ಕೆ.ಎನ್.ರಾಜಣ್ಣ ಅವರು 'ಬಾಯಿ ಮುಚ್ಕೊಂಡಿರಿ' ಎಂಬ ಎಚ್ಚರಿಕೆ ಸಂದೇಶ ಪಾಲಿಸಿದ್ರೆ ಒಳ್ಳೆಯದು: ಟಿ.ಬಿ.ಜಯಚಂದ್ರ
ಬೆಂಗಳೂರು, ಫೆಬ್ರವರಿ, 23: ರಾಜ್ಯದಲ್ಲು ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಸಚಿವ ಕೆ.ಎನ್.ರಾಜಣ್ಣ ಅವರು ಈ ವಿಚಾರವನ್ನು ಪ್ರಸ್ತಾಪ ಮಾಡಿ ಗಮನ ಸೆಳೆಯುತ್ತಲೇ ಇದ್ದಾರೆ. ಈ ಬಗ್ಗೆ ಅವರು ಬಹಿರಂಗವಾಗಿ ಹೇಳಿಕೆ ನೀಡುತ್ತಲೇ ಇದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಟಿ.ಬಿ.ಜಯಚಂದ್ರ ಅವರು ರಾಜಣ್ಣ ಆಕ್ರೊಶ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಟಿ.ಬಿ.ಜಯಚಂದ್ರ ಅವರು, ಈಗ ಬದಲಾವಣೆ ಬಗ್ಗೆ ಯಾವ ಚರ್ಚೆಯೂ ನಡೆದಿಲ್ಲ ಎಂದಯ ಎಂದು ಹೇಳು ಮೂಲಕ ಕೆ.ಎನ್.ರಾಜಣ್ಣಗೆ ತಿರುಗೇಟು ನೀಡಿದ್ದಾರೆ.

ನನ್ನ ಅನುಭವದಲ್ಲಿ ಯಾವ ಬದಲಾವಣೆಯೂ ಆಗುತ್ತಿಲ್ಲ. ನಮ್ಮೆಲ್ಲರ ಗಮನ ಸ್ಥಳೀಯ ಚುನಾವಣೆಗಳ ಮೇಲಿದೆ. ಹೈಕಮಾಂಡ್ ಸಹ ಚುನಾವಣೆಯ ಮೇಲೆಯೇ ಗಮನವನ್ನು ಕೇಂದ್ರೀಕರಿಸಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಸ್ವಂತ ರಾಜ್ಯದಲ್ಲಿ ಎಲ್ಲರೂ ಬಾಯಿ ಮುಚ್ಚಿಕೊಳ್ಳಿ ಎಂದು ಹೇಳಿದ್ದಾರೆ. ನಾವೆಲ್ಲರೂ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು. ಖರ್ಗೆ ಅವರ ಎಚ್ಚರಿಕೆಯ ನಂತರ ಎಲ್ಲಾ ಗೊಂದಲಗಳೂ ನಿವಾರಣೆಯಾಗಿವೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಕರ್ನಾಟಕದಲ್ಲಿ ಯಾವ ಚರ್ಚೆಗಳೂ ಆಗಿಲ್ಲ. ಬೇರೆ ರಾಜ್ಯಗಳಲ್ಲಿ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ. ಖರ್ಗೆ ಅವರು ಎಚ್ಚರಿಕೆ ನೀಡಿದ ಹೇಳಿದ ಬಳಿಕ ಬೇರೆ ರಾಜ್ಯಗಳಲ್ಲಿ ಬದಲಾವಣೆಯಾಗಿದೆ. ಆದರೆ, ಕರ್ನಾಟಕದ ಬಗ್ಗೆ ಅವರು ಏನನ್ನೂ ಹೇಳಿಲ್ಲ. ಶಾಸಕರಾಗಲಿ, ಹಿರಿಯ ನಾಯಕರಾಗಲಿ, ಮಂತ್ರಿಗಳಾಗಲಿ ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಹೇಳಿದರು.
2028ರಲ್ಲಿ ನಡೆಯುವ ಚುನಾವಣೆಯಲ್ಲಿ ತಾವೇ ಸಿಎಂ ಅಭ್ಯರ್ಥಿ ಎಂದು ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಡಿ.ಕೆ. ಶಿವಕುಮಾರ್ ಪಕ್ಷದ ಅಧ್ಯಕ್ಷರಾಗಿರುವುದರಿಂದ ಕಾರ್ಯಕರ್ತರಿಗೆ ಆತ್ಮವಿಶ್ವಾಸ ತುಂಬಲು ಕೆಲವೊಮ್ಮೆ ಈ ರೀತಿ ಹೇಳಿಕೆ ನೀಡಬೇಕಾಗುತ್ತದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
ಪಕ್ಷದ ಅಧ್ಯಕ್ಷರಾಗಿರುವವರು ಕಾರ್ಯಕರ್ತರಿಗೆ ಆತ್ಮವಿಶ್ವಾಸ ತುಂಬುವ ಜವಾಬ್ದಾರಿ ಹೊಂದಿರುತ್ತಾರೆ. ಅಲ್ಲದೆ, ಅವರು ಹೈಕಮಾಂಡ್ ಜೊತೆ ನಿರಂತರ ಸಂಪರ್ಕದಲ್ಲಿರುತ್ತಾರೆ. ಆದ್ದರಿಂದ ಪಕ್ಷವನ್ನು ಹೇಗೆ ಮುನ್ನಡೆಸಬೇಕು ಎಂಬುದು ಅವರ ಶೈಲಿಗೆ ಬಿಟ್ಟಿದ್ದು. ಅದರಲ್ಲಿ ತಪ್ಪು ಹುಡುಕುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
2028ರಲ್ಲಿ ಏನಾಗುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. 138 ಸ್ಥಾನಗಳನ್ನು ಗೆಲ್ಲುವ ಮೂಲಕ ಜನರು ನಮಗೆ ಅಧಿಕಾರ ನೀಡಿದ್ದಾರೆ. ಅವರ ವಿಶ್ವಾಸವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಿದೆ ಅಂತಾ ಜಯಚಂದ್ರ ಹೇಳಿದ್ದಾರೆ.
ಇನ್ನು ಇದೇ ವೇಳೆ ತುಮಕೂರು ಉಸ್ತುವಾರಿ ಸಚಿವರ ಬಗ್ಗೆ ಯಾರು ಆಕ್ಷೇಪ ಎತ್ತಿದ್ದಾರೆ ಎಂದು ಪ್ರಶ್ನಿಸಿದರು. ಎಸ್.ಆರ್.ಶ್ರೀನಿವಾಸ್ ಮಾತನಾಡಿರುವುದು ಸಣ್ಣ ವಿಚಾರ ಎಂದು ಹೇಳಿದರು. ತುಮಕೂರು ಡೈರಿ ವಿಚಾರದಲ್ಲಿ ನಾನೂ ಇದ್ದೆ. ಎಲ್ಲರೂ ಕುಳಿತು ಶಾಸಕರ ಸಭೆ ಕರೆದು ತೀರ್ಮಾನ ಮಾಡೋಣ ಎನ್ನುವ ಮಾತಾಗಿತ್ತು. ಆದರೆ ನಾನು ಕಾಂಗ್ರೆಸ್ ಸಮಾವೇಶಕ್ಕೆಂದು ಬೆಳಗಾವಿಗೆ ಹೋಗಿದ್ದೆ. ಆ ವೇಳೆ ತಕ್ಷಣ ಚುನಾವಣೆ ಘೋಷಣೆಯಾದ್ದರಿಂದ ಅವರಿಗೆ ತಿಳಿಸಲು ಸಾಧ್ಯ ಆಗಲಿಲ್ಲ. ಅವರೇ ನಿರ್ಧಾರ ತೆಗೆದುಕೊಂಡಿದ್ದಾರೆ. ಅದು ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.












Click it and Unblock the Notifications