Get Updates
Get notified of breaking news, exclusive insights, and must-see stories!

ಹುಬ್ಬಳ್ಳಿ ಕಿಮ್ಸ್ ರೀತಿ ಬೆಳಗಾವಿ ಬಿಮ್ಸ್ ಹಳ್ಳಿ ಜನರ ಸೇವೆ ಮಾಡಬೇಕು: ಸಿಎಂ ಬೊಮ್ಮಾಯಿ

ಬೆಳಗಾವಿ, ಡಿಸೆಂಬರ್ 23: ಹುಬ್ಬಳ್ಳಿ ಕಿಮ್ಸ್ ಮಾದರಿಯಲ್ಲಿ ಬೆಳಗಾವಿಯ ಬಿಮ್ಸ್ ಬೆಳೆಯಬೇಕು. ಇದೇ ದೂರದೃಷ್ಟಿಯಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು. ಇದನ್ನು ಸಾಕಾರಗೊಳಿಸುವ ಜವಾಬ್ದಾರಿ ಆಸ್ಪತ್ರೆ ನಿರ್ದೇಶಕರ ಮೇಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 100 ಹಾಸಿಗೆಗಳ ತಾಯಿ - ಮಕ್ಕಳ ಆಸ್ಪತ್ರೆ ಹಾಗೂ 50 ಬೆಡ್ ಗಳ ಐಸಿಯು ಘಟಕ ನಿರ್ಮಾಣ ಕಾಮಗಾರಿಗೆ ಗುರುವಾರ ಸಂಜೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಬೆಳಗಾವಿ ಜಿಲ್ಲೆ ಬೆಳೆಯುತ್ತಿರುವ ನಗರ. ಈ ಭಾಗದಲ್ಲಿ ಸರ್ಕಾರದ ಒಂದು ವೈದ್ಯಕೀಯ ಸಂಸ್ಥೆ ಹಾಗೂ ಕಾಲೇಜು ಇರಬೇಕೆನ್ನುವ ಬೇಡಿಕೆ ಬಹಳ ದಿನಗಳಿಂದಲೂ ಇದ್ದರೂ ಸಾದ್ಯವಾಗಿರಲಿಲ್ಲ. ಬೆಳಗಾವಿ ಜಿಲ್ಲೆ ವ್ಯಾಪ್ತಿಯಲ್ಲಿ ಒಂದು ಸರ್ಕಾರಿ ಮೆಡಿಕಲ್ ಕಾಲೇಜಿನ ಅಗತ್ಯ ಇತ್ತು. ಈ ಸಂಸ್ಥೆಯಲ್ಲಿ ನಿರ್ದೇಶಕರು ಮತ್ತು ಸಿಬ್ಬಂದಿ ನಡುವೆ ಹೊಂದಾಣಿಕೆ ಇರಲಿಲ್ಲ. ಇಂತಹ ಸಂದರ್ಭದಲ್ಲಿ ನೆರವಾದವರು ಕೆಎಲ್ ಇ ಸಂಸ್ಥೆಯವರು ಎಂದು ಬೊಮ್ಮಾಯಿ ಶ್ಲಾಘಿಸಿದರು.

ಪ್ರಾಮಾಣಿಕ ಕೆಲಸಕ್ಕೆ ಉದಾಹರಣೆ ನೀಡಿದ ಸಿಎಂ

ಪ್ರಾಮಾಣಿಕ ಕೆಲಸಕ್ಕೆ ಉದಾಹರಣೆ ನೀಡಿದ ಸಿಎಂ

ಒಬ್ಬರು ಐಎಎಸ್ ಅಧಿಕಾರಿ ಪ್ರಾಮಾಣಿಕವಾಗಿದ್ದರೆ ಏನೆಲ್ಲ ಸೇವೆ ಮಾಡಬಹುದು ಅನ್ನುವುದಕ್ಕೆ ಆದಿತ್ಯ ಆಮ್ಲಾ ಬಿಸ್ವಾಸ್ ಆಡಳಿತ ಉದಾಹರಣೆ. ಅದಕ್ಕಾಗಿ ಎಲ್ಲ ವಿಭಾಗಗಳನ್ನೂ ಒಳಗೊಂಡು ಇದು ಪ್ರಮುಖ ಆರೋಗ್ಯ ಕೇಂದ್ರ ಆಗಲಿದೆ. ಅವರಿಗೆ ಸಹಾನುಭೂತಿ ನೀಡಬೇಕು. ರೋಗಿಗಳು ದೇವರಿದ್ದಂತೆ. ಸೃಷ್ಟಿಯಲ್ಲಿ ಭಗವಂತನನ್ನು ಹೊರತುಪಡಿಸಿ ಮಾನವನ ನೋವನ್ನು ಕಡಿಮೆ ಮಾಡುವ ಗುಣ ಇರುವುದು ವೈದ್ಯರಿಗೆ ಮಾತ್ರ ಎಂದರು.

ಅಪೌಷ್ಠಿಕತೆ ದೇಶದ ದೊಡ್ಡ ಸಮಸ್ಯೆ

ಅಪೌಷ್ಠಿಕತೆ ದೇಶದ ದೊಡ್ಡ ಸಮಸ್ಯೆ

ಗ್ರಾಮೀಣ ಭಾಗದವರು ಹಣ ಇಲ್ಲದೇ ಆಸ್ಪತ್ರೆಗೆ ಹೋಗುವುದಿಲ್ಲ. ಮಹಿಳೆಯರಿಗೆ ಎದೆ ನೋವು ಕಾಣಿಸಿಕೊಂಡರೆ ಎರಡು ದಿನ ಅಮೃತಾಂಜನ ಹಚ್ಚಿಕೊಂಡು ಮಲಗಿಕೊಂಡು ಬಿಡುತ್ತಾರೆ. ಅವರಿಗೆ ಸೂಕ್ತ ಸಮಯದಲ್ಲಿ ಆರೋಗ್ಯ ಸೇವೆ ದೊರೆತರೆ ಅವರ ಆರೋಗ್ಯ ಸುಧಾರಿಸುತ್ತದೆ. ಹೊಲದಲ್ಲಿ ಕೂಲಿ ಮಾಡುವ ತಾಯಿ ತನ್ನ ಮಗುವಿಗೆ ಯಾವುದೇ ಪೌಷ್ಟಿಕ ಆಹಾರ ಕೊಡುವುದಿಲ್ಲ. ತಾಯಿ ಮಕ್ಕಳಿಗೆ ಪೌಷ್ಟಿಕ ಆಹಾರ ದೊರೆತರೆ ಬಹಳಷ್ಟು ರೋಗಗಳು ದೂರವಾಗುತ್ತದೆ. ಅಪೌಷ್ಟಿಕತೆ ದೇಶಕ್ಕೆ ದೊಡ್ಡ ಮಟ್ಟದ ಸಮಸ್ಯೆಗೆ ಕಾರಣಗಲಿದೆ. ಪೌಷ್ಟಿಕತೆಗೆ ನಮ್ಮ ಸರ್ಕಾರ ವಿಶೇಷ ಆಹಾರ ನೀಡಲಾಗುತ್ತಿದೆ. ಆರು ಜಿಲ್ಲೆಗಳಲ್ಲಿ ಅಪೌಷ್ಟಿಕತೆ ಇದೆ. ಅದು ರಾಜ್ಯದ ಸರಾಸರಿ ಬರುವವರೆಗೂ ಪೌಷ್ಟಿಕ ಆಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಐದು ಜಿಲ್ಲೆಗಳಲ್ಲಿ ಸಂಚಾರಿ ಆರೋಗ್ಯ ತಪಾಸಣೆ

ಐದು ಜಿಲ್ಲೆಗಳಲ್ಲಿ ಸಂಚಾರಿ ಆರೋಗ್ಯ ತಪಾಸಣೆ

ಆರೋಗ್ಯ ಇಲಾಖೆಯಿಂದ ಹಲವಾರು ಯೋಜನೆಯನ್ನು ಪ್ರಥಮ ಬಾರಿ ಮಾಡುತ್ತಿದ್ದೇವೆ. ಸಿಎಂ ಆರೋಗ್ಯ ತಪಾಸಣೆ ಯೋಜನೆಯಡಿ 5 ಜಿಲ್ಲೆಗಳಲ್ಲಿ ಮೊಬೈಲ್ ಆರೋಗ್ಯ ಚೆಕ್ ಅಪ್ ವಾಹನ ಮೂಲಕ ತಪಾಸಣೆ ಮಾಡಲಾಗುತ್ತದೆ. 60 ವರ್ಷ ಮೀರಿದ ಎಲ್ಲರಿಗೂ ಉಚಿತ ಕಣ್ಣಿನ ತಪಾಸಣೆ ಮಾಡಿ ಕನ್ನಡಕ ನೀಡಲಾಗುತ್ತದೆ‌.‌ ಬಡವರಿಗೆ ಬೆಳಕನ್ನು ಕೊಡಬೇಕೆಂದು ಈ ಕಾರ್ಯಕ್ರಮ ರೂಪಿಸಲಾಗಿದೆ. ಜತೆಗೆ ಹುಟ್ಟು ಕಿವುಡರಿಗೆ ವಿಶೇಷ ಸಾಧನವನ್ನು ಇಂಪ್ಲಾಂಟ್ ಮಾಡುವ 500 ಕೋಟಿ ರೂ ಮೊತ್ತದ ಯೋಜನೆ ರೂಪಿಸಿದ್ದೇವೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ

ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ

ಸರ್ಕಾರ ಪ್ರತಿವರ್ಷ ಸಾವಿರಾರು ಕೋಟಿ ರೂಪಾಯಿಯನ್ನು ಮೆಡಿಕಲ್ ಕಾಲೇಜು ನಡೆಸಲು ಹೂಡಿಕೆ ಮಾಡುತ್ತದೆ. ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ. ಸರ್ಕಾರ ಒಬ್ಬ ವೈದ್ಯಕೀಯ ವಿದ್ಯಾರ್ಥಿಗೆ 5-10 ಹತ್ತು ಲಕ್ಷ ಖರ್ಚು ಮಾಡುತ್ತೇವೆ. ಆದರೆ ವೈದ್ಯಕೀಯ ಶಿಕ್ಷಣ ಮುಗಿದ ಮೇಲೆ ವೈದ್ಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು.

ಆದರೆ ಜನ ಸಾಮಾನ್ಯರು ಜ್ವರ ಬಂದರೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಬೇಕು ಅನ್ನುವಂತಹ ಪರಿಸ್ಥಿತಿ ಬಂದಿದೆ. ಅಮೆರಿಕಾ ಮಾದರಿ ವೈದ್ಯಕಿಯ ವ್ಯವಸ್ಥೆ ಇಲ್ಲೂ ಜಾರಿಗೆ ಬರುತ್ತಿದೆ. ನಮ್ಮ ದೇಶಕ್ಕೆ ಇದು ಒಳ್ಳೆಯ ಬೆಳವಣಿಗೆಯಲ್ಲ. ನಮ್ಮ ದೇಶದ 130 ಕೋಟಿ ಜನರಲ್ಲಿ ಬಡವರು, ಅನಕ್ಷರಸ್ಥರು ಇದ್ದಾರೆ. ವಿದ್ಯಾವಂತರು ಬಡವರ ಸೇವೆ ಮಾಡುವ ಮೂಲಕ ಒಳ್ಳೆಯ ಕೆಲಸ ಮಾಡಬೇಕು. ಆಗ ಇಡೀ ನಾಡು ಸುಧಾರಿಸುತ್ತದೆ. ಆರೋಗ್ಯ ಕರ್ನಾಟಕವನ್ನು ನೀವು ನಿಜ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಸಚಿವರಾದ ಗೋವಿಂದ ಕಾರಜೋಳ, ಡಾ. ಸುಧಾಕರ್, ಶಾಸಕ ಅನಿಲ್‌ ಬೆನಕೆ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+