ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲೆ ಆರಂಭದ ಮೊದಲ ದಿನ ಸಿಎಂ ಬಸವರಾಜ ಬೊಮ್ಮಾಯಿಗೆ ಮಕ್ಕಳು ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಆ. 23: ಶಾಲೆಗಳು ಪ್ರಾರಂಭವಾಗಿರುವುದರಿಂದ ಮಕ್ಕಳಿಗೆ ನಿಜವಾದ ಸ್ವಾತಂತ್ರ್ಯ ದೊರೆತಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಒಂದೂವರೆ ವರ್ಷಗಳ ನಂತರ ಶಾಲೆಗಳು ಆರಂಭಗೊಂಡ ಮೊದಲ ದಿನ ಇಂದು (ಸೋಮವಾರ) ಮಲ್ಲೇಶ್ವರದ 18ನೇ ಕ್ರಾಸ್‌ನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದ ನಂತರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಕೋವಿಡ್ ಮೊದಲ ಹಾಗೂ ಮತ್ತು 2ನೇ ಅಲೆಯಲ್ಲಿ ಶಿಕ್ಷಣ ನೀಡುವುದು ಸವಾಲಿನ ಕೆಲಸವಾಗಿದೆ. ಶಿಕ್ಷಣದಲ್ಲಿ ಹಲವಾರು ಪ್ರಯೋಗಗಳಾಗಿದ್ದು, ಆನ್‌ಲೈನ್ ಹಾಗೂ ಶಾಲಾ ಆವರಣದಲ್ಲಿ ಶಿಕ್ಷಣ ಕೊಡಲು ಪ್ರಯತ್ನಗಳು ನಡೆದಿವೆ. ಮಕ್ಕಳೊಂದಿಗೆ ನಿರಂತರ ಸಂಪರ್ಕದಲ್ಲಿರಲು ಪ್ರಯತ್ನ ಮಾಡಲಾಗಿದೆ ಎಂದ ಮುಖ್ಯಮಂತ್ರಿಗಳು, ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣ ಇಲಾಖೆ ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದೆ. ಮಕ್ಕಳಿಗೆ ತೊಂದರೆಯಾಗದಂತೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.

ಜೊತೆಗೆ ಮೊದಲ ದಿನ ತರಗತಿಗೆ ಹಾಜರಾಗುವ ಮೊದಲು ಮಕ್ಕಳು ತಮ್ಮೊಂದಿಗೆ ಏನು ಹೇಳಿದ್ರು ಎಂಬುದನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾತಿನಲ್ಲಿಯೇ ಮುಂದಿದೆ ಓದಿ...!

ಶಾಲೆ ತೆರೆಯಲು ಪೂರ್ವ ಸಿದ್ಧತೆ

ಶಾಲೆ ತೆರೆಯಲು ಪೂರ್ವ ಸಿದ್ಧತೆ

ತಜ್ಞರ ಸಮಿತಿ ವರದಿಯಾಧಾರದಲ್ಲಿ 15 ದಿನಗಳ ಹಿಂದೆಯೇ ಶಾಲೆಗಳನ್ನು ತೆರೆಯುವ ಬಗ್ಗೆ ಘೋಷಣೆ ಮಾಡಲಾಗಿತ್ತು. ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಶಾಲೆ ತೆರೆಯಲು ಪೂರ್ವ ಸಿದ್ಧತೆಗೆ ನಿರಂತರವಾಗಿ ಶ್ರಮಿಸಿದ್ದಾರೆ.

"ಇವತ್ತು ಇಲ್ಲಿನ ಪ್ರಾಂಶುಪಾಲರು, ವಿದ್ಯಾರ್ಥಿಗಳ ಜೊತೆಗೆ ಮಾತನಾಡಿದ್ದೇನೆ. ಈ ಬಗ್ಗೆ ಶಿಕ್ಷಕರು, ಪ್ರಾಂಶುಪಾಲರು ಸಂತೋಷವಾಗಿದ್ದಾರೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮಧ್ಯೆ ಭಾವನಾತ್ಮಕ ಸಂಬಂಧ ಬೆಸೆಯಲು ಇದು ಕಾರಣವಾಗಿದೆ" ಎಂದು ಸಿಎಂ ಬೊಮ್ಮಾಯಿ ಶಾಲೆ ಆರಂಭಿಸಿದ್ದರ ಬಗ್ಗೆ ಮಾತನಾಡಿದರು.

ವಿದ್ಯಾರ್ಥಿಗಳು ಒಬ್ಬರಿಗೊಬ್ಬರು ಬೆರೆಯಲು ಸಾಧ್ಯ

"ಶಾಲೆ ಆರಂಭಿಸಿರುವುದರಿಂದ ವಿದ್ಯಾರ್ಥಿಗಳು ಒಬ್ಬರಿಗೊಬ್ಬರು ಬೆರೆಯಲು ಸಾಧ್ಯವಾಗಿದೆ ಎಂದು ಮಕ್ಕಳು ಅಭಿಪ್ರಾಯಪಟ್ಟಿದ್ದಾರೆ. ಕಲಿಕೆ ಜ್ಞಾನ ಸಂಪಾದನೆಯ ಮಾರ್ಗ. ಮುಕ್ತ ವಾತಾವರಣ ನಿರ್ಮಾಣ ಮಾಡಿದರೆ ಮಾತ್ರ ಜ್ಞಾನ ಸಂಪಾದನೆ ಸಾಧ್ಯವಾಗುತ್ತದೆ. ಮಕ್ಕಳು ಓದಬೇಕು ಎಂದು ಕಿವಿ ಮಾತು ಹೇಳಿದ್ದೇನಲ್ಲದೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸ್ ಮಾಡುವುದನ್ನು ಪಾಲಿಸಬೇಕು" ಎಂದು ತಿಳಿಸಿದ್ದಾಗಿ ಸಿಎಂ ಬೊಮ್ಮಾಯಿ ವಿವರಿಸಿದ್ದಾರೆ.

ಗಡಿ ಜಿಲ್ಲೆಗಳಲ್ಲಿ ಶಾಲೆಗಳ ಪ್ರಾರಂಭ

ಗಡಿ ಜಿಲ್ಲೆಗಳಲ್ಲಿ ಶಾಲೆಗಳ ಪ್ರಾರಂಭ

ಗಡಿ ಜಿಲ್ಲೆಗಳಲ್ಲಿ ಕೋವಿಡ್ 19 ರ ಪ್ರಮಾಣ ಶೇಕಡಾ 2ಕ್ಕಿಂತ ಕಡಿಮೆಯಾದಾಗ ಅಲ್ಲಿಯೂ ಶಾಲೆಗಳನ್ನು ಹಂತ ಹಂತವಾಗಿ ಪ್ರಾರಂಭ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಾಥಮಿಕ ಶಾಲೆಗಳ ಪ್ರಾರಂಭದ ಬಗ್ಗೆ ತಜ್ಞರ ಸಮಿತಿಯ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Recommended Video

ತಾಲಿಬಾನಿಗಳಿಗೆ ಹೆದರಿ ನಾವೇನು ಓಡಿ ಹೋಗಲ್ಲ ಅಂದ್ರು ಜೋ ಬೈಡನ್ | Oneindia Kannada
ನಿರ್ಮಲ ರಾಣಿ ಶಾಲೆಗೆ ಭೇಟಿ

ನಿರ್ಮಲ ರಾಣಿ ಶಾಲೆಗೆ ಭೇಟಿ

ಮಲ್ಲೇಶ್ವರದ ನಿರ್ಮಲ ರಾಣಿ ಶಾಲೆಗೆ ಭೇಟಿ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರ ಶಾಲೆಗಳ ಪ್ರಾರಂಭಕ್ಕೆ ಗಟ್ಟಿ ನಿರ್ಧಾರ ಕೈಗೊಂಡಿತು. ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರಕ್ಕೆ ವಿಶೇಷ ಕಾಳಜಿ ಇದೆ. ಆದರೂ ಶಾಲೆಗಳಲ್ಲಿ ಕೋವಿಡ್ ನಿಯಮಗಳ ಪಾಲನೆ ಜೊತೆಗೆ ಆರೋಗ್ಯ ತಪಾಸಣೆ ಮಾಡಬೇಕು. ಅಪೌಷ್ಟಿಕತೆ ಇದ್ದಲ್ಲಿ ಪೌಷ್ಟಿಕಾಂಶಗಳನ್ನು ನೀಡಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.


21ನೇ ಶತಮಾನ ಜ್ಞಾನದ ಯುಗ. ಜೀವನದ ಕೊನೆ ಉಸಿರಿರುವವರೆಗೂ ನಾವು ವಿದ್ಯಾರ್ಥಿಗಳೇ. ಕಲಿಕೆ ನಿರಂತರ ಪ್ರಕ್ರಿಯೆ. ಶಾಲೆಯಲ್ಲಿ ಕಲಿತು ಪರೀಕ್ಷೆ ಬರೆದರೆ. ಜೀವನದಲ್ಲಿ ಪರೀಕ್ಷೆಗೆ ಒಳಪಟ್ಟು ಕಲಿಯಬೇಕು. ತಾರ್ಕಿಕವಾಗಿ ಚಿಂತನೆ ಮಾಡುವುದನ್ನು ಕಲಿಯಬೇಕು ಎಂದ ಅವರು, ಯಾಕೆ, ಏನು, ಎಲ್ಲಿ, ಎಷ್ಟು ಎಂಬ ಪ್ರಶ್ನೆಗಳನ್ನು ಹಾಕಿಕೊಳ್ಳಬೇಕು. ಈ ಪ್ರಶ್ನೆಗಳು ಯಶಸ್ಸಿನ ಮಂತ್ರಗಳು. ಅದಕ್ಕೆ ಬರುವ ಉತ್ತರಗಳು ಶಾಶ್ವತವಾಗಿ ನೆನೆಪಿನಲ್ಲಿರುತ್ತವೆ. ನೀವು ನಮ್ಮ ದೇಶದ ಭವಿಷ್ಯ. ನೂತನ ಶಿಕ್ಷಣ ನೀತಿಯಿಂದ ಅವಕಾಶಗಳು ಹೆಚ್ಚಿವೆ ಎಂದರಲ್ಲದೆ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

English summary
Chief Minister Basavaraj Bommai opined that children have found real freedom, as the schools have opened. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X