ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಸಿಹಿ ಸುದ್ದಿ: ಹಾಲಿನ ದರ ಏರಿಕೆಗೆ ಬ್ರೇಕ್ ಹಾಕಿದ ಮುಖ್ಯಮಂತ್ರಿ

|
Google Oneindia Kannada News

ಬೆಂಗಳೂರು, ಸೆಪ್ಟಂಬರ್ 26: ನಿರಂತರ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ದಸರಾ ಹಬ್ಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಹಾಲಿನ ಬೆಲೆ ಏರಿಕೆ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸದೆ ಕೆಎಂಎಫ್‌ಗೆ ಕೆಲವು ಸಲಹೆ ನೀಡಿದ್ದಾರೆ.

ಕರ್ನಾಟಕದ ಜನರು ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ತೆರಿಗೆ ಹೇರಿಕೆಯಿಂದ ಕಂಗಾಲಾಗಿದ್ದ ಸಾರ್ವಜನಿಕರು ಪ್ರತಿ ಲೀಟರ್ ಹಾಲಿನ ಬೆಲೆಯೂ ಹೆಚ್ಚಾಗಲಿದೆಯೇ? ಎಂಬ ಆತಂಕಕ್ಕೆ ಒಳಗಾಗಿದ್ದರು. ಇದಕ್ಕೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಪ್ರತಿ ಲೀಟರ್ ಹಾಲಿನ ದರ 3 ರೂ. ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇ ಕಾರಣವಾಗಿತ್ತು.

Nandini Milk Price : ಕರ್ನಾಟಕದಲ್ಲಿ ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಕೆNandini Milk Price : ಕರ್ನಾಟಕದಲ್ಲಿ ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಕೆ

ಆದರೆ ಮುಖ್ಯಮಂತ್ರಿ ಈ ಪ್ರಸ್ತಾವನೆ ಸಲ್ಲಿಕೆಯಾಗಿ ತಿಂಗಳುಗಳು ಕಳೆದರೂ ಈ ಬಗ್ಗೆ ಯಾವುದೇ ಅಂತಿನ ನಿರ್ಧಾರ ಪ್ರಕಟಿಸಿರಲಿಲ್ಲ. ಇದೀಗ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸದೇ, ಗ್ರಾಹಕರಿಗೆ ಹೊರೆಯಾಗುವಂತೆ ಹಾಲಿನ ಬೆಲೆ ಹೆಚ್ಚಿಸುವುದು ಸರಿಯಲ್ಲ. ಹೀಗಾಗಿ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಿ. ಆ ಮೂಲಕ ಹಾಲು ಉತ್ಪನಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುವಂತೆ ಕೆಎಂಎಫ್‌ಗೆ ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

CM Bommai says no to KMF milk price hike

ಹಾಲಿನ ದರ 5 ರೂ. ಹೆಚ್ಚಿಸಲು ಪ್ರಸ್ತಾವನೆ

ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸುಮಾರು ಏಳೆಂಟು ತಿಂಗಳುಗಳ ಹಿಂದೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಪ್ರತಿ ಲೀಟರ್ ಹಾಲಿನ ಬೆಲೆಯನ್ನು 5ರೂ.ಗೆ ಹೆಚ್ಚಿಸಬೇಕು ಎಂದು ಪ್ರಸ್ತಾವನೆ ಸಲ್ಲಿಸಿತ್ತು. ಈ ಬಗ್ಗೆ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈ ಮಧ್ಯೆ ಪ್ರತಿ ಲೀಟರ್ ಹಾಲಿನ ಬೆಲೆಯನ್ನು 3 ರೂ.ಗೆ ಹೆಚ್ಚಿಸಲು ಕೆಎಂಎಪ್‌ ನಿರ್ಧರಿಸಿತ್ತು ಎನ್ನಲಾಗಿದೆ. ಈ ಹೆಚ್ಚುವರಿ ನಿಯಮ ಜಾರಿಯಾಗುವ ಮೊದಲೇ ಸರ್ಕಾರ ಕೆಎಂಎಪ್‌ಗೆ ಬ್ರೇಕ್ ಹಾಕುವ ಮೂಲಕ ರಾಜ್ಯ ಜನರಿಗೆ ಸಿಹಿ ಸುದ್ದಿ ನೀಡಿದೆ.

English summary
Good news for Karnataka people as Chief minister Basavaraj Bommai sadi no to KMF milk price hike. Karnataka government has declined milk rate hike proposal
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X