Siddaramaiah: ಸಿದ್ದರಾಮಯ್ಯ ಅವಧಿ ಬಗ್ಗೆ ಸಚಿವರ ಅಚ್ಚರಿ ಹೇಳಿಕೆ !
CM Change: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯ ಬಗ್ಗೆ ಸಚಿವರಾದ ಎಂ.ಬಿ ಪಾಟೀಲ್ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಅವರು ರಿಯಾಕ್ಟ್ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆಯ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಈ ಬಗ್ಗೆ ಸಚಿವರು ಮತ್ತೆ ರಿಯಾಕ್ಟ್ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 7 ವರ್ಷಗಳಷ್ಟೇ ಅಲ್ಲ 10 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಇದರ ನಡುವೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಸಹ ರಿಯಾಕ್ಟ್ ಮಾಡಿದ್ದಾರೆ. ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಚಾರ ರಾಜ್ಯದಲ್ಲಿ ಮತ್ತೆ ಚರ್ಚೆಯಾಗುತ್ತಿದೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದ ಒಂದು ವರ್ಷದಿಂದಲೂ ಮುಖ್ಯಮಂತ್ರಿ ಬದಲಾವಣೆಯ ವಿಚಾರ ಮತ್ತೆ ಚರ್ಚೆಗೆ ಬರುತ್ತಲ್ಲೇ ಇದೆ. ಮುಖ್ಯಮಂತ್ರಿ ಹುದ್ದೆಯ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರ ನಡುವೆ 2.5 ವರ್ಷಗಳ ಕಾಲ ಅಧಿಕಾರ ಹಂಚಿಕೆಯಾಗಿದೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಲ್ಲೇ ಇವೆ. ಇದೀಗ ಈ ವಿಷಯ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿಯಾಗಿ 5 ವರ್ಷಗಳ ಕಾಲ ಆಡಳಿತ ಪೂರ್ಣಗೊಳಿಸಿ ದಾಖಲೆ ಬರೆದಿರುವ ಸಿದ್ದರಾಮಯ್ಯ ಅವರು, ಇದೀಗ ಎರಡನೇ ಅವಧಿಯಲ್ಲಿಯೂ ಪೂರ್ಣ ಪ್ರಮಾಣದ ಅಧಿಕಾರ ನಡೆಸಿದರೆ ಹೊಸ ದಾಖಲೆ ಸೃಷ್ಟಿಯಾಗಲಿದೆ.

ಎರಡು ಅವಧಿ ಪೂರ್ಣವಾಗಿ ಅಧಿಕಾರ ನಡೆಸಿದ ಕರ್ನಾಟಕದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಗೆ ಅವರು ಪಾತ್ರರಾಗಲಿದ್ದಾರೆ. ಆದರೆ ಈ ಬಾರಿ ಹಲವು ಚರ್ಚೆಗಳು ನಡೆಯುತ್ತಿದ್ದು. ಸಚಿವರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿ ಹುದ್ದೆಯ ವಿಚಾರವಾಗಿ ಅಧಿಕಾರ ಹಂಚಿಕೆಯಾಗಿರುವ ಬಗ್ಗೆ ಗೊತ್ತಿಲ್ಲ ಎಂದಿದ್ದ ಜಿ. ಪರಮೇಶ್ವರ್ ಅವರು ಇದೀಗ ಮತ್ತೊಮ್ಮೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ. ಹೈಕಮಾಂಡ್ ಅವರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ಸಂದರ್ಭದಲ್ಲಿ ನಾವು ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಐದು ವರ್ಷ ಅಧಿಕಾರ ಪೂರೈಸಲಿದ್ದಾರೆ ಎಂದು ಅಂದುಕೊಂಡಿದ್ದೆವು. ಸಿದ್ದರಾಮಯ್ಯ ಅವರೇ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ನಾನೂ ಕೂಡ ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಪೂರ್ಣ ಅವಧಿ ಅಧಿಕಾರ ನಡೆಸಲಿ ಅಂತ ನಾನೂ ಕೂಡ ಹಾರೈಸುತ್ತೇನೆ ಎಂದಿರುವುದು ಚರ್ಚೆಗೆ ಕಾರಣವಾಗಿದೆ. ಅತ್ತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಹ ಮಾರ್ಮಿಕವಾಗಿ ಪೋಸ್ಟ್ ಮಾಡುತ್ತಿದ್ದು. ಚರ್ಚೆ ಜೋರಾಗುವುದಕ್ಕೆ ಕಾರಣವಾಗಿದೆ. ಇನ್ನು ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆಯೂ ಚರ್ಚೆಗಳು ನಡೆದಿವೆ.
ಈ ಬೆಳವಣಿಗೆಗಳನ್ನು ನೋಡಿದರೆ ಮುಂದಿನ ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ಹುದ್ದೆಯಿಂದ ಡಿ.ಕೆ ಶಿವಕುಮಾರ್ ಅವರನ್ನು ಬಿಡುಗಡೆ ಮಾಡಿ ಮುಖ್ಯಮಂತ್ರಿ ಸ್ಥಾನ ಕೊಡಲಿದ್ದಾರೆಯೇ ಎನ್ನುವ ಬಗ್ಗೆಯೂ ಚರ್ಚೆ ನಡೆದಿದೆ. ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರಾಗಿರುವುದು ಎಲ್ಲವೂ ಒಂದಕ್ಕೊಂದು ತಳಕು ಹಾಕಿಕೊಳ್ಳುತ್ತಿವೆ. ಆದರೆ, ಸಿ.ಎಂ ಬದಲಾವಣೆಯ ಬಗ್ಗೆ ಹೈಕಮಾಂಡ್ ಇಲ್ಲಿಯ ವರೆಗೆ ಯಾವುದೇ ಸುಳಿವನ್ನು ನೀಡಿಲ್ಲ. ಹೀಗಾಗಿ ಕುತೂಹಲ ಮುಂದುವರಿದಿದೆ.












Click it and Unblock the Notifications