ಪರಿಷತ್ ಉಪ ಚುನಾವಣೆ, ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಅಭ್ಯರ್ಥಿ
ಬೆಂಗಳೂರು, ಅ.18 : ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಪರಮಾಪ್ತ ಸಿ.ಎಂ.ಇಬ್ರಾಹಿಂ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಆಗಸ್ಟ್ 31ರಂದು ವಿಮಲಾ ಗೌಡ ಅವರ ನಿಧನದಿಂದ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಆಡಳಿತ ಪಕ್ಷದ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ. ವಿಧಾನಸಭೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪರಿಷತ್ತಿಗೆ ಕಳಿಸಲಾಗುತ್ತದೆ.

ಈ ಚುನಾವಣೆಗೆ ಯೋಜನಾ ಮಂಡಳಿ ಉಪಾಧ್ಯಕ್ಷರು ಆಗಿರುವ ಸಿ.ಎಂ.ಇಬ್ರಾಹಿಂ ಅವರನ್ನು ಅಭ್ಯರ್ಥಿಯಾಗಿಸಲು ಚಿಂತನೆ ನಡೆಸಲಾಗಿತ್ತು. ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಿದ್ದರು. ಇಂದು ಎಐಸಿಸಿ ಅಧಿಕೃತವಾಗಿ ಈ ಕುರಿತು ಘೋಷಣೆ ಮಾಡಿದೆ.
ಸಿ.ಎಂ.ಇಬ್ರಾಹಿಂ ಅವರು ಸಿದ್ದರಾಮಯ್ಯ ಅವರ ಆಪ್ತರು. 2013ರ ಚುನಾವಣೆಯಲ್ಲಿ ಕ್ಷೇತ್ರದ ಹಾಲಿ ಶಾಸಕ ಸಂಗಮೇಶ್ ಅವರನ್ನು ಕಡೆಗಣಿಸಿ ಭದ್ರಾವತಿಯಲ್ಲಿ ಇಬ್ರಾಹಿಂ ಅವರಿಗೆ ಟಿಕೆಟ್ ನೀಡಲಾಗಿತ್ತು. ಆದರೆ, ಇಬ್ರಾಹಿಂ ಸೋಲು ಕಂಡಿದ್ದರು.












Click it and Unblock the Notifications