ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಿ: ಸಿಎಂ ಸೂಚನೆ

|
Google Oneindia Kannada News

ಬೆಂಗಳೂರು, ಜೂನ್ 5: ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿಯಡಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ನಿವೃತ್ತಿ, ಮರಣ ಅಥವಾ ಇತರ ಕಾರಣಗಳಿಂದ ತೆರವಾಗಿರುವಂತಹ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಅಧಿಕಾರಿಗಳಿಗೆ ತಿಳಿಸಿದರು.

Recommended Video

ಜಿಮ್ ತರಬೇತುದಾರರ ಕಷ್ಟಕ್ಕೆ ಪರಿಹಾರ ಕೊಡಲಿದೆಯೇ ಸರ್ಕಾರ | Oneindia Kannada

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳುವಂತೆ ಸಿ.ಎಂ ಯಡಿಯೂರಪ್ಪ ಸೂಚಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯ ಡಿಜಿಟಲ್ ಅಭಿಯಾನಕ್ಕೆ ಸಿಎಂ ಮೆಚ್ಚುಗೆಮಾಲಿನ್ಯ ನಿಯಂತ್ರಣ ಮಂಡಳಿಯ ಡಿಜಿಟಲ್ ಅಭಿಯಾನಕ್ಕೆ ಸಿಎಂ ಮೆಚ್ಚುಗೆ

ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಪೌರಾಡಳಿತ ಸಚಿವ ನಾರಾಯಣಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

 209 ಕೋಟಿ ರೂಪಾಯಿ ಬಿಡುಗಡೆ

209 ಕೋಟಿ ರೂಪಾಯಿ ಬಿಡುಗಡೆ

ಅಮೃತ್ ಯೋಜನೆಯಡಿ ಕೇಂದ್ರದ ಪಾಲಿನ ಬಾಕಿ ಅನುದಾನ ಪಡೆಯಲು ರಾಜ್ಯದ ಪಾಲಿನ ಭಾಗವಾಗಿ 209 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಹೇಳಿದರು.

ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು

ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು

ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸುವಂತೆ ಸಿ.ಎಂ ಯಡಿಯೂರಪ್ಪ ಸೂಚಿಸಿದರು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಬಳಿ 47.24 ಕೋಟಿ ರೂಪಾಯಿ ಲಭ್ಯವಿದೆ. ಏಪ್ರಿಲ್ ಅಂತ್ಯದ ವರೆಗೆ 12 ನಗರಗಳಲ್ಲಿ ಖಾಸಗಿ ಟ್ಯಾಂಕರುಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗಿದೆ. ಮುಂದಿನ ಎರಡು ತಿಂಗಳಲ್ಲಿ 23 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದ್ದು, ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜನರು ನೀರಿಗಾಗಿ ಪರದಾಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದರು.

ಕೋವಿಡ್-19 ಸಂದರ್ಭದಲ್ಲಿನ ಪೊಲೀಸ್ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿದ ಸಿಎಂಕೋವಿಡ್-19 ಸಂದರ್ಭದಲ್ಲಿನ ಪೊಲೀಸ್ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿದ ಸಿಎಂ

 ಮುನ್ನೆಚ್ಚರಿಕೆ ವಹಿಸಿ

ಮುನ್ನೆಚ್ಚರಿಕೆ ವಹಿಸಿ

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಬರುವ ಅನುದಾನಕ್ಕೆ ಯಾವುದೇ ತೊಡಕಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಸಿಎಂ ಮೆಚ್ಚುಗೆ

ಸಿಎಂ ಮೆಚ್ಚುಗೆ

ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಬಗ್ಗೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

English summary
CM BS Yediyurappa Held Urban Development Department Progress Meeting Today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X