Breaking: ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಜಿಲ್ಲೆಗಳಲ್ಲೂ ಲಾಕ್‌ಡೌನ್ ಇಲ್ಲ

ಬೆಂಗಳೂರು, ಜುಲೈ 21: ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಜಿಲ್ಲೆಗಳಲ್ಲೂ ಇನ್ನುಮುಂದೆ ಲಾಕ್‌ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

Recommended Video

      ಕೊರೊನ ನಿಯಂತ್ರಣಕ್ಕೆ 5T ಸೂತ್ರ ಹೇಳಿದ ಯಡಿಯೂರಪ್ಪ | Oneindia Kannada

      ರಾಜ್ಯದ ಯಾವ ಜಿಲ್ಲೆಗಳಲ್ಲೂ ಲಾಕ್‌ಡೌನ್ ಮಾಡುವುದಿಲ್ಲ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೊರೊನಾ ಸೋಂಕಿನಿಂದ ದೂರವಿರುವುದು ಜನರಿಗೆ ಬಿಟ್ಟ ವಿಚಾರ ಎಂದು ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಖಾಸಗಿ ವಲಯಗಳು ಕೈಜೋಡಿಸಿರುವುದರಿಂದ ತುಂಬಾ ಸಹಾಯವಾಗಿದೆ. ಇಬ್ಬರೂ ಒಟ್ಟಾಗಿ ಹೋರಾಟ ಮಾಡುತ್ತೇವೆ.

      ಬೆಂಗಳೂರಿನ ಎಂಟು ವಲಯಗಳಲ್ಲಿ ಸಚಿವರು ಮತ್ತು ಅಧಿಕಾರಿಗಳನ್ನು ನಿಯುಕ್ತಿ ಮಾಡಲಾಗಿದೆ. ಸ್ಥಳೀಯ ನಿರ್ವಹಣೆ ಬಲ ಪಡಿಸಲು 8 ಸಾವಿರಕ್ಕೂ ಹೆಚ್ಚು ಬೂತ್ ಮಟ್ಟದ ಕಾರ್ಯಪಡೆಯನ್ನು ನಿಯೋಜಿಸಲಾಗಿದೆ.
      ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವೈರಸ್ ಹೆಚ್ಚಾಗಿರುವುದು ಗಮನಕ್ಕೆ ಬಂದಿದೆ.

      CM Yediyurappa Facebook Live Highlights

      ಅನಗತ್ಯ ಟೀಕೆ ಟಿಪ್ಪಣಿ ಬದಲು ರಚನಾತ್ಮಕ ಸಲಹೆ ನೀಡಬೇಕು ಎಂದು ಪ್ರತಿಪಕ್ಷ ಎಲ್ಲಾ ಮುಖಂಡರುಗಳಿಗೆ ಮನವಿ ಮಾಡಿದರು.

      ದೇಶಾದ್ಯಂತ ಕೊವಿಡ್​-19 ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಕೊರೋನಾ ತಹಬದಿಗೆ ತರುವಲ್ಲಿ ಆರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೀಗ, ಇತ್ತೀಚೆಗೆ ಬೆಂಗಳೂರಿನಲ್ಲಿ ಮಾತ್ರ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮೊದಲಿನಷ್ಟು ಕೊರೊನಾ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

      ಕೊರೊನಾ ನಿಯಂತ್ರಣಕ್ಕೆ ಪರಿಹಾರವೊಂದೇ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮಾತ್ರ. ನಾವು ಕಟ್ಟುನಿಟ್ಟಾಗಿ ಈ ನಿಯಮ ಪಾಲಿಸಿದ್ರೆ ಮಾತ್ರ ಕೊರೋನಾ ನಿಯಂತ್ರಿಸಲು ಸಾಧ್ಯವಿಲ್ಲ ಎಂದರು.

      ಹೀಗೆ ಮುಂದುವರಿದ ಅವರು, ಶಾಸಕರು, ಸಚಿವರು, ವೈದ್ಯರು, ಪೊಲೀಸರು ಸೇರಿದಂತೆ ಆಶಾ ಕಾರ್ಯಕರ್ತರು ಹಗಲು ರಾತ್ರಿಯೆನ್ನದೇ ಕೊರೋನಾ ವಿರುದ್ಧ ಹೋರಾಡುತ್ತಿದ್ದಾರೆ.

      ಇವರು ತಮ್ಮ ಪ್ರಾಣದ ಹಂಗು ತೊರೆದು ನಮಗಾಗಿ ಕೆಲಸ ಮಾಡಬೇಕಾದರೇ ನಾವು ಸರ್ಕಾರದ ಕೋವಿಡ್​​-19 ರೂಲ್ಸ್​​ ಮಾಡಲು ಸಾಧ್ಯವಿಲ್ಲ. ನಾವು ಕೊರೊನಾ ನಿಯಂತ್ರಣಕ್ಕೆ ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕೆಲಸ ಮಾಡಲೇಬೇಕು ಎಂದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+