ಬಿ. ಎಸ್. ಯಡಿಯೂರಪ್ಪ ಹೆಲ್ತ್ ಬುಲೆಟಿನ್
ಬೆಂಗಳೂರು, ಆಗಸ್ಟ್ 05: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಹೇಳಿದೆ. ಭಾನುವಾರದಿಂದ ಯಡಿಯೂರಪ್ಪ ಆಸ್ಪತ್ರೆಯಲ್ಲಿದ್ದಾರೆ.
Recommended Video
ಬುಧವಾರ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಯಡಿಯೂರಪ್ಪ ಅವರು ತಮ್ಮ ಕೊಠಡಿಯಿಂದಲೇ ದೈನಂದಿನ ಕಾರ್ಯಚಟುವಟಿಕೆಗಳನ್ನು ಸಹಜವಾಗಿ ನಿರ್ವಹಿಸುತ್ತಿದ್ದಾರೆ ಎಂದು ಆಸ್ಪತ್ರೆ ಹೇಳಿದೆ.
ಆಸ್ಪತ್ರೆಯ ತಜ್ಞ ವೈದ್ಯರುಗಳ ತಂಡ ಯಡಿಯೂರಪ್ಪ ಅವರ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದೆ. ಕೋವಿಡ್ ಸೋಂಕಿತರಾಗಿರುವ ಯಡಿಯೂರಪ್ಪ ಅವರಿಗೆ ಯಾವುದೇ ಸೋಂಕಿನ ಲಕ್ಷಣ ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಧವಾರ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿದರು. ಮಣಿಪಾಲ್ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿರುವ ಯಡಿಯೂರಪ್ಪ ಅವರು ಟಿವಿಯಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಿದರು.
ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿದ್ದಾರೆ. ಸಿದ್ದರಾಮಯ್ಯಗೆ ಇಂದು ಜ್ವರ ಕಡಿಮೆಯಾಗಿದ್ದು ಅವರು ಸಹ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಸಿದ್ದರಾಮಯ್ಯಗೂ ಕೊರೊನಾ ವೈರಸ್ ಸೋಂಕು ದೃಡಪಟ್ಟಿದೆ.












Click it and Unblock the Notifications