ಉನ್ನತ ಶಿಕ್ಷಣ ಇಲಾಖೆ ಸಭೆಗೆ ಶಿಕ್ಷಣ ಸಚಿವ ದೇವೇಗೌಡ ಗೈರು

Recommended Video

      ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿ ಟಿ ದೇವೇಗೌಡ ಆಬ್ಸೆಂಟ್ | Oneindia Kannada

      ಬೆಂಗಳೂರು, ಜೂನ್ 13: ರಾಜ್ಯದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಶುಲ್ಕ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಹತ್ವದ ಸಭೆ ನಡೆಸಿದರು. ಆದರೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಗೈರಾಗಿದ್ದರು.

      ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಖಾಸಗಿಎಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ ಕುರಿತಂತೆ ನ್ಯಾಯಮೂರ್ತಿ ಶೈಲೇಂದ್ರ ಕುಮಾರ್ ನೇತೃತ್ವದ ಶುಲ್ಕ ಸಲಹಾ ಸಮಿತಿ ಶೇ.8ರಷ್ಟು ಶುಲ್ಕ ಹೆಚ್ಚಳ ಮಾಡುವಂತೆ ಶಿಫಾರಸ್ಸು ಮಾಡಿತ್ತು. ಆ ಶಿಫಾರಸ್ಸು ಆಧರಿಸಿ ರಾಜ್ಯ ಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್ ಶುಲ್ಕವನ್ನು ನಿಗದಿ ಮಾಡಬೇಕಿದೆ.

      ಎಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಗಳು ಶೇ.30 ಶುಲ್ಕ ಹೆಚ್ಚಿಸಲು ಬೇಡಿಕೆ ಇಟ್ಟಿದ್ದಾರೆ. ಏಕಾಏಕಿ ಅಷ್ಟು ಹೆಚ್ಚಳ ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಶುಲ್ಕ ನಿಗದಿ ಮಾಡಲು ಮತ್ತೆ ಆಡಳಿತ ಮಂಡಳಿಗಳೊಂದಿಗೆ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

      ಈಗಾಗಲೇ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕೆ ಶೇ.8ರಷ್ಟು ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿತ್ತು, ಎಂಜಿನಿಯರಿಂಗ್ ಕೋರ್ಸ್‌ನ ಶುಲ್ಕ ಕುರಿತಂತೆ ಹೊಸ ಸರ್ಕಾರ ಅಸ್ವಿತ್ವಕ್ಕೆ ಬಂದ ಮೇಲೆ ಶುಲ್ಕ ಹೆಚ್ಚಳ ಕುರಿತಂತೆ ಎಚ್‌ಡಿ ಕುಮಾರಸ್ವಾಮಿ ಮೊದಲ ಸಭೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ್ದಾರೆ.

      CM holds meeting with private college management

      ಆದರೆ ಆರಂಭದಿಂದಲೂ ಉನ್ನತ ಶಿಕ್ಷಣ ಖಾತೆಯನ್ನು ಒಪ್ಪಲು ಹಿಂದೇಟು ಹಾಕುತ್ತಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಇಂದಿನ ಸಭೆಗೆ ಗೈರು ಹಾಜರಾಗಿದ್ದರು. ಉನ್ನತ ಶಿಕ್ಷಣ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಖಾಸಗಿ ಕಾಲೇಜು ಆಡಳಿತ ಮಂಡಳಿ ಅಧಿಕಾರಿಗಳು ಹಾಜರಿದ್ದರು.

      CM holds meeting with private college management

      ಸಭೆಯಲ್ಲಿ ವೃತ್ತಿಪರ ಕೋರ್ಸುಗಳಿಗೆ ಖಾಸಗಿ ಹಾಗೂ ಸರ್ಕಾರಿ ಕೋಟಾದಡಿ ಸೀಟು ಹಂಚಿಕೆ ಸಂಬಂಧ ಪ್ರಮಾಣದ ಕುರಿತಂತೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+