ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿ ಯಶಸ್ವಿ ಸಂಧಾನ, ಜಾರಕಿಹೊಳಿ ಬ್ರದರ್ಸ್ ರೋಷ ಶಮನ

|
Google Oneindia Kannada News

Recommended Video

ಕೊನೆಗೂ ಎಚ್ ಡಿ ಕುಮಾರಸ್ವಾಮಿ ಸಂಧಾನ ಯಶಸ್ವಿ | ಜಾರಕಿಹೊಳಿ ಬ್ರದರ್ಸ್ ಕೋಪ ಶಮನ? | Oneindia Kannada

ಬೆಂಗಳೂರು, ಸೆಪ್ಟೆಂಬರ್ 18 : ಒಂದು ವಾರದ ರಾಜಕೀಯ ಹೈಡ್ರಾಮಕ್ಕೆ ತೆರೆ ಬಿದ್ದಿದೆ. ಜಾರಕಿಹೊಳಿ ಸಹೋದರರ ಜೊತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡೆಸಿದ ಮಾತುಕತೆ ಫಲ ನೀಡಿದೆ. ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಸದ್ಯಕ್ಕೆ ಭದ್ರವಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಎಚ್.ಡಿ.ಕುಮಾರಸ್ವಾಮಿ ಅವರು ಸತೀಶ್ ಜಾರಕಿಹೊಳಿ ಅವರ ಜೊತೆ ಸಂಧಾನ ಸಭೆ ನಡೆಸಿದರು. ಈ ಸಭೆ ಫಲ ನೀಡಿದ್ದು, ಜಾರಕಿಹೊಳಿ ಸಹೋದರರ ಬೇಡಿಕೆ ಈಡೇರಿಸಲು ಕುಮಾರಸ್ವಾಮಿ ಒಪ್ಪಿಗೆ ನೀಡಿದರು.

ಜಾರಕಿಹೊಳಿ ಸಹೋದರರಿಗೆ ಸಿದ್ದರಾಮಯ್ಯ 5 ಪ್ರಶ್ನೆಗಳುಜಾರಕಿಹೊಳಿ ಸಹೋದರರಿಗೆ ಸಿದ್ದರಾಮಯ್ಯ 5 ಪ್ರಶ್ನೆಗಳು

ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, 'ನಮ್ಮ ಬೇಡಿಕೆ ಈಡೇರಿಸುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಹಂತ-ಹಂತವಾಗಿ ಎಲ್ಲಾ ಸಮಸ್ಯೆ ಬಗೆಹರಿಯಲಿದೆ' ಎಂದು ಹೇಳಿದರು.

ರೆಬೆಲ್ ಸ್ಟಾರ್ ಸತೀಶ್ ಜಾರಕಿಹೊಳಿಗೆ ಹೈಕಮಾಂಡ್‌ನಿಂದ ಕರೆರೆಬೆಲ್ ಸ್ಟಾರ್ ಸತೀಶ್ ಜಾರಕಿಹೊಳಿಗೆ ಹೈಕಮಾಂಡ್‌ನಿಂದ ಕರೆ

ಸಭೆಯ ಬಳಿಕ ಮಾತನಾಡಿದ ಸಿ.ಎಸ್.ಪುಟ್ಟರಾಜು ಅವರು, 'ಎಲ್ಲಾ ಅಸಮಾಧಾನ ಬಗೆಹರಿದಿದೆ. ಸರ್ಕಾರ 5 ವರ್ಷಗಳನ್ನು ಪೂರ್ಣಗೊಳಿಸಲಿದೆ. ಮೈತ್ರಿ ಸರ್ಕಾರದಲ್ಲಿ ಸಣ್ಣ-ಪುಟ್ಟ ಅಸಮಾಧಾನ ಇತ್ತು ಎಲ್ಲವೂ ಬಗೆಹರಿದಿದೆ. ಸಮ್ಮಿಶ್ರ ಸರ್ಕಾರ ನಡೆಸುವುದರಲ್ಲಿ ಕುಮಾರಸ್ವಾಮಿ ಪಿಎಚ್‌ಡಿ ಮಾಡಿದ್ದಾರೆ' ಎಂದರು.

ಜಾರಕಿಹೊಳಿ ಸಹೋದರರು ಬಿಜೆಪಿ ಸೇರಿದರೆ ಆಗುವ 5 ಲಾಭಗಳುಜಾರಕಿಹೊಳಿ ಸಹೋದರರು ಬಿಜೆಪಿ ಸೇರಿದರೆ ಆಗುವ 5 ಲಾಭಗಳು

ಬೆಳಗಾವಿ ರಾಜಕಾರಣ

ಬೆಳಗಾವಿ ರಾಜಕಾರಣ

ಸಭೆಯ ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, 'ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಯಾರೂ ಹಸ್ತಕ್ಷೇಪ ಮಾಡಬಾರದು ಎಂಬುದು ನಮ್ಮ ಬೇಡಿಕೆಯಾಗಿತ್ತು. ಇದಕ್ಕೆ ಕುಮಾರಸ್ವಾಮಿ ಒಪ್ಪಿಗೆ ನೀಡಿದ್ದಾರೆ. ಈಗಾಗಲೇ ಹಸ್ತಕ್ಷೇಪವಾಗಿದೆ. ಪದೇ-ಪದೇ ಇದು ನಡೆಯಬಾರದು ಎಂದು ಹೇಳಿದ್ದೇವೆ. ಇದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ' ಎಂದರು.

ಉದ್ಯಮ, ರಾಜಕೀಯ : ಜಾರಕಿಹೊಳಿ ಸಹೋದರರ ಪ್ರಭಾವವಿದುಉದ್ಯಮ, ರಾಜಕೀಯ : ಜಾರಕಿಹೊಳಿ ಸಹೋದರರ ಪ್ರಭಾವವಿದು

ರೆಸಾರ್ಟ್‌ಗೆ ಯಾರೂ ಹೋಗಲ್ಲ

ರೆಸಾರ್ಟ್‌ಗೆ ಯಾರೂ ಹೋಗಲ್ಲ

ಮಾಧ್ಯಮಗಳ ಜೊತೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, 'ನಮ್ಮ ಬೇಡಿಕೆಯನ್ನು ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇವೆ. ಹಂತ ಹಂತವಾಗಿ ಸಮಸ್ಯೆ ಬಗೆಹರಿಯಲಿದೆ. ಯಾವುದೇ ಸಮಸ್ಯೆ ಇದ್ದರೂ ಬಂದು ಭೇಟಿ ಮಾಡುವಂತೆ ಸೂಚಿಸಿದ್ದಾರೆ' ಎಂದರು.

'ರಮೇಶ್ ಜಾರಕಿಹೊಳಿ ಅವರಾಗಲಿ ಅಥವ ಬೇರೆ ಶಾಸಕರಾಗಲಿ ರೆಸಾರ್ಟ್‌ಗೆ ಹೋಗುವುದಿಲ್ಲ. ರೆಸಾರ್ಟ್ ರಾಜಕೀಯ ನಡೆಸುವುದಿಲ್ಲ' ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಬಳ್ಳಾರಿಗೆ ಸಚಿವ ಸ್ಥಾನ ನೀಡಬೇಕು

ಬಳ್ಳಾರಿಗೆ ಸಚಿವ ಸ್ಥಾನ ನೀಡಬೇಕು

'ಇಂದಿನ ಮಾತುಕತೆಯಲ್ಲಿ ಎಲ್ಲವೂ ಫೈನಲ್ ಆಗಿಲ್ಲ. ಎಲ್ಲವೂ ಹಂತ-ಹಂತವಾಗಿ ಬಗೆಹರಿಯಲಿದೆ. ಬಳ್ಳಾರಿಗೆ ಒಂದು ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆ ಹಿಂದಿನಿಂದಲೂ ಇತ್ತು. ನಾವು ಸಹ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ' ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ?, ಕಾಂಗ್ರೆಸ್ ಹೊಸ ತಂತ್ರಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ?, ಕಾಂಗ್ರೆಸ್ ಹೊಸ ತಂತ್ರ

ಡಿಸಿಎಂ ಹುದ್ದೆಯನ್ನು ಕೇಳಿಲ್ಲ

ಡಿಸಿಎಂ ಹುದ್ದೆಯನ್ನು ಕೇಳಿಲ್ಲ

ರಮೇಶ್ ಜಾರಕಿಹೊಳಿ ಉಪ ಮುಖ್ಯಮಂತ್ರಿ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿಯನ್ನು ಸತೀಶ್ ಜಾರಕಿಹೊಳಿ ತಳ್ಳಿಹಾಕಿದರು. 'ಈಗಾಗಲೇ ಉಪ ಮುಖ್ಯಮಂತ್ರಿ ಇದ್ದಾರೆ. ಅವರ ಕೆಲಸವನ್ನು ಮಾಡಿಕೊಂಡು ಹೋಗುತ್ತಿದ್ದಾರೆ. ನಾವು ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿಲ್ಲ' ಎಂದು ಸ್ಪಷ್ಟಪಡಿಸಿದರು.

ದೆಹಲಿಗೆ ಹೋಗುತ್ತೇನೆ

ದೆಹಲಿಗೆ ಹೋಗುತ್ತೇನೆ

'ಹೈಕಮಾಂಡ್ ನಾಯಕರು ದೆಹಲಿಗೆ ಬರುವಂತೆ ಸೂಚಿಸಿದ್ದಾರೆ, ನಾನು ಬುಧವಾರ ದೆಹಲಿಗೆ ತೆರಳುತ್ತಿದ್ದೇನೆ. ರಮೇಶ್ ಜಾರಕಿಹೊಳಿ ಅವರು ಬರುತ್ತಿಲ್ಲ. ನಾನು ಮಾತ್ರ ಹೋಗುತ್ತಿದ್ದೇನೆ' ಎಂದು ಸತೀಶ್ ಜಾರಕಿಹೊಳಿ ಹೇಳಿದರು.

English summary
Karnataka Chief Minister H.D.Kumaraswamy had a meeting with Satish Jarkiholi in private hotel Bengaluru on September 18, 2018 ends successfully. Chief Minister agreed for our demand said Satish Jarkiholi after the meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X