ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಿವ್ಯಾಂಗರಿಗೆ ಅನುಕಂಪವಲ್ಲ; ಅವಕಾಶ ನೀಡಬೇಕು: ಸಿಎಂ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಆ. 31: ದಿವ್ಯಾಂಗರಿಗೆ ಅನುಕಂಪವಲ್ಲ; ಅವಕಾಶ ನೀಡಬೇಕು. ಮುಂದಿನ ದಿನಗಳಲ್ಲಿ ದಿವ್ಯಾಂಗರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸೆನ್ಸ್ ಎಸೆನ್ಸ್ ಸಂಸ್ಥೆಯು ಪ್ರಕಟಿಸಿದ ಮ್ಯಾಜಿಕ್ ಡಾಟ್ಸ್ ಎಂಬ ಬ್ರೈಲ್ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ್ದಾರೆ.

"ಮುಖ್ಯಮಂತ್ರಿಯಾಗಿ ಮೊದಲ ಸಂಪುಟ ಸಭೆಯಲ್ಲಿ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳಡಿ ಮಾಸಾಶನ ಹೆಚ್ಚಿಸಲು ತೀರ್ಮಾನಿಸಿದೆ. ಮುಂದಿನ ದಿನಗಳಲ್ಲಿ ದಿವ್ಯಾಂಗರಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು" ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ತಿಳಿಸಿದರು.

ದಿವ್ಯಾಂಗರು ದೇವರ ಮಕ್ಕಳು

ದಿವ್ಯಾಂಗರು ದೇವರ ಮಕ್ಕಳು

"ದಿವ್ಯಾಂಗರು ದೇವರ ಮಕ್ಕಳು. ನಮ್ಮ ಒಬ್ಬ ಸಂಪೂರ್ಣ ಸಶಕ್ತ ಮನುಷ್ಯನಿಗೆ ತನ್ನ ದೇಹದ ಅಂಗಾಂಗಳ ಮಹತ್ವದ ಇರುವುದಿಲ್ಲ. ದೇವರ ಮಕ್ಕಳು ಎದುರಾದಾಗ ಅವರೊಂದಿಗೆ ನಾವು ಹೇಗೆ ನಡೆದುಕೊಳ್ಳಬೇಕು ಎಂದು ಪರೀಕ್ಷೆ ಮಾಡುತ್ತಾನೆ.ಇವರ ಸೇವೆ ಮಾಡುವ ಮುಖಾಂತರ ಬದುಕಿನ ಬ್ಯಾಲೆನ್ಸ್ ಶೀಟ್ ಅನ್ನು ಸರಿ ಮಾಡಿಕೊಳ್ಳಿ ಎಂದು ಅವಕಾಶ ಕೊಡುತ್ತಾನೆ" ಎಂದರು.

ದಿವ್ಯಾಂಗರ ಬುದ್ಧಿಮತ್ತೆ ನಮ್ಮ ಊಹೆಗೂ ಮೀರಿದ್ದು

ದಿವ್ಯಾಂಗರ ಬುದ್ಧಿಮತ್ತೆ ನಮ್ಮ ಊಹೆಗೂ ಮೀರಿದ್ದು

ಅಂಗಾಂಗದ ಕೊರತೆ ಬಿಟ್ಟರೆ, ಎಲ್ಲರನ್ನೂ ಮೀರಿಸುವ ಬುದ್ಧಿ ಶಕ್ತಿ ಅವರಿಗಿದೆ. ಸಾಮಾನ್ಯ ಮನುಷ್ಯರು ತಮ್ಮ ಮೆದುಳನ್ನು ಶೇ. 20ಕ್ಕಿಂತ ಹೆಚ್ಚು ಬಳಸುವುದಿಲ್ಲ. ದಿವ್ಯಾಂಗರ ಬುದ್ಧಿಮತ್ತೆ ನಮ್ಮ ಊಹೆಗೂ ಮೀರಿದ್ದು. ಅದಕ್ಕೆ ಅವರಿಗೆ ಸಂಗೀತ, ಕಲೆ ಹೀಗೆ ಹಲವು ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಪ್ರಧಾನಿ ಮೋದಿ ಗಮನಕ್ಕೆ ತರುತ್ತೇನೆ!

ಪ್ರಧಾನಿ ಮೋದಿ ಗಮನಕ್ಕೆ ತರುತ್ತೇನೆ!

ಸೆನ್ಸ್ ಅಂಡ್ ಎಸೆನ್ಸ್ ಸಂಸ್ಥೆಯ ಸಂಸ್ಥಾಪಕರಾದ ಯಶ್ವಿ ಭಂಡಾರಿ ಹಾಗೂ ರುಷಾಲಿ ದೋಷಿ ಅವರು ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಕಾಲಹರಣ ಮಾಡದೆ, ಬ್ರೈಲ್ ಲಿಪಿಯಲ್ಲಿ ಸಮಾಜದ ಆಗುಹೋಗುಗಳನ್ನು ತಿಳಿಸುವ ಸಲುವಾಗಿ ಪತ್ರಿಕೆಯನ್ನು ಹೊರತರುವ ಮೂಲಕ ಮಾನವೀಯ ಕಳಕಳಿಯನ್ನು ತೋರಿರುವುದು ಸಂತಸ ತಂದಿದೆ. ಈ ಪತ್ರಿಕೆಯನ್ನು ಪ್ರಧಾನಿ ಮೋದಿ ಗಮನಕ್ಕೂ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಟೋಕಿಯೋ ಪ್ಯಾರಾ ಒಲಿಂಪಿಕ್ಸ್‌

ಟೋಕಿಯೋ ಪ್ಯಾರಾ ಒಲಿಂಪಿಕ್ಸ್‌

ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ದೇಶದ ದಿವ್ಯಾಂಗ ಕ್ರೀಡಾಪಟುಗಳ ಸಾಧನೆ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕಾರ್ಯಕ್ರಮದಲ್ಲಿ ದಿವ್ಯಾಂಗ ಪ್ರತಿಭೆ ಬಸವರಾಜ ಉಮ್ರಾಣಿ ಅವರು ಗಣಿತದಲ್ಲಿನ ತಮ್ಮ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸಿ, ಪ್ರಶಂಸೆಗೆ ಪಾತ್ರರಾದರು. ಉಮ್ರಾಣಿ ಅವರನ್ನು ಸಿಎಂ ಬೊಮ್ಮಾಯಿ ಅಭಿನಂದಿಸಿದರು.

ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಗಣಿತದಲ್ಲಿ ತಮ್ಮ ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ ಬಸವರಾಜ ಉಮರಾಣಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದು ವಿಶೇಷವಾಗಿತ್ತು.

Recommended Video

Imran Khan ಆಯ್ತು ಈಗ ತಾಲಿಬಾನ್ ಬೆಂಬಲಕ್ಕೆ ನಿಂತ ಪಾಕಿಸ್ತಾನದ ಸ್ಟಾರ್ ಕ್ರಿಕೆಟಿಗ | Oneindia Kannada

English summary
Chief Minister Basavaraj Bommai said a new plan for the development of the disabled will be devised.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X