ಸಿ.ಎಂ ಬದಲಾವಣೆ ಫಿಕ್ಸ್: ಹರಿಯಾಣ ಫಲಿತಾಂಶದ ಮೇಲೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ?
ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಬದಲಿ ನಿವೇಶನ ಪಡೆದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟದಲ್ಲಿದ್ದಾರೆ. ಈಗಾಗಲೇ ಬದಲಿ ನಿವೇಶನಗಳನ್ನು ಹಿಂದಿರುಗಿಸಿದ್ದರೂ, ಅವರ ಮೇಲೆ ಕೇಳಿ ಬಂದಿರುವ ಆರೋಪ ಇನ್ನೂ ಮುಗಿದಿಲ್ಲ. ಅದರ ವಿಚಾರಣೆಯೂ ಸಹ ನಡೆಯುತ್ತಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಖಚಿತ ಎನ್ನುವ ಸುದ್ದಿಗಳು ಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ಸಿ.ಎಂ ನೇಮಿಸುವ ಲೆಕ್ಕಾಚಾರ ಜೋರಾಗಿದೆ ಎಂದು ಹೇಳಲಾಗುತ್ತಿದೆ.
ದೇಶದಲ್ಲಿ ಮುಂದಿನ ದಿನಗಳಲ್ಲಿ ಸಾಲು ಸಾಲು ಚುನಾವಣೆ ಇದೆ. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕವು ಪ್ರಮುಖ ರಾಜ್ಯವಾಗಿದೆ. ದೇಶದಲ್ಲಿ ಹಲವು ಕಾರಣಗಳಿಂದ ಕರ್ನಾಟಕ ತನ್ನದೇ ಆದ ಗರಿಮೆಯನ್ನು ಬೆಳೆಸಿಕೊಂಡಿದೆ. ದಕ್ಷಿಣ ಭಾರತದ ಹೆಬ್ಬಾಗಿಲಾಗಿ, ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಕರ್ನಾಟಕ ಮೊದಲಿನಿಂದಲೂ ಇದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕಾಂಗ್ರೆಸ್ ನೆರೆಯ ರಾಜ್ಯ ತೆಲಂಗಾಣದಲ್ಲೂ ಅಧಿಕಾರದ ಗದ್ದುಗೆ ಮೇಲೆರಿದೆ. ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ, ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಹಾಕುವ ಲೆಕ್ಕಾಚಾರ ಬಿಜೆಪಿಯದ್ದು. ಆದರೆ, ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಪ್ಲಾನ್ ಬಿ ಯೊಂದನ್ನು ರೆಡಿ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ. ಅದೇ ಕರ್ನಾಟಕಕ್ಕೆ ಮುಂದೆ ದಲಿತ ಸಿ.ಎಂ ಎನ್ನುವುದು.

ನಾಳೆ ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇದಾದ ನಂತರ ಹರಿಯಾಣದಲ್ಲಿ ಗೆದ್ದರೆ ಅಲ್ಲಿನ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆ ಜೋರಾಗಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆಯೂ ಚರ್ಚೆ ನಡೆಯಲಿದೆ. ಈ ಎರಡೂ ವಿಷಯ ಒಂದು ಹಂತಕ್ಕೆ ಬಂದ ಮೇಲೆ ರಾಜ್ಯದ ಮುಖ್ಯಮಂತ್ರಿ ಬದಲಾವಣೆಯೂ ಚರ್ಚೆಯಾಗುವ ಸಾಧ್ಯತೆ ದಟ್ಟವಾಗಿದೆ. ದಸರಾ ಹಬ್ಬ ಮುಗಿದ ಮೇಲೆ ಸಿ.ಎಂ ಬದಲಾವಣೆ ಬಹುತೇಕ ಸ್ಪಷ್ಟ ರೂಪವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ.
ಕರ್ನಾಟಕಕ್ಕೆ ದಲಿತ ಸಿ.ಎಂ: ಕರ್ನಾಟಕಕ್ಕೆ ದಲಿತ ಸಿ.ಎಂ ಬೇಕು ಎನ್ನುವುದು ಹಲವು ವರ್ಷಗಳ ಆಗ್ರಹ. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯನ್ನು ನೇಮಕವಾದರೆ, ಅದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ. ಕಳೆದ ಒಂದು ವರ್ಷದಿಂದಲೂ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಮುಂದೆ ಮುಖ್ಯಮಂತ್ರಿ ಬದಲಾವಣೆಯಾದರೆ, ದಲಿತ ಸಿ.ಎಂ ಆಗಬೇಕು ಎನ್ನುವ ಆಗ್ರಹ ಇದೆ.
ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ: ರಾಜ್ಯದಲ್ಲಿ ಮುಂದೆ ಮುಖ್ಯಮಂತ್ರಿ ಬದಲಾವಣೆಯಾದರೆ, ಸತೀಶ್ ಜಾರಕಿಹೊಳಿ ಅವರು ಸಿ.ಎಂ ಆಗಲಿದ್ದಾರೆ ಎನ್ನಲಾಗುತ್ತಿದೆ. ಕಳೆದ ಹಲವು ದಿನಗಳಿಂದ ಸತೀಶ್ ಜಾರಕಿಹೊಳಿ ಅವರ ಹೆಸರು ಗಟ್ಟಿಯಾಗಿ ಕೇಳಿ ಬರುತ್ತಿದೆ. ಸತೀಶ್ ಅವರು ಎರಡು ಬಾರಿ ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿ ಮಾಡಿ ಬಂದ ಮೇಲೆ ಈ ಚರ್ಚೆ ಇನ್ನೂ ಜೋರಾಗಿದೆ. ರಾಜ್ಯದ ಹಲವು ಪ್ರಭಾವಿ ನಾಯಕರು ಹಾಗೂ ವಿರೋಧ ಪಕ್ಷದ ನಾಯಕರು ಅವರನ್ನು ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ.

ದೇಶದಲ್ಲಿ ಸಾಲು ಸಾಲು ಚುನಾವಣೆ: ದೇಶದಲ್ಲಿ ಮುಂದಿನ ದಿನಗಳಲ್ಲಿ ಸಾಲು ಸಾಲು ಚುನಾವಣೆಗಳು ನಡೆಯಲಿವೆ. ಇವುಗಳಲ್ಲಿ ಪ್ರಮುಖ ರಾಜ್ಯಗಳಲ್ಲೂ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆಗಳನ್ನು ಇರಿಸುತ್ತಿದೆ ಎಂದು ಹೇಳಲಾಗುತ್ತಿದೆ. ಇದೀಗ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ನಾಳೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಅಂದರೆ ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮುಂದಿನ ದಿನಗಳಲ್ಲಿ ದೇಶದ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ದೆಹಲಿಯಲ್ಲಿ ಚುನಾವಣೆ ನಡೆಯಲಿವೆ. ಅಲ್ಲದೇ ಈ ರಾಜ್ಯಗಳಲ್ಲಿ ಚುನಾವಣೆ ಮುಗಿಯುವ ವೇಳೆಗೆ ಮತ್ತಷ್ಟು ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications