ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿ ಬದಲಾವಣೆ: ಮೊದಲ ಬಾರಿ ಮೌನ ಮುರಿದ ಯಡಿಯೂರಪ್ಪ!

|
Google Oneindia Kannada News

ಬೆಂಗಳೂರು, ಡಿ. 31: ವರ್ಷದ ಕೊನೆಯ ಮಾಧ್ಯಮಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಲವು ಮಹತ್ವದ ವಿಚಾರಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಹೊಸ ವರ್ಷದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಕುರಿತಂತೆ ಮೊದಲ ಬಾರಿ ಮೌನ ಮುರಿದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಮತ್ತೆ ಚರ್ಚೆ ಆರಂಭವಾಗಿರುವ ಈ ಸಂದರ್ಭದಲ್ಲಿ, ಯಡಿಯೂರಪ್ಪ ಅವರ ಪ್ರತಿಕ್ರಿಯೆ ಮಹತ್ವ ಪಡೆದುಕೊಂಡಿದೆ.

ಬ್ರಿಟನ್ ವೈರಸ್ ಆತಂಕದಲ್ಲಿ ಹೊಸ ವರ್ಷಾಚರಣೆ ಮಾಡಬೇಕಾಗಿದೆ. ಹೀಗಾಗಿ ಇಂದಿನಿಂದ ನಾಳೆ (ಜನವರಿ 1, 2021) ಸಂಜೆ 6 ಗಂಟೆಯ ವರೆಗೆ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಮಾಡಲಾಗಿದ್ದು, ಸಾರ್ವಜನಿಕರು ಈ ನಿಯಮ ಪಾಲನೆ ಮಾಡುವಂತೆ ಯಡಿಯೂರಪ್ಪ ಅವರು ನಾಡಿನ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹೊಸ ವರ್ಷದ ಶುಭಾಶಯಗಳನ್ನು ಈಗಲೇ ಕೋರುತ್ತಿದ್ದೇನೆ, ನೂತನ ವರ್ಷದಲ್ಲಿ ಎಲ್ಲರಿಗೂ ಸುಖ ಶಾಂತಿ ನೆಮ್ಮದಿ ತರಲೆಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಶುಭ ಹಾರೈಸಿದರು. ಹಾಗೆ ನಾಯಕತ್ವ ಬದಲಾವಣೆ ಸಿಎಂ ಏನು ಹೇಳಿದ್ದಾರೆ? ಮುಂದಿದೆ ಮಾಹಿತಿ!

ಬಿಜೆಪಿ ಮುಖ್ಯಮಂತ್ರಿ ಬದಲಾವಣೆ

ಬಿಜೆಪಿ ಮುಖ್ಯಮಂತ್ರಿ ಬದಲಾವಣೆ

ರಾಜ್ಯ ಬಿಜೆಪಿಯಲ್ಲಿ ಶುರುವಾಗಿರುವ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲ ಬಾರಿ ಮಾತನಾಡಿದ್ದಾರೆ. ಬಿಜೆಪಿ ಹಿರಿಯ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಹೈಕಮಾಂಡ್ ಕೆಳಗಿಳಿಸಲಿದೆ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದರು. ಅಂದಿನಿಂದ ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಒಳಗೊಳಗೆ ಸುಡುತ್ತಿದೆ. ಹಲವು ಶಾಸಕರು ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡಿದ್ದರು.

ಮುಂದಿನ ಅವಧಿಗೆ ಸಿಎಂ ಯಾರು?

ಮುಂದಿನ ಅವಧಿಗೆ ಸಿಎಂ ಯಾರು?

ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು ನಿಜ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಮೊದಲ ಬಾರಿ ಪ್ರತಿಕ್ರಿಯೆ ಕೊಟ್ಟ ಅವರು, ನಾನು ಕಳೆದ ಒಂದೂವರೆ ವರ್ಷದ ಆಡಳಿತದ ಅವಧಿಯಲ್ಲಿ ಅಸ್ಥಿರತೆ, ಸಿಎಂ ಕುರ್ಚಿಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಬಂದಾಗಲೂ ಸ್ಪಷ್ಟವಾಗಿ ಹೇಳಿದ್ದಾರೆ. ಇನ್ನೆರಡು ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಈ ಬಗ್ಗೆ ನಮ್ಮ ಶಾಸಕರಲ್ಲಿ ಅಥವಾ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಸರ್ಕಾರದ ಸ್ಥಿರತೆ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಯಡಿಯೂರಪ್ಪ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಕೃಷಿ ಸವಕಳಿ ಕಾಯ್ದೆಗಳು

ಕೃಷಿ ಸವಕಳಿ ಕಾಯ್ದೆಗಳು

ಕೃಷಿ ಕಾನೂನುಗಳಿಗೆ ತಿದ್ದುಪಡಿ ವಿರೋಧಿಸಿ ಹೋರಾಟ ಮಾಡುತ್ತಿರುವವರ ಕುರಿತು ಮಾತನಾಡಿರುವ ಯಡಿಯೂರಪ್ಪ ಅವರು, ಎಪಿಎಂಸಿ ಕಾಯ್ದೆ ವಿರುದ್ಧ ಸತ್ಯಾಗ್ರಹ ಮಾಡುವವರು ಆತಂಕ ಪಡಬೇಕಾಗಿಲ್ಲ. ಸವಕಳಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಿ ಸುಧಾರಿತ ಕಾಯ್ದೆಗಳನ್ನಾಗಿ ಮಾಡಲಾಗಿದೆ. ವಿರೋಧ ಪಕ್ಷಗಳು ರೈತರ ಹಾದಿ‌ ತಪ್ಪಿಸುವ ಕೆಲಸ ಮಾಡುತ್ತಿವೆ. ನಮ್ಮ ಪ್ರಧಾನಿ ಮೋದಿ ಅವರನ್ನು ವಿರೋಧ ಪಕ್ಷಗಳು ಟೀಕೆ ಮಾಡಬಹುದು, ಅವರು ರೂಪಿಸಿರುವ ದೂರದೃಷ್ಟಿ ಕಾರ್ಯಗಳನ್ನು ಟೀಕಿಸುವ ಹಾಗಿಲ್ಲ ಎಂದಿದ್ದಾರೆ.

ಚುನಾವಣೆಗಳಲ್ಲಿ ಜಯಭೇರಿ

ಚುನಾವಣೆಗಳಲ್ಲಿ ಜಯಭೇರಿ

ಪ್ರಧಾನಿ ಮೋದಿ ಅವರು ಜಾರಿಗೆ ತಂದಿರುವ ದೂರದೃಷ್ಟಿ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಪ್ರಾಮಾಣಿಕವಾಗಿ ಅನುಷ್ಠಾನ ಮಾಡುತ್ತೇವೆ. ದೇಶಾದ್ಯಂತ ನಡೆದ ಎಲ್ಲ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡುತ್ತಿದೆ. ಪ್ರಧಾನಿ ಮೋದಿ ಅವರ ಸ್ಪೂರ್ತಿದಾಯಕ ಕಾರ್ಯ ಇದಕ್ಕೆಲ್ಲ ಕಾರಣ. ರಾಜ್ಯದಲ್ಲಿ 2019ರ ಉಪಚುನಾವಣೆಯಲ್ಲಿ 12 ಸ್ಥಾನದಲ್ಲಿ ಗೆಲುವು ಸಾಧಿಸಿದ್ದೇವೆ. ಮೊನ್ನೆ ಆರ್.ಆರ್. ನಗರ ಹಾಗೂ ಶಿರಾದ ಉಪಚುನಾವಣೆಯಲ್ಲೂ ಗೆಲುವು ಸಾಧಿಸಿದ್ದೇವೆ.


ಈ ವರೆಗೆ ಜಯಗಳಿಸದ ಕ್ಷೇತ್ರದಲ್ಲೂ ಗೆದ್ದು ಬಿಜೆಪಿಯ ಸಾಮರ್ಥ್ಯ ನಿರೂಪಿಸಲಾಗಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿಯೂ ಪ್ರಗತಿಯ ಚಕ್ರ ಮುನ್ನಡೆಯುವಂತೆ ನೋಡಿಕೊಂಡಿದ್ದೇವೆ. ಸಂಕಷ್ಟದಲ್ಲಿದ್ದ ರೈತರು, ಹೂ ಬೆಳೆಗಾರರು, ಕಾರ್ಮಿಕರು, ಕಟ್ಟಡ ಕಾರ್ಮಿಕರು, ಆಟೋ ಚಾಲಕರು ಸೇರಿ ಅಸಂಘಟಿತ ವಲಯಕ್ಕೆ ನೆರವು ಕೊಟ್ಟಿದ್ದೇವೆ. ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲೂ ನಮ್ಮ ರಾಜ್ಯ ನಂ. 1. ಲಾಕ್‌ಡೌನ್‌ 1.54 ಲಕ್ಷ ಕೋಟಿ ರೂ. ಹೂಡಿಕೆಯಾಗಿದೆ ಎಂದು ವಿದೇಶಿ ಬಂಡವಾಳ ಹೂಡಿಕೆ ಕುರಿತು ಮಾತನಾಡಿದ್ದಾರೆ.

English summary
Chief Minister BS Yediyurappa Press Meet on Dec 31 in Vidhanasoudha Highlights, Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X