ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಯಡಿಯೂರಪ್ಪ
ಬೆಂಗಳೂರು, ಮೇ 19: ಬಹುಮತವಿಲ್ಲದಿದ್ದರೂ ಅತಿದೊಡ್ಡ ಪಕ್ಷ ಎಂಬ ಕಾರಣಕ್ಕೆ ಸರ್ಕಾರ ರಚನೆ ಮಾಡಿದ್ದ ಬಿಎಸ್ ಯಡಿಯೂರಪ್ಪ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೂರು ದಿನದೊಳಗೆ ಅಧಿಕಾರ ಕಳೆದುಕೊಂಡಿದ್ದಾರೆ.
ಸದನದಲ್ಲಿಂದು ವಿಶ್ವಾಸಮತ ಯಾಚನೆ ಮಾಡದೆ, ಸದನದಿಂದ ಹೊರ ನಡೆದ ಬಿಎಸ್ ಯಡಿಯೂರಪ್ಪ ಅವರು ನೇರವಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲ ವಜುಭಾಯಿ ವಾಲ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ ರಾಜಿನಾಮೆ ಸಲ್ಲಿಸಲು ರಾಜಭವನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ರಾಜಭವನದ ಮುಂದೆ ಕೇಂದ್ರೀಯ ಅರೆಸೇನಾಪಡೆ ನಿಯೋಜನೆ ಮಾಡಲಾಗಿತ್ತು.

ಮೊದಲ ಬಾರಿಗೆ 7 ದಿನಗಳು, ಎರಡನೇ ಬಾರಿಗೆ 39 ತಿಂಗಳು ಹಾಗೂ ಈಗ 55 ಗಂಟೆಗಳ ಬಳಿಕ ಬಿಜೆಪಿ ಸರ್ಕಾರ ಪತನಗೊಂಡಿದೆ. ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿಯಾಗುತ್ತಿದ್ದಾರೆ.












Click it and Unblock the Notifications