ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಯಡಿಯೂರಪ್ಪ

By Mahesh
|
Google Oneindia Kannada News

ಬೆಂಗಳೂರು, ಮೇ 19: ಬಹುಮತವಿಲ್ಲದಿದ್ದರೂ ಅತಿದೊಡ್ಡ ಪಕ್ಷ ಎಂಬ ಕಾರಣಕ್ಕೆ ಸರ್ಕಾರ ರಚನೆ ಮಾಡಿದ್ದ ಬಿಎಸ್ ಯಡಿಯೂರಪ್ಪ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೂರು ದಿನದೊಳಗೆ ಅಧಿಕಾರ ಕಳೆದುಕೊಂಡಿದ್ದಾರೆ.

ಸದನದಲ್ಲಿಂದು ವಿಶ್ವಾಸಮತ ಯಾಚನೆ ಮಾಡದೆ, ಸದನದಿಂದ ಹೊರ ನಡೆದ ಬಿಎಸ್​ ಯಡಿಯೂರಪ್ಪ ಅವರು ನೇರವಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲ ವಜುಭಾಯಿ ವಾಲ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ವಿಶ್ವಾಸ ಮತ ಯಾಚಿಸದೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಬಿಎಸ್ವೈವಿಶ್ವಾಸ ಮತ ಯಾಚಿಸದೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಬಿಎಸ್ವೈ

ಬಿ.ಎಸ್.ಯಡಿಯೂರಪ್ಪ ರಾಜಿನಾಮೆ ಸಲ್ಲಿಸಲು ರಾಜಭವನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ರಾಜಭವನದ ಮುಂದೆ ಕೇಂದ್ರೀಯ ಅರೆಸೇನಾಪಡೆ ನಿಯೋಜನೆ ಮಾಡಲಾಗಿತ್ತು.

CM BS Yeddyurappa submits resignation to Governor Vajubhai Vala

ಮೊದಲ ಬಾರಿಗೆ 7 ದಿನಗಳು, ಎರಡನೇ ಬಾರಿಗೆ 39 ತಿಂಗಳು ಹಾಗೂ ಈಗ 55 ಗಂಟೆಗಳ ಬಳಿಕ ಬಿಜೆಪಿ ಸರ್ಕಾರ ಪತನಗೊಂಡಿದೆ. ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿಯಾಗುತ್ತಿದ್ದಾರೆ.

English summary
CM BS Yeddyurappa submits resignation to Governor Vajubhai Vala today(May 19) and he did not seek trust vote in the assembly session.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X