ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 13, 14ರಂದು ಉಪ ಚುನಾವಣೆಗೆ ಕುಮಾರಸ್ವಾಮಿ ಪ್ರಚಾರ

|
Google Oneindia Kannada News

Recommended Video

ದೋಸ್ತಿಯನ್ನು ಮರೆತಿಲ್ಲ ಕುಮಾರಣ್ಣ..! | Oneindia Kannada

ಬೆಂಗಳೂರು, ಮೇ 10 : ಉಪ ಚುನಾವಣೆಯ ಪ್ರಚಾರದಲ್ಲಿ ಜೆಡಿಎಸ್ ನಾಯಕರು ತೊಡಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 2 ದಿನಗಳ ಕಾಲ ಪ್ರಚಾರದಲ್ಲಿ ತೊಡಗಲಿದ್ದಾರೆ.

ಮೇ 13ರಂದು ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಮತ್ತು ಮೇ 14ರಂದು ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ. ಉಪ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದೆ.

ಉಪಚುನಾವಣೆ: ಜೆಡಿಎಸ್ ನಾಯಕರ ಮೇಲೆ ಕಾಂಗ್ರೆಸ್ ನಾಯಕರು ಗರಂಉಪಚುನಾವಣೆ: ಜೆಡಿಎಸ್ ನಾಯಕರ ಮೇಲೆ ಕಾಂಗ್ರೆಸ್ ನಾಯಕರು ಗರಂ

ಲೋಕಸಭಾ ಚುನಾವಣೆ ಮತದಾನ ಮುಗಿದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಕಾಪು ಬಳಿಯ ರೆಸಾರ್ಟ್‌ನಲ್ಲಿ ವಿಶ್ರಾಂತಿ ಪಡೆದಿದ್ದರು. ಬಳಿಕ ಬೆಂಗಳೂರಿಗೆ ಆಗಮಿಸಿದ್ದರು. ಬುಧವಾರ ತಮಿಳುನಾಡಿನ ದೇವಾಲಯಕ್ಕೆ ಭೇಟಿ ನೀಡಿದ್ದರು.

ಚಿಂಚೋಳಿ ಉಪ ಚುನಾವಣಾ ಕಣ : ಪಕ್ಷಗಳ ಬಲಾಬಲಚಿಂಚೋಳಿ ಉಪ ಚುನಾವಣಾ ಕಣ : ಪಕ್ಷಗಳ ಬಲಾಬಲ

CM HD Kumaraswamy to campaign for by election on May 13 and 14

ಗುರುವಾರ ಮತ್ತು ಶುಕ್ರವಾರ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಶನಿವಾರ ಮತ್ತು ಭಾನುವಾರ ಅವರು ಮಡಿಕೇರಿ ಬಳಿಯ ರೆಸಾರ್ಟ್‌ನಲ್ಲಿ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.

ಕುಂದಗೋಳ ಉಪ ಚುನಾವಣೆ : ಪಕ್ಷಗಳ ಬಲಾಬಲಕುಂದಗೋಳ ಉಪ ಚುನಾವಣೆ : ಪಕ್ಷಗಳ ಬಲಾಬಲ

ಮೇ 13ರ ಸೋಮವಾರ ಮತ್ತು ಮೇ 14ರ ಮಂಗಳವಾರ ಅವರು ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಕಾಗ್ರೆಸ್ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಮೇ 19ರಂದು ಮತದಾನ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಸಿ.ಎಸ್.ಶಿವಳ್ಳಿ ಅವರ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ. ಡಾ.ಉಮೇಶ್ ಜಾಧವ್ ಅವರ ರಾಜೀನಾಮೆಯಿಂದಾಗಿ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ಕುಂದಗೋಳ ಕ್ಷೇತ್ರದಲ್ಲಿ ಕುಸುಮಾ ಶಿವಳ್ಳಿ ಅವರು ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ. ಬಿಜೆಪಿಯಿಂದ ಎಸ್‌.ಐ.ಚಿಕ್ಕನಗೌಡರ್ ಕಣದಲ್ಲಿದ್ದಾರೆ. ಚಿಂಚೋಳಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಾ.ಅವಿನಾಶ್ ಜಾಧವ್, ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಯಾಗಿ ಸುಭಾಷ್ ರಾಥೋಡ್ ಕಣದಲ್ಲಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಕುಂದಗೋಳ ಮತ್ತು ಚಿಂಚೋಳಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿತ್ತು. ಆದ್ದರಿಂದ, ಉಪ ಚುನಾವಣೆ ಪಕ್ಷದ ಪಾಲಿಗೆ ಪ್ರತಿಷ್ಠೆಯಾಗಿದೆ. ಎರಡೂ ಕ್ಷೇತ್ರಗಳಲ್ಲಿ ಗೆಲ್ಲಲು ಪಕ್ಷ ತಂತ್ರ ರೂಪಿಸಿದ್ದು, ಪ್ರಮುಖ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ.

ಚಿಂಚೋಳಿ ಮತ್ತು ಕುಂದಗೋಳ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಮೈತ್ರಿ ಸರ್ಕಾರಕ್ಕೆ ಹಿನ್ನಡೆ ಉಂಟು ಮಾಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಪಣತೊಟ್ಟಿದೆ. ಕುಂದಗೋಳದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿಯ ಎಸ್.ಐ.ಚಿಕ್ಕನಗೌಡ ಅವರು ಕೇವಲ 634 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.

English summary
Karnataka Chief Minister H.D.Kumaraswamy to campaign for Dharwad district Kundgol and Kalaburagi district Chincholi by election on May 13 and 14. Election will be held on May 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X