Get Updates
Get notified of breaking news, exclusive insights, and must-see stories!

ಕೈಗಾರಿಕಾ ಕ್ಷೇತ್ರಾಭಿವೃದ್ಧಿಗೆ ಆರ್‌.ವಿ.ದೇಶಪಾಂಡೆ ಕೊಡುಗೆ ಅಪಾರ: CM

ಬೆಳಗಾವಿ, ಡಿಸೆಂಬರ್ 28: ಕರ್ನಾಟಕದಲ್ಲಿ ಕೈಗಾರೀಕರಣ ಹಾಗೂ ಕೈಗಾರಿಕಾ ನೀತಿ ರೂಪಿಸುವುದರಲ್ಲಿ ಪ್ರಗತಿಪರ ಚಿಂತನೆವುಳ್ಳ ಕಾಂಗ್ರೆಸ್‌ನ ಆರ್‌.ವಿ. ದೇಶಪಾಂಡೆ ಅವರ ಪಾತ್ರ ಮಹತ್ವದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ಲಾಘಿಸಿದರು.

ಬುಧವರ ಬೆಳಗಾವಿ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರಿಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದ ನಂತರ ಅವರು ಮಾತನಾಡಿದರು. ಕೈಗಾರಿಕಾ ಸಚಿವರಾಗಿ ಸುದೀರ್ಘ 10 ವರ್ಷ ಸೇವೆ ಸಲ್ಲಿಸಿದ ಕೀರ್ತಿ ಆರ್.ವಿ.ದೇಶಪಾಂಡೆಯವರಿಗೆ ಸಲ್ಲುತ್ತದೆ. ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದರು.

ದೇಶಪಾಂಡೆಯವರು ಪ್ರಗತಿಪರವಾದ ಚಿಂತನೆಯುಳ್ಳವರು. ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಆರ್ಥಿಕತೆ ಬದಲಾವಣೆ, ಉದಾರೀಕರಣ ಹಾಗೂ ಜಾಗತೀಕರಣದ ಲಾಭವನ್ನು ರಾಜ್ಯಕ್ಕೆ ಲಭಿಸುವಂತೆ ಮಾಡುವಲ್ಲಿ ಅವರು ಪ್ರಾಮಾಣಿಕ ಶ್ರಮಿಸಿದ್ದಾರೆ. ಕರ್ನಾಟಕದಲ್ಲಿ ಟೊಯೊಟಾ ಕಾರ್ಖಾನೆಗೆ ರಿಯಾಯ್ತಿಗಳನ್ನು ನೀಡಿ ಉದ್ಯೋಗ ಸೃಷ್ಟಿಗೆ ಕಾರಣರಾಗಿದ್ದರು. ತಮ್ಮ ಕಾರ್ಯಗಳಿಂದಲೇ ರಾಜ್ಯದಲ್ಲಿ ದೊಡ್ಡ ಬದಲಾವಣೆ ತಂದರು ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.

CM Bommai remembered Best MLA award RV Deshpande role model in political life

'ಶಾಸಕ ಪ್ರಶಸ್ತಿ' ಯ ಗೌರವ ಹೆಚ್ಚಾಗಿದೆ

ಅತ್ಯುತ್ತಮ ಶಾಸಕ ಪ್ರಶಸ್ತಿ ಹಿರಿಯರು ಹಾಗೂ ಮಾರ್ಗದರ್ಶಕರೂ ಆಗಿರುವಂತಹ ಆರ್.ವಿ.ದೇಶಪಾಂಡೆಯವರಿಗೆ ಸಂದಿರುವುದರಿಂದ ಈ ಪ್ರಶಸ್ತಿಯ ಗೌರವ ಹೆಚ್ಚಾಗಿದೆ. ಸರ್ವಸಮ್ಮತದ ಆಯ್ಕೆಯಲ್ಲಿ ವಿಧಾನಮಂಡಲದ ವಿಧಾನಸಭೆಯ ನಡೆವಳಿಕೆಗಳನ್ನು ಎತ್ತರದ ಮಟ್ಟದಲ್ಲಿ ನಿಭಾಯಿಸುವುದನ್ನು ತಮ್ಮ ನಡತೆಯಿಂದ ಕಳೆದ 8 ಬಾರಿ ಆಯ್ಕೆಯಲ್ಲಿ ತೋರಿಸಿಕೊಟ್ಟಿದ್ದಾರೆ. ಅತ್ಯುತ್ತಮ ಆಯ್ಕೆ ಮಾಡಿರುವುದಕ್ಕೆ ಮುಖ್ಯಮಂತ್ರಿಗಳು ಸದಸ್ಯರನ್ನು ಅಭಿನಂದಿಸಿದರು.

ದೇಶಪಾಂಡೆಯವರು ನಡೆದ ದಾರಿ ಎಲ್ಲರಿಗೂ ಮಾದರಿ

ಉತ್ತಮ ರಾಜಕೀಯ ಅನುಭವ ಹೊಂದಿರುವ ಆರ್.ವಿ.ದೇಶಪಾಂಡೆಯವರು ಎಲ್ಲ ಮುಖ್ಯಮಂತ್ರಿಗಳೊಂದಿಗೂ ಉತ್ತಮ ಬಾಂಧವ್ಯ ಹೊಂದಿದ ಸ್ನೇಹಪರ ವ್ಯಕ್ತಿಯಾಗಿದ್ದಾರೆ ವಿರೋಧಪಕ್ಷದಲ್ಲಿ, ಕೇಂದ್ರ ಸರ್ಕಾರದಲ್ಲಿ ಹಲವು ಸಚಿವರೊಂದಿಗೂ ಉತ್ತಮ ಸಂಬಂಧ ಹೊಂದಿದ್ದಾರೆ. ನೂತನ ಶಾಸಕರು ಅವರ ಬಗ್ಗೆ ತಿಳಿದುಕೊಳ್ಳಬೇಕಿದೆ ಎಂದರು.

ಆರ್.ವಿ.ದೇಶಪಾಂಡೆಯವರದ್ದು ಸರಳ, ಸಜ್ಜನ ವ್ಯಕ್ತಿತ್ವ. ರಾಜ್ಯ ಹಾಗೂ ದೇಶದ ಹಿತಕ್ಕೆ ಚಿಂತನೆ ಮಾಡುವವರು. 1980 ರಲ್ಲಿ ಎಪಿಎಂಸಿ ನಿರ್ದೇಶಕರಾಗಿದ್ದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಬಳಿಗೆ ಒಂದು ತಂಡವನ್ನು ಕರೆತಂದಿದ್ದರು. ಕೆಲವೇ ದಿನಗಳಲ್ಲಿ ಎಪಿಎಂಸಿ ಅಧ್ಯಕ್ಷರಾದರು. 1983ರ ಚುನಾವಣೆಯಲ್ಲಿ ಹಳಿಯಾಳ ಕ್ಷೇತ್ರಕ್ಕೆ ಆಯ್ಕೆಯಾದರು. ಆ ಕ್ಷೇತ್ರವನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಮಾಡಿ ಜನಮಾನಸ ಗೆದ್ದಿದ್ದಾರೆ ಎಂದರು.

CM Bommai remembered Best MLA award RV Deshpande role model in political life

ಹಲವು ಖಾತೆಗಳ ನಿರ್ವಹಣೆ

ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ವೇಳೆ ಕಾಂಗ್ರೆಸ್‌ನ ಸಿದ್ದರಾಮಯ್ಯ, ದೇಶಪಾಂಡೆಯವರು, ಎಂ.ಪಿ.ಪ್ರಕಾಶ್ ಇನ್ನಿತರರು ತಂಡವು ತಮ್ಮ ಕ್ಷೇತ್ರಗಳಲ್ಲಿ ಮಾಡಿದ್ದರು. ಅವರ ಕಾರ್ಯದಿಂದ 1983 ಸಮಯ ರಾಜಕಾರಣ ಬದಲಿಸಿದ ಸಮಯ ಎಂದು ಅವರು ಪ್ರಶಂಸಿದರು. ಅಂದಿನಿಂದ ವಿವಿಧ ಖಾತೆಗಳಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ದಕ್ಷತೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು.

ಪ್ರಶಸ್ತಿ ಪ್ರದಾನ ವೇಳೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+