ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುತೂಹಲ ಮೂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ!

|
Google Oneindia Kannada News

ಬೆಂಗಳೂರು, ಸೆ. 07: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ದೆಹಲಿ ಪ್ರವಾಸಕ್ಕೆ ತೆರಳಿರುವುದು ಸಚಿವ ಸ್ಥಾನಾಕಾಂಕ್ಷಿಗಳಲ್ಲಿ ಆಸೆ ಗರಿಗೆದರುವಂತೆ ಮಾಡಿದೆ. ಆದರೆ ಹೈಕಮಾಂಡ್ ಭೇಟಿ ಮಾಡಿ, ಉಳಿದಿರುವ ನಾಲ್ಕು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಚರ್ಚೆ ನಡೆಸುವುದಿಲ್ಲ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಆದರೂ ಕೂಡ ಸಚಿವಾಕಾಂಕ್ಷಿಗಳಲ್ಲಿ ಆಸೆ ಗರಿಗೆದರಿಗೆ, ಅದಕ್ಕೆ ಕಾರಣವೂ ಇದೆ.

"ದೆಹಲಿಗೆ ಹೋಗುತ್ತಿದ್ದೇನೆ. ನಾಲ್ಕಾರು ಜನ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ. ಕೇಂದ್ರ ಸಚಿವರಾ ಗಡ್ಕರಿ ಭೇಟಿ, ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರನ್ನು ಭೇಟಿ ಮಾಡುತ್ತೇನೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌. ನಡ್ಡಾ ಅವರನ್ನು ಭೇಟಿ ಕಾರ್ಯಕ್ರಮ ಸದ್ಯಕ್ಕಿಲ್ಲಿ. ಆದರೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮಗಳ ಆರತಕ್ಷತೆ ಕಾರ್ಯಕ್ರಮದಲ್ಲಿ ಜೆಪಿ ನಡ್ಡಾ ಅವರೊಂದಿಗೆ ಮಾತನಾಡುತ್ತೇನೆ" ಎಂದು ಬೆಂಗಳೂರಿನಲ್ಲಿ ಕೊಟ್ಟಿರುವ ಹೇಳಿಕೆಯಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಆರತಕ್ಷತೆಯಲ್ಲಿ ಭೇಟಿ ಮಾಡುತ್ತೇನೆ, ಸಂಪುಟ ವಿಸ್ತರಣೆಗೆ ಕುರಿತು ಪ್ರತ್ಯೇಕವಾಗಿ ಭೇಟಿ ಮಾಡುವುದಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಆದರೂ ಕೂಡ ಸಂಪುಟ ವಿಸ್ತರಣೆ ಕುರಿತು ಚರ್ಚೆ ಆಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Chief Minister Basavaraj Bommais two-day visit to Delhi has left a lot of hope for the ministerial aspirants

ಜೊತೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಲೋಕೋಪಯೋಗಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಲಿರುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ. ವಸತಿ ಹಾಗೂ ನಗರಾಭಿವೃದ್ಧಿ ಸಚಿವರನ್ನೂ ಭೇಟಿಯಾಗಲಿದ್ದು, ರಾಜ್ಯದ ವಿವಿಧ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಹಣಕಾಸಿನ ಸಚಿವರ ಬಳಿ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನ ಬಿಡುಗಡೆಗೆ ಮನವಿ ಸಲ್ಲಿಸಲು ತೀರ್ಮಾನಿಸಿದ್ದಾರೆ.

Recommended Video

Kautilya's Arthashastra, Bhagavad Gita May Soon Be Part of India's Military | Oneindia Kannada

ವಸತಿ ಮತ್ತು ನಗರಾಭಿವೃದ್ಧಿ ಸಂಬಂಧಿಸಿದಂತೆ ಕೇಂದ್ರ ಸಚಿವರು ಬೆಂಗಳೂರಿಗೆ ಬಂದಾಗ ಹಲವಾರು ಯೋಜನೆಗಳ ಬಗ್ಗೆ ಚರ್ಚೆಯಾಗಿತ್ತು.ನಗರ ವಸತಿ ಹಾಗೂ ಮೆಟ್ರೋ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದಿದ್ದಾರೆ. ನಿಫಾ ವೈರಾಣು ಕುರಿತು ಸಂಪೂರ್ಣ ಮಾಹಿತಿ ಪಡೆಯಲು ತಜ್ಞರಿಗೆ ಸೂಚಿಸಲಾಗಿದೆ. ಕೇರಳ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಿಗಾ ಇಡಲಾಗಿದೆ. ಬೆಂಗಳೂರು ನಗರದಲ್ಲಿ ಗುಂಡಿಗಳನ್ನು ಮುಚ್ಚುವ ಸಂಬಂಧ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲು ಬಿ.ಬಿ.ಎಂ.ಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದೆಹಲಿ ಭೇಟಿ ಬಳಿಕ ಸಿಎಂ ಬೊಮ್ಮಾಯಿ ನಾಳೆ ಬುಧವಾರ ಸಂಜೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂಬ ಮಾಹಿತಿಯಿದೆ.

English summary
Chief Minister Basavaraj Bommai's two-day visit to Delhi has left a lot of hope for the ministerial aspirants. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X