Get Updates
Get notified of breaking news, exclusive insights, and must-see stories!

Cm Change: ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲಿದ್ದೇನೆ: ಡಿಸಿಎಂ ಡಿ.ಕೆ ಶಿವಕುಮಾರ್

Cm Change: ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ರೀತಿ ಇರುವಾಗಲೇ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದೆಹಲಿ ಪ್ರವಾಸದಲ್ಲಿ ರಾಜಕಾರಣ ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವಾಗ ದೆಹಲಿ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.

CM Change Buzz DCM D K Shivakumar Says He Will Meet Congress High Command in Delhi

ಬಜೆಟ್‌ ಸಭೆಯ ನಡುವೆ ದೆಹಲಿ ಭೇಟಿ ಬಗ್ಗೆ ಕೇಳಿದಾಗ ಹಾಗೂ ರಾಹುಲ್‌ ಗಾಂಧಿ ನಿಮ್ಮನ್ನು ಕರೆಯುತ್ತಿದ್ದಾರೆಯೇ ಎಂದು ಎಂದಾಗ, "ಭೇಟಿ ಮಾಡುವ ಎಲ್ಲಾ ಹೆಸರನ್ನು ಹೇಳಲು ಆಗುವುದಿಲ್ಲ. ನಿಮಗೆ ಏಕೆ ಇಷ್ಟು ಕುತೂಹಲ. ನಾನು ಉಪಮುಖ್ಯಮಂತ್ರಿ ಅಷ್ಟೇ ಅಲ್ಲ, ಕೆಪಿಸಿಸಿ ಅಧ್ಯಕ್ಷ ಕೂಡ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಮಾರ್ಚ್‌ 10 ಕ್ಕೆ 6 ವರ್ಷವಾಗುತ್ತದೆ. ನಮ್ಮ ಸಂಸದರನ್ನು, ನಾಯಕರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ನಾನು ಭೇಟಿ ಮಾಡುತ್ತಾ ಇರುತ್ತೇನೆ, ಆಗ ನನ್ನ ಕಷ್ಟ, ದುಃಖ, ದುಮ್ಮಾನ, ನಿಮ್ಮ ಸಂತೋಷ, ಬಯಕೆ ಎಲ್ಲಾ ಹೇಳುತ್ತಾ ಇರುತ್ತೇನೆ ಎಂದಿದ್ದಾರೆ.

ನಿಮ್ಮ ಇಲಾಖೆಗೆ ಸಂಬಂಧಿದಂತೆ ಬಜೆಟ್ ಪೂರ್ವಸಿದ್ಧತಾ ಸಭೆ ಕರೆದಿದ್ದು, ನೀವು ದೆಹಲಿ ಹೋಗುತ್ತಿದ್ದೀರಿ ಎಂದು ಕೇಳಿದಾಗ, ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಳ್ಳುತ್ತಿದ್ದೇನೆ. ನೀರಾವರಿ ಇಲಾಖೆಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿದ್ದು, ಮಂಗಳವಾರದ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ನನಗಿಂತ ಸಿಎಂ ಅವರಿಗೆ ನೀರಾವರಿ ಯೋಜನೆಗಳ ಬಗ್ಗೆ ಹೆಚ್ಚು ಗೊತ್ತಿದೆ. ಮೇಕೆದಾಟು ಯೋಜನೆ ಬಗ್ಗೆ ಅಧಿಕಾರಿಗಳು ಭೇಟಿ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+