ದಿವ್ಯಾಂಗರಿಗೆ ಅನುಕಂಪವಲ್ಲ; ಅವಕಾಶ ನೀಡಬೇಕು: ಸಿಎಂ ಬೊಮ್ಮಾಯಿ
ಬೆಂಗಳೂರು, ಆ. 31: ದಿವ್ಯಾಂಗರಿಗೆ ಅನುಕಂಪವಲ್ಲ; ಅವಕಾಶ ನೀಡಬೇಕು. ಮುಂದಿನ ದಿನಗಳಲ್ಲಿ ದಿವ್ಯಾಂಗರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸೆನ್ಸ್ ಎಸೆನ್ಸ್ ಸಂಸ್ಥೆಯು ಪ್ರಕಟಿಸಿದ ಮ್ಯಾಜಿಕ್ ಡಾಟ್ಸ್ ಎಂಬ ಬ್ರೈಲ್ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ್ದಾರೆ.
"ಮುಖ್ಯಮಂತ್ರಿಯಾಗಿ ಮೊದಲ ಸಂಪುಟ ಸಭೆಯಲ್ಲಿ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳಡಿ ಮಾಸಾಶನ ಹೆಚ್ಚಿಸಲು ತೀರ್ಮಾನಿಸಿದೆ. ಮುಂದಿನ ದಿನಗಳಲ್ಲಿ ದಿವ್ಯಾಂಗರಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು" ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ತಿಳಿಸಿದರು.

ದಿವ್ಯಾಂಗರು ದೇವರ ಮಕ್ಕಳು
"ದಿವ್ಯಾಂಗರು ದೇವರ ಮಕ್ಕಳು. ನಮ್ಮ ಒಬ್ಬ ಸಂಪೂರ್ಣ ಸಶಕ್ತ ಮನುಷ್ಯನಿಗೆ ತನ್ನ ದೇಹದ ಅಂಗಾಂಗಳ ಮಹತ್ವದ ಇರುವುದಿಲ್ಲ. ದೇವರ ಮಕ್ಕಳು ಎದುರಾದಾಗ ಅವರೊಂದಿಗೆ ನಾವು ಹೇಗೆ ನಡೆದುಕೊಳ್ಳಬೇಕು ಎಂದು ಪರೀಕ್ಷೆ ಮಾಡುತ್ತಾನೆ.ಇವರ ಸೇವೆ ಮಾಡುವ ಮುಖಾಂತರ ಬದುಕಿನ ಬ್ಯಾಲೆನ್ಸ್ ಶೀಟ್ ಅನ್ನು ಸರಿ ಮಾಡಿಕೊಳ್ಳಿ ಎಂದು ಅವಕಾಶ ಕೊಡುತ್ತಾನೆ" ಎಂದರು.

ದಿವ್ಯಾಂಗರ ಬುದ್ಧಿಮತ್ತೆ ನಮ್ಮ ಊಹೆಗೂ ಮೀರಿದ್ದು
ಅಂಗಾಂಗದ ಕೊರತೆ ಬಿಟ್ಟರೆ, ಎಲ್ಲರನ್ನೂ ಮೀರಿಸುವ ಬುದ್ಧಿ ಶಕ್ತಿ ಅವರಿಗಿದೆ. ಸಾಮಾನ್ಯ ಮನುಷ್ಯರು ತಮ್ಮ ಮೆದುಳನ್ನು ಶೇ. 20ಕ್ಕಿಂತ ಹೆಚ್ಚು ಬಳಸುವುದಿಲ್ಲ. ದಿವ್ಯಾಂಗರ ಬುದ್ಧಿಮತ್ತೆ ನಮ್ಮ ಊಹೆಗೂ ಮೀರಿದ್ದು. ಅದಕ್ಕೆ ಅವರಿಗೆ ಸಂಗೀತ, ಕಲೆ ಹೀಗೆ ಹಲವು ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಪ್ರಧಾನಿ ಮೋದಿ ಗಮನಕ್ಕೆ ತರುತ್ತೇನೆ!
ಸೆನ್ಸ್ ಅಂಡ್ ಎಸೆನ್ಸ್ ಸಂಸ್ಥೆಯ ಸಂಸ್ಥಾಪಕರಾದ ಯಶ್ವಿ ಭಂಡಾರಿ ಹಾಗೂ ರುಷಾಲಿ ದೋಷಿ ಅವರು ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಕಾಲಹರಣ ಮಾಡದೆ, ಬ್ರೈಲ್ ಲಿಪಿಯಲ್ಲಿ ಸಮಾಜದ ಆಗುಹೋಗುಗಳನ್ನು ತಿಳಿಸುವ ಸಲುವಾಗಿ ಪತ್ರಿಕೆಯನ್ನು ಹೊರತರುವ ಮೂಲಕ ಮಾನವೀಯ ಕಳಕಳಿಯನ್ನು ತೋರಿರುವುದು ಸಂತಸ ತಂದಿದೆ. ಈ ಪತ್ರಿಕೆಯನ್ನು ಪ್ರಧಾನಿ ಮೋದಿ ಗಮನಕ್ಕೂ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಟೋಕಿಯೋ ಪ್ಯಾರಾ ಒಲಿಂಪಿಕ್ಸ್
ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ದೇಶದ ದಿವ್ಯಾಂಗ ಕ್ರೀಡಾಪಟುಗಳ ಸಾಧನೆ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕಾರ್ಯಕ್ರಮದಲ್ಲಿ ದಿವ್ಯಾಂಗ ಪ್ರತಿಭೆ ಬಸವರಾಜ ಉಮ್ರಾಣಿ ಅವರು ಗಣಿತದಲ್ಲಿನ ತಮ್ಮ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸಿ, ಪ್ರಶಂಸೆಗೆ ಪಾತ್ರರಾದರು. ಉಮ್ರಾಣಿ ಅವರನ್ನು ಸಿಎಂ ಬೊಮ್ಮಾಯಿ ಅಭಿನಂದಿಸಿದರು.
ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಗಣಿತದಲ್ಲಿ ತಮ್ಮ ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ ಬಸವರಾಜ ಉಮರಾಣಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದು ವಿಶೇಷವಾಗಿತ್ತು.
Recommended Video
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications