5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಯಡಿಯೂರಪ್ಪ ಭಾಷಣ

ಬೆಂಗಳೂರು, ಜುಲೈ 21 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿಗಳು ಫೇಸ್ ಬುಕ್, ಯೂಟ್ಯೂಬ್ ಮೂಲಕ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ. ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ.

BS Yediyurappa To Address State At 4 PM

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಲಾಕ್ ಡೌನ್ ಬುಧವಾರ ಬೆಳಗ್ಗೆ 5 ಗಂಟೆಗೆ ಮುಗಿಯಲಿದೆ. ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರ ಭಾಷಣ ಕುತೂಹಲ ಮೂಡಿಸಿದೆ.

ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 67,420ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ 33,229ಕ್ಕೆ ಏರಿದೆ.

ಕರ್ನಾಟಕದ ಯಾವುದೇ ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ. ಆದ್ದರಿಂದ, ಕೊರೊನಾ ನಿಯಂತ್ರಣಕ್ಕೆ ಕೆಲವು ಮಾರ್ಗಸೂಚಿಗಳನ್ನು ಯಡಿಯೂರಪ್ಪ ಪ್ರಸ್ತಾಪಿಸುವ ನಿರೀಕ್ಷೆ ಇದೆ.

ರಾಜ್ಯದಲ್ಲಿ ಜಾರಿಯಲ್ಲಿರುವ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯ ವರೆಗಿನ ಕರ್ಫ್ಯೂ ಮುಂದುವರೆಸುವ ಕುರಿತು ಯಡಿಯೂರಪ್ಪ ಘೋಷಣೆ ಮಾಡಲಿದ್ದಾರೆ ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+