Cm Change: ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲಿದ್ದೇನೆ: ಡಿಸಿಎಂ ಡಿ.ಕೆ ಶಿವಕುಮಾರ್
Cm Change: ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ರೀತಿ ಇರುವಾಗಲೇ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದೆಹಲಿ ಪ್ರವಾಸದಲ್ಲಿ ರಾಜಕಾರಣ ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವಾಗ ದೆಹಲಿ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.

ಬಜೆಟ್ ಸಭೆಯ ನಡುವೆ ದೆಹಲಿ ಭೇಟಿ ಬಗ್ಗೆ ಕೇಳಿದಾಗ ಹಾಗೂ ರಾಹುಲ್ ಗಾಂಧಿ ನಿಮ್ಮನ್ನು ಕರೆಯುತ್ತಿದ್ದಾರೆಯೇ ಎಂದು ಎಂದಾಗ, "ಭೇಟಿ ಮಾಡುವ ಎಲ್ಲಾ ಹೆಸರನ್ನು ಹೇಳಲು ಆಗುವುದಿಲ್ಲ. ನಿಮಗೆ ಏಕೆ ಇಷ್ಟು ಕುತೂಹಲ. ನಾನು ಉಪಮುಖ್ಯಮಂತ್ರಿ ಅಷ್ಟೇ ಅಲ್ಲ, ಕೆಪಿಸಿಸಿ ಅಧ್ಯಕ್ಷ ಕೂಡ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಮಾರ್ಚ್ 10 ಕ್ಕೆ 6 ವರ್ಷವಾಗುತ್ತದೆ. ನಮ್ಮ ಸಂಸದರನ್ನು, ನಾಯಕರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ನಾನು ಭೇಟಿ ಮಾಡುತ್ತಾ ಇರುತ್ತೇನೆ, ಆಗ ನನ್ನ ಕಷ್ಟ, ದುಃಖ, ದುಮ್ಮಾನ, ನಿಮ್ಮ ಸಂತೋಷ, ಬಯಕೆ ಎಲ್ಲಾ ಹೇಳುತ್ತಾ ಇರುತ್ತೇನೆ ಎಂದಿದ್ದಾರೆ.
ನಿಮ್ಮ ಇಲಾಖೆಗೆ ಸಂಬಂಧಿದಂತೆ ಬಜೆಟ್ ಪೂರ್ವಸಿದ್ಧತಾ ಸಭೆ ಕರೆದಿದ್ದು, ನೀವು ದೆಹಲಿ ಹೋಗುತ್ತಿದ್ದೀರಿ ಎಂದು ಕೇಳಿದಾಗ, ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಳ್ಳುತ್ತಿದ್ದೇನೆ. ನೀರಾವರಿ ಇಲಾಖೆಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿದ್ದು, ಮಂಗಳವಾರದ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ನನಗಿಂತ ಸಿಎಂ ಅವರಿಗೆ ನೀರಾವರಿ ಯೋಜನೆಗಳ ಬಗ್ಗೆ ಹೆಚ್ಚು ಗೊತ್ತಿದೆ. ಮೇಕೆದಾಟು ಯೋಜನೆ ಬಗ್ಗೆ ಅಧಿಕಾರಿಗಳು ಭೇಟಿ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
-
Karnataka Tax: ಕರ್ನಾಟಕದಿಂದ ಮತ್ತೆ ನಮ್ಮ ತೆರಿಗೆ - ನಮ್ಮ ಹಕ್ಕು ಅಭಿಯಾನದ ಸುಳಿವು ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ












Click it and Unblock the Notifications