ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ನರೇಂದ್ರ ಮೋದಿ ತೀರ್ಮಾನ ಸ್ವಾಗತಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ!

|
Google Oneindia Kannada News

ಬೆಂಗಳೂರು, ಜೂ. 07: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತೀರ್ಮಾನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ವಾಗತಿಸಿದ್ದಾರೆ. "ಕೇಂದ್ರ ಸರ್ಕಾರವು ದೇಶದಲ್ಲಿ ಉತ್ಪಾದನೆಯಾಗುವ ಶೇ. 75ರಷ್ಟು ಲಸಿಕೆಯನ್ನು ವಿತರಿಸುವುದರಿಂದ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲು ಸೇವಾ ಶುಲ್ಕವನ್ನು 150 ರೂ. ಗಳಿಗೆ ನಿಗದಿ ಪಡಿಸಿರುವುದರಿಂದ ಲಸಿಕೆ ಅಭಿಯಾನ ಇನ್ನಷ್ಟು ಸುಗಮವಾಗಿ ಮುಂದುವರಿಯಲಿದೆ. ಈ ಕ್ರಮದಿಂದ ಲಸಿಕೆ ಅಭಿಯಾನವನ್ನು ಇನ್ನಷ್ಟು ಬಲಪಡಿಸಲು ಸಾಧ್ಯವಾಗುವುದು ಹಾಗೂ ಕೋವಿಡ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ಇದೊಂದು ಮಹತ್ವಪೂರ್ಣ ಹೆಜ್ಜೆ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ.

'ಸಿಎಂ' ಯಡಿಯೂರಪ್ಪ ಬದಲಾವಣೆ ಇಲ್ಲ ಎನ್ನುತ್ತಲೇ ರಾಜ್ಯ 'ಬಿಜೆಪಿ' ಸಮಿತಿ ರಚಿಸಿದ್ದು ಯಾಕೆ? 'ಸಿಎಂ' ಯಡಿಯೂರಪ್ಪ ಬದಲಾವಣೆ ಇಲ್ಲ ಎನ್ನುತ್ತಲೇ ರಾಜ್ಯ 'ಬಿಜೆಪಿ' ಸಮಿತಿ ರಚಿಸಿದ್ದು ಯಾಕೆ?

ಇದರೊಂದಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಣೆಯನ್ನು ನವೆಂಬರ್‌ ತಿಂಗಳವರೆಗೆ ವಿಸ್ತರಿಸಿರುವುದನ್ನು ಶ್ಲಾಘಿಸಿರುವ ಸಿಎಂ ಯಡಿಯೂರಪ್ಪ ಅವರು, "ಈ ಕ್ರಮವು ಕೋವಿಡ್ 19ರ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬಡವರನ್ನು ಹಸಿವಿನ ದವಡೆಯಿಂದ ಪಾರು ಮಾಡುವುದು" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

CM BS Yediyurappa welcomes pm modi announcement on vaccine allocation

ಇಂದು ಸಂಜೆ (ಜೂ.07) ರಾಷ್ಟ್ರದ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಪ್ರಧಾನಿ ಮೋದಿ ಅವರು, "ಜೂನ್ 21ರಿಂದ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಉಚಿತ ಲಸಿಕೆ ಪೂರೈಸಲಿದೆ" ಎಂದು ಹೇಳಿದ್ದರು. ಮುಂದಿನ ಎರಡು ವಾರಗಳ ಬಳಿಕ ಕೇಂದ್ರವೇ ಲಸಿಕೆ ನೀಡಲಿದೆ. ಶೇ.25ರಷ್ಟು ಲಸಿಕೆಗಳನ್ನು ಖಾಸಗಿ ಆಸ್ಪತ್ರೆ ಖರೀಸಬಹುದು, ಹಣವಿದ್ದವರು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಬಹುದು. ರಾಜ್ಯ ಸರ್ಕಾರಗಳ ಲಸಿಕೆ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸಲಿದೆ ಎಂದಿದ್ದರು.

Recommended Video

ನನ್ನ ಮಾತನ್ನು ಕೇಳಲು ಮೋದಿಗೆ 4 ತಿಂಗಳು ಬೇಕಾಯ್ತು ಎಂದ ದೀದಿ | Mamata Banerjee | Modi | Oneindia Kannada

ಜೂನ್ 21 ರಿಂದ ಕೊರೊನಾವೈರಸ್ ಲಸಿಕೆಯನ್ನು ಉಚಿತವಾಗಿ ಹಾಕಿಸಲು ಕೇಂದ್ರೀಕೃತ ವಿತರಣೆಯನ್ನು ಮತ್ತೆ ಆರಂಭಿಸುವುದಾಗಿ ದೇಶದ ಜನರಿಗೆ ಮೋದಿ ಅದೇ ಸಂದರ್ಭದಲ್ಲಿ ಭರವಸೆ ಕೊಟ್ಟಿದ್ದರು.

English summary
Chief Minister BS Yediyurappa welcomes prime minister Narendra Modi's announcement on vaccine allocation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X