ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತುಳು ರಾಜ್ಯ ಭಾಷೆಯಾಗಲು ಪರಿಶೀಲಿಸಿ ಕ್ರಮ : ಸಿಎಂ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಜನವರಿ 5: ''ತುಳು ರಾಜ್ಯ ಭಾಷೆಯಾಗಲು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು, ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಅಕಾಡೆಮಿಯ ಮನವಿಯನ್ನು ಅಭ್ಯಸಿಸಿ ಸೂಕ್ತ ನಿರ್ಧಾರವನ್ನು ಪ್ರಕಟಿಸಲಾಗುವುದು'' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಅವರು ಮಂಗಳವಾರ ಬೆಳಿಗ್ಗೆ ಮುಖ್ಯಮಂತ್ರಿಯವರನ್ನು ಭೇಟಿ ನೀಡಿ, ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು.

ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಮಾತನಾಡಿ, ''ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರವು ಪುರಸ್ಕರಿಸಿದ್ದು ಭೇಟಿ ಫಲಪ್ರದವಾಗಿದೆ'' ಎಂದರು.

CM BSY assurance on Tulu as State official Language

**

ಕೇಂದ್ರ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗೆ ಬಲ : ಸುರೇಶ್ ಕುಮಾರ್

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್‌ಸಾರ್ ಅವರು ಬೆಂಗಳೂರಿನಲ್ಲಿ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರದಿಂದ ಜಾರಿಯಾಗಲಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸಹ ನ್ಯಾಯ ಸಿಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

CM BSY assurance on Tulu as State official Language

ಮುಂದಿನ 15 ದಿನಗಳ ಒಳಗೆ ಈ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ ಆನಂತರ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಯನ್ನ ಬಗೆಹರಿಸಲಾಗುವುದು ಎಂದು ತಿಳಿಸಿದರು.

Recommended Video

ಗೋಲ್ಡ್ ಖರೀದಿ ಮಾಡೋರಿಗೆ ಶಾಕಿಂಗ್ ನ್ಯೂಸ್..! | Oneindia Kannada

ಈ ಸಂದರ್ಭದಲ್ಲಿ ಅಕಾಡೆಮಿಯ ಅಧ್ಯಕ್ಷರು ತುಳು ಭಾಷೆ ಅಧಿಕೃತವಾಗಿ ರಾಜ್ಯ ಭಾಷೆಯಾಗಬೇಕು ಎಂಬ ಧ್ವನಿಗೆ ತನ್ನ ಸಹಮತವನ್ನು ವ್ಯಕ್ತಪಡಿಸಿದ್ದಾರೆ.

English summary
CM BS Yediyurappa has given assurance on making Tulu as one of the State official Language said Dayananda G Kathalsar, president of Karnataka Tulu Sahitya Academy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X