ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಸಾಲ ಮನ್ನಾ; ಯಡಿಯೂರಪ್ಪ ಮಹತ್ವದ ಟ್ವೀಟ್

|
Google Oneindia Kannada News

ಬೆಂಗಳೂರು, ಫೆಬ್ರವರಿ 28 : "ರೈತರ ಸಾಲ ಮನ್ನಾ ಬಗ್ಗೆ ಆತಂಕ ಬೇಡ. ಸರ್ಕಾರ ರೈತರ ಪರವಾಗಿದ್ದು, ದಾರಿ ತಪ್ಪಿಸುವ ಹೇಳಿಕೆಗಳಿಗೆ ರೈತರು ಕಿವಿಗೊಡಬಾರದು" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.

Recommended Video

Yediyurappa tweets about Farmer's loan waiver

ಶುಕ್ರವಾರ ರಾತ್ರಿ ಟ್ವೀಟ್ ಮಾಡಿರುವ ಯಡಿಯೂರಪ್ಪ, "ರೈತರ ಸಾಲ ಮನ್ನಾ ವಿಷಯವಾಗಿ ಕೆಲವು ಊಹಾಪೋಹಗಳು ಹರಿದಾಡುತ್ತಿದ್ದು, ರೈತರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು" ಎಂದು ಮನವಿ ಮಾಡಿದ್ದಾರೆ.

Astrology: ಸಾಲ- ಋಣ ಬಾಧೆಗೆ ಎಷ್ಟೆಲ್ಲ ಕಾರಣ? ನಿಮಗೂ ಹೀಗಾಗುತ್ತಿದೆಯಾ? Astrology: ಸಾಲ- ಋಣ ಬಾಧೆಗೆ ಎಷ್ಟೆಲ್ಲ ಕಾರಣ? ನಿಮಗೂ ಹೀಗಾಗುತ್ತಿದೆಯಾ?

ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕರ್ನಾಟಕದ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದರು. "ರೈತರ ಸಾಲ ಮನ್ನಾ ಯೋಜನೆಗೆ ತಿಲಾಂಜಲಿ ಇಡಲು ಬಿಜೆಪಿ ಸರ್ಕಾರ ಅಡ್ಡ ದಾರಿ ತುಳಿಯುತ್ತಿರುವುದು ಖಂಡನೀಯ. ರೈತರ ಬಾಳಿಗೆ ರಾಜ್ಯ ಬಿಜೆಪಿ ಸರ್ಕಾರ ಕೊಳ್ಳಿ ಇಡಲು ಮುಂದಾಗಿದೆ" ಎಂದು ಆರೋಪಿಸಿದ್ದರು.

ಪಿಎಲ್‌ಡಿ , ಅಪೆಕ್ಸ್‌ ಬ್ಯಾಂಕಿನಲ್ಲಿರುವ ರೈತರ ಸಾಲ ಬಡ್ಡಿ ಮನ್ನಾ?ಪಿಎಲ್‌ಡಿ , ಅಪೆಕ್ಸ್‌ ಬ್ಯಾಂಕಿನಲ್ಲಿರುವ ರೈತರ ಸಾಲ ಬಡ್ಡಿ ಮನ್ನಾ?

ಎಚ್. ಡಿ. ಕುಮಾರಸ್ವಾಮಿ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡುವಂತೆ ಬಿ. ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, "ರೈತರಿಗೆ ಅನ್ಯಾಯವಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ" ಎಂದು ಘೋಷಣೆ ಮಾಡಿದ್ದಾರೆ.

ಸಾಲಮನ್ನಾ: ಮೀನುಗಾರರಿಗೆ ಬಂಪರ್ ಖುಷಿ ನೀಡಿದ ಯಡಿಯೂರಪ್ಪ ಸಾಲಮನ್ನಾ: ಮೀನುಗಾರರಿಗೆ ಬಂಪರ್ ಖುಷಿ ನೀಡಿದ ಯಡಿಯೂರಪ್ಪ

ಯಡಿಯೂರಪ್ಪ ಹೇಳಿದ್ದೇನು?

ಯಡಿಯೂರಪ್ಪ ಹೇಳಿದ್ದೇನು?

ರೈತರ ಸಾಲ ಮನ್ನಾ ವಿಷಯವಾಗಿ ಕೆಲವು ಊಹಾಪೋಹಗಳು ಹರಿದಾಡುತ್ತಿದ್ದು, ರೈತರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದರು.

ರೈತರಿಗೆ ಅನ್ಯಾಯವಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಸೂಕ್ತ ದಾಖಲೆ ಸಲ್ಲಿಸುವ ಎಲ್ಲ ರೈತರ ಸಾಲ ಮನ್ನಾ ಆಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಸರ್ಕಾರ ರೈತರ ಪರವಾಗಿದ್ದು, ದಾರಿ ತಪ್ಪಿಸುವ ಹೇಳಿಕೆಗಳಿಗೆ ರೈತರು ಕಿವಿಗೊಡಬಾರದು ಎಂದು ವಿನಂತಿ ಮಾಡಿದ್ದಾರೆ.

ತಿಲಾಂಜಲಿ ಇಡುತ್ತಿದೆ

ಎಚ್. ಡಿ. ಕುಮಾರಸ್ವಾಮಿ, "ರೈತರ ಸಾಲ ಮನ್ನಾ' ಯೋಜನೆಗೆ ತಿಲಾಂಜಲಿ ಇಡಲು ಬಿಜೆಪಿ ಸರ್ಕಾರ ಅಡ್ಡ ದಾರಿ ತುಳಿಯುತ್ತಿರುವುದು ಖಂಡನೀಯ" ಎಂದು ದೂರಿದ್ದರು.

ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ

ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ

ಎಚ್. ಡಿ. ಕುಮಾರಸ್ವಾಮಿ ತಮ್ಮ ಟ್ವೀಟ್‌ನಲ್ಲಿ, "ಸಾಲ ಮನ್ನಾದ ಬಗ್ಗೆ ಬಿಜೆಪಿಯ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದಾಗ ಮೀಸಲಿಟ್ಟಿದ್ದ ಇಪ್ಪತ್ತೈದು ಸಾವಿರ ಕೋಟಿ ರೂಪಾಯಿಗಳ ಹಣವನ್ನು ಬಿಜೆಪಿ ಸರ್ಕಾರ ಬೇರೆಡೆಗೆ ವರ್ಗಾಯಿಸಿದೆ" ಎಂದು ದೂರಿದ್ದರು.

ರೈತರ ಪರವಾಗಿ ನಿಲ್ಲುತ್ತೇನೆ

ರೈತರ ಪರವಾಗಿ ನಿಲ್ಲುತ್ತೇನೆ

ಶುಕ್ರವಾರ ಸಂಜೆ ಟ್ವೀಟ್ ಮಾಡಿದ್ದ ಎಚ್. ಡಿ. ಕುಮಾರಸ್ವಾಮಿ, "ಸಾಲ ಮನ್ನಾ ಬಗ್ಗೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ. ರೈತರ ಪರವಾಗಿ ನಿಲ್ಲುತ್ತೇನೆ" ಎಂದು ಹೇಳಿದ್ದರು.

English summary
In a tweet Karnataka chief minister B. S. Yediyurappa clarification on farmer loan waiver.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X