Karnataka CM Change: ಲೋಕಸಭಾ ಚುನಾವಣೆ 2024 ಫಲಿತಾಂಶ: ಕೈ ಪಾಳಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಗುಸು ಗುಸು...
ಬೆಂಗಳೂರು ಜೂನ್ 3: ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳಲು ಇನ್ನೇನು ಕೇವಲ ಒಂದೇ ಒಂದು ದಿನ ಬಾಕಿ ಇದೆ. ಮಂಗಳವಾರ (ಜೂನ್ 4) ರಂದು ಫಲಿತಾಂಶ ಹೊರಬೀಳಲಿದ್ದು ಪ್ರಬಲ ಪಕ್ಷಗಳ ಭವಿಷ್ಯ ನಿರ್ಧಾರವಾಗಲಿದೆ.
ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ. ವಿಧಾನಸಭೆ ಚುನಾವಣೆ ಪೂರ್ವ ಕಾಂಗ್ರೆಸ್ ನೀಡಿದ ಭರವಸೆಗಳು ಜಾರಿಗೆ ಬಂದ ಬೆನ್ನಲ್ಲೇ ಈ ಬಾರಿ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಗಾಗಿ ಸೋಲು ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿವೆ.

ರಾಜ್ಯ ರಾಜಕಾರಣದಲ್ಲಿ ಈ ಬಾರಿ ಫಲಿತಾಂಶ ಹೇಗಿರಲಿದೆ ಎನ್ನುವ ಚರ್ಚೆಗಳು ಕಾಂಗ್ರೆಸ್ ಪಾಳಯದಲ್ಲಿ ನಡೆದಿವೆ. ಈ ಬಗ್ಗೆ ಭಾನುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರವಾಗಿ ಮಾತುಕತೆಗಳು ನಡೆದಿವೆ. ಸಮೀಕ್ಷೆಗಳ ಬ್ಗೆ ಚರ್ಚೆ ಮಾಡಲಾಗಿದೆ.
ಕೆಲವರು ತಮ್ಮ ಕ್ಷೇತ್ರದಲ್ಲಿ ಪರಿಸ್ಥಿತಿ ಹೇಗಿತ್ತು ಎಂಬ ವಿಚಾರವನ್ನೂ ಪ್ರಸ್ತಾಪಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಸಮೀಕ್ಷೆಗಳ ಭವಿಷ್ಯ ನಿಜವಾಗಲು ಸಾಧ್ಯವಿಲ್ಲ ಬದಲಾಗಿ ಎರಡಂಕಿಯ ದಾಟುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಗೆಲ್ಲುವ ನಿರೀಕ್ಷೆಯಲ್ಲಿ ಹೈಕಮಾಂಡ್
ರಾಜ್ಯದಲ್ಲಿ ಕಾಂಗ್ರೆಸ್ ಜಾರಿಗೆ ತಂದ ಗ್ಯಾರಂಟಿಗಳು ಪಕ್ಷವನ್ನು ಗೆಲ್ಲಿಸಲಿವೆ ಎಂಬ ನಿರೀಕ್ಷೆಯಲ್ಲಿ ಹೈಕಮಾಂಡ್ ದೆ. ಆದರೆ ಸಮೀಕ್ಷೆಗಳು ಬೇರೆಯದ್ದೇ ಭವಿಷ್ಯ ನುಡಿದಿರುವುದರಿಂದ ಕಾಂಗ್ರೆಸ್ ಪಾಳಯದಲ್ಲಿ ಆತಂಕ ಶುರುವಾಗಿದೆ. ಜೂನ್ 1ರಂದು ಬಿಡುಗಡೆಯಾದ ಚುನಾವಣೋತ್ತರ ಸಮೀಕ್ಷಾ ವರದಿ ಪ್ರಕಾರ ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಜೊತೆಗೆ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯುವುದರೊಂದಿಗೆ ಭಾರೀ ಪೈಪೋಟಿ ನೀಡಲಿದೆ.
ಹೀಗಾದಲ್ಲಿ ಕಾಂಗ್ರೆಸ್ ಭಾರಿ ದೊಡ್ಡ ಅಘಾತ ಆಗೋದರಲ್ಲಿ ಅನುಮಾನವೇ ಇಲ್ಲ. ಒಂದು ವೇಳೆ ಕಾಂಗ್ರೆಸ್ ಎರಡಂಕಿಯಷ್ಟೂ ಸ್ಥಾನ ಹೆಚ್ಚಾಗಿ ಪಡೆಯದೇ ಇದ್ದಲ್ಲಿ ಸಿಎಂ ಬದಲಾವಣೆ ಮಾಡುವ ಮಾತುಗಳು ಕೈ ಪಾಳಯದ ಆಂತರಿಕ ವಲಯದಲ್ಲಿ ಕೇಳಿ ಬಂದಿವೆ ಎಂಬ ಮೂಲಗಳು ತಿಳಿಸಿವೆ. ಆದರೆ ಈ ವಿಚಾರ ಬಹಿರಂಗವಾಗಿ ಚರ್ಚೆಯಾಗಿಲ್ಲ.

ಸಿಎಂ ಬದಲಾವಣೆ
ಇನ್ನೂ ಚುನಾವಣೆ ಪ್ರಚಾರದಲ್ಲಿ ಒಂದು ವೇಳೆ ಹೆಚ್ಚಿನ ಸ್ಥಾನಗಳು ಬಾರದೇ ಇದ್ದರೆ ಸಿಎಂ ಬದಲಾವಣೆಯಾಗುತ್ತಾರೆಂದು ಅಭ್ಯರ್ಥಿಗಳೇ ಮತದಾರರ ಮುಂದೆ ಹೇಳಿಕೊಂಡಿರುವುದು. ಇದೀಗ ಇದಕ್ಕೆ ಸಾಥ್ ನೀಡುವಂತೆ ಸಮೀಕ್ಷೆಗಳ ವರದಿ ಬಹಿರಂಗವಾಗಿದೆ.
ಅಲ್ಲದೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಎರಡು ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಮೇಲಿನ ಆರೋಪ ಅವರ ಸೋಲಿಗೆ ದಾರಿಯಾಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಸಮೀಕ್ಷೆಗಳಲ್ಲಿ ಹಾಸನದಲ್ಿ ಜೆಡಿಎಸ್ ಪಕ್ಷ ಗೆಲ್ಲಲಿದೆ ಎನ್ನಲಾಗಿದೆ.
ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲುತ್ತಾ ಅಥವಾ ಹೆಚ್ಚು ಸ್ಥಾನಗಳೊಂದಿಗೆ ತೀವ್ರ ಪೈಪೋಟಿಯೊಂದಿಗೆ ಸೋಲುತ್ತಾ ಎನ್ನುವ ಕುತೂಹಲ ಮೂಡಿದೆ. ಒಟ್ಟಿನಲ್ಲಿ ಕಾಂಗ್ರೆಸ್ ಎಲ್ಲದಕ್ಕೂ ಸಿದ್ಧತೆ ಮಾಡಿಕೊಂಡಂತೆ ಕಾಣಿಸುತ್ತಿದೆ. ಆದರೆ ಂದು ವೇಳೆ ಎರಡಂಕಿ ಸ್ಥಾನವನ್ನೂ ಕಾಂಗ್ರೆಸ್ ಪಡೆಯದೇ ಹೋದಲ್ಲಿ ಸಿಎಂ ಬದಲಾಗಬಹುದು ಎನ್ನುವ ಮಾತುಗಳು ಮಾತ್ರ ದೃಢವಾಗಿರುವುದು ಸುಳ್ಳಲ್ಲ.
-
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ











Click it and Unblock the Notifications