗೆ ಮೀಸಲಾತಿ ಕನಸು ನನಸಾಗುವ ಸಾಧ್ಯತೆ ಇದೆ ಎಂಬ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.
ಇದೇ ತಿಂಗಳ ಮಾರ್ಚ್ 24 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಪಂಚಮಸಾಲಿ ಸಮುದಾಯಗಳಿಗೆ ಮೀಸಲಾತಿ ನೀಡುವ ಬಗ್ಗೆ ಚರ್ಚೆಯಾಗಲಿದೆ. ಸಭೆ ಬಳಿಕವೇ ಆ ಸಮುದಾಯಗಳಿಗೆ ಮೀಸಲಾತಿ ಕುರಿತು ಸ್ಪಷ್ಟ ಮಾಹಿತಿ ಹೊರಬೀಳಲಿದೆ ಎಂದು ಅವರು ತಿಳಿಸಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮೀಸಲಾತಿ ಕುರಿತು ಪ್ರಶ್ನೆಗಳಿಗೆ ಉತ್ತರಿಸಿದರು. ಅಲ್ಲದೇ ರಾಜ್ಯದಲ್ಲಿನ 2 ಎ ಮೀಸಲಾತಿ ಹೊಂದಿರುವ ಸಮುದಾಯಗಳನ್ನು 3ಬಿ ಗೆ ಹಾಕುವ ಬಗ್ಗೆ ಯಾವುದೇ ವರದಿಗಳು ಇಲ್ಲ ಎಂದು ಸ್ಪಷ್ಟಪಡಿಸಿದರು.
ಕಳೆದ ಮೂರು ವರ್ಷಗಳಲ್ಲಿ ನೀರಾವರಿ, ಕುಡಿಯುವ ನೀರು, ರೈತರಿಗೆ ಅನುಕೂಲವಾಗುವ ಯೋಜನೆ, ಕೈಗಾರಿಕಾ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳಿಗೆ ಒಟ್ಟು ನೀಡಲಾಗಿದೆ. ಹುನಗುಂದ ಮತ್ತು ಮುಧೋಳದಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ ಮಾಡಲಾಗಿದೆ. ಮುದ್ದೇಬಿಹಾಳ ಕ್ಷೇತ್ರದಲ್ಲಿ 1600 ಕೋಟಿ ರೂ.ಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರಲ್ಲದೇ ಕಳೆದ ಮೂರು ವರ್ಷಗಳ ಸರ್ಕಾರದ ನಿರ್ಣಯ, ಬಿಡುಗಡೆ ಮಾಡಿರುವ ಅನುದಾನ ಮತ್ತು ಅನುಷ್ಠಾನದ ಫಲವಾಗಿ ಸಾಕಷ್ಟು ಅಭಿಯಾಗಿದೆ ಎಂದು ಅವರು ತಿಳಿಸಿದರು

ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಉತ್ತರಿಸಿ ಈಗಾಗಲೇ ಅವರಿಗೆ 15 ರಷ್ಟು ವೇತನ ಹೆಚ್ಚಳ ಮಾಡಲಾಗಿದೆ ಎಂದರು.
ಬೊಗಸ್ ಗ್ಯಾರಂಟಿ ಎಂದು ಕಾಂಗ್ರೆಸ್‌ಗೆ ಸಿಎಂ ಟಾಂಗ್
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಕೆಲಸಗಳೆ ಗ್ಯಾರಂಟಿ ಹೊರತು ನಾವು ಬೊಗಸ್ ಗ್ಯಾರಂಟಿಗಳನ್ನು ಕೊಡುವುದಿಲ್ಲ. ನಮ್ಮ ಗ್ಯಾರಂಟಿಗಳು ಜನರಿಗೆ ಮುಟ್ಟಿವೆ. ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಲೋಕಾರ್ಪಣೆ ಮಾಡುವ ಮೂಲಕ ಗ್ಯಾರಂಟಿ ರಾಜ್ಯದ ಜನರಿಗೆ ಗ್ಯಾರಂಟಿ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ಕಾಂಗ್ರೆಸ್‌ಗೆ ಟಾಂಗ್ ನೀಡಿದರು.
ಕಾಂಗ್ರೆಸ್ ನದ್ದು ಮಹಿಳೆಯರು, ಯುವಕರನ್ನು ಯಾಮಾರಿಸುವ ಗ್ಯಾರಂಟಿ ಆಗಿದೆ. ಚುನಾವಣೆ ಹಿನ್ನೆಲಯಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದರು.
ನಿರುದ್ಯೋಗ ಭತ್ಯೆ ರಾಹುಲ್ ಗಾಂಧಿಯಿಂದ ಪ್ರಾರಂಭಿಸಬೇಕು
ನಿರುದ್ಯೋಗಿಗಳಿಗೆ ಮೂರು ಸಾವಿರ ನೀಡುವುದಾಗಿ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಅಂತದ್ದೊಂದು ಭತ್ಯ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರಿಂದಲೇ ಪ್ರಾರಂಭವಾಗಬೇಕು ಎಂದು ತಿರುಗೇಟು ನೀಡಿದರು.
ನಿರುದ್ಯೋಗಿಗಳಿಗೆ ಭತ್ಯೆ ಬಗ್ಗೆ ರಾಜಸ್ತಾನ, ಛತ್ತೀಸ್‌ಗರ್ ದಲ್ಲಿಯೂ ಹೇಳಿದ್ದರು. ಆದರೆ ಅನುಷ್ಠಾನ ಆಗಿಲ್ಲ.
ರಾಹುಲ್ ಗಾಂಧಿ ಹತಾಶರಾಗಿದ್ದಾರೆ. ಅವರಿಗೆ ಆಂತರಿಕ ಸಮೀಕ್ಷೆಯಲ್ಲಿ ಗೆಲ್ಲುವುದಿಲ್ಲ ಎಂದು ತಿಳಿದು ಬಂದಿದೆ. ಶೇಕಡಾ 3ರಿಂದ 4 ರಷ್ಟು ಮತ ಗೆಲ್ಲಲು ಈ ರೀತಿಯ ಆಗಲಾರದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜಸ್ತಾನ ಅಥವಾ ಛತ್ತೀಸ್ ಗಡ ಅಲ್ಲ. ಕರ್ನಾಟಕದ ಜನ ಬಹಳ ಪ್ರಬುದ್ಧರಿದ್ದಾರೆ. ಯಾರು ಯಾಕೆ ಮಾತನಾಡುತ್ತಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ ನಡೆಸಿದರು.












Click it and Unblock the Notifications