ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಇಬ್ರಾಹಿಂ ಮಹತ್ವಾಕಾಂಕ್ಷೆಗೆ ಅಡ್ಡಿಯಾದ ಗೋಹತ್ಯೆ ನಿಷೇಧ ವಿಧೇಯಕ!

|
Google Oneindia Kannada News

ಬೆಂಗಳೂರು, ಫೆ. 09: ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧದ ಮಧ್ಯೆ ಗೋ ಹತ್ಯೆ ನಿಷೇಧ ವಿಧೇಯಕ ವಿಧಾನ ಪರಿಷತ್‌ನಲ್ಲಿ ಅಂಗೀಕಾರವಾಗಿದೆ. ಆ ಮೂಲಕ ಬಿಜೆಪಿ ತನ್ನ ಗುರಿಯನ್ನು ಸಾಧಿಸಿದೆ. ವಿಧಾನ ಸಭೆಯಲ್ಲಿ ಅಂಗೀಕಾರವಾಗಿದ್ದ ಗೋ ಹತ್ಯೆ ನಿಷೇಧ ವಿಧೇಯಕವನ್ನು ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸರ್ಕಾರ ಮಂಡಿಸಿರಲಿಲ್ಲ. ವಿಧಾನ ಪರಿಷತ್‌ನಲ್ಲಿ ಸೂಕ್ತ ಬಹುಮತವಿಲ್ಲದ ಕಾರಣ ವಿಧೇಯಕ ಬಿದ್ದುಹೋಗುವ ಆತಂಕ ಆಡಳಿತ ಪಕ್ಷ ಬಿಜೆಪಿಗಿತ್ತು. ಹೀಗಾಗಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡ ಬಳಿಕ ವಿಧಾನ ಪರಿಷತ್‌ನಲ್ಲಿ ವಿಧೇಯಕಕ್ಕೆ ಅಂಗೀಕಾರ ಪಡೆದುಕೊಂಡಿತು.

ಈ ಮಧ್ಯೆ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಸದ್ಯದಲ್ಲಿಯೇ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುತ್ತಾರೆ ಎಂಬ ಸುದ್ದಿಗಳಿವೆ. ಅದನ್ನು ಅವರು ಕೂಡ ಈಗಾಗಲೇ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದರು. ಜೆಡಿಎಸ್‌ಗೆ ಹೋಗಲು ತುದಿಗಾಲಲ್ಲಿ ನಿಂತಿರುವ ಇಬ್ರಾಹಿಂ ಅವರಿಗೆ ಇದೀಗ ಹಿನ್ನಡೆಯಾಗಿದೆ ಎನ್ನಲಾಗುತ್ತಿದೆ. ಅದಕ್ಕೆ ಕಾರಣ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು. ಹೀಗಾಗಿ ಗೋ ಹತ್ಯೆ ನಿಷೇಧ ವಿಧೇಯಕದ ಕುರಿತು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.

ಗೋ ಹತ್ಯೆ ನಿಷೇಧ: ಪ್ರಸ್ತಾವಿತ ಕಾಯ್ದೆಯಲ್ಲಿ ಏನೇನಿದೆ?ಗೋ ಹತ್ಯೆ ನಿಷೇಧ: ಪ್ರಸ್ತಾವಿತ ಕಾಯ್ದೆಯಲ್ಲಿ ಏನೇನಿದೆ?

ಉಲ್ಟಾ ಹೊಡೆದ ಸಿ.ಎಂ. ಇಬ್ರಾಹಿಂ

ಉಲ್ಟಾ ಹೊಡೆದ ಸಿ.ಎಂ. ಇಬ್ರಾಹಿಂ

ಇನ್ನೇನೂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿಬಿಟ್ಟರು ಎಂಬಂತಿದ್ದ ಸಿಎಂ ಇಬ್ರಾಹಿಂ ಅವರು ಯುಟರ್ನ್ ಹೊಡೆದಿದ್ದಾರೆ. ಇತ್ತೀಚೆಗೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿದ್ದ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಅವರು, ರಾಜ್ಯ ಪ್ರವಾಸ ಮಾಡಿ ಜನಾಭಿಪ್ರಾಯ ಸಂಗ್ರಹಿಸಿ ಜೆಡಿಎಸ್ ಸೇರುವುದಾಗಿ ಹೇಳಿಕೆ ನೀಡಿದ್ದರು. ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯರನ್ನಾಗಿ ಮಾಡಲಾಗುತ್ತದೆ ಎಂಬ ಮಾತುಗಳು ಜೆಡಿಎಸ್ ವಲಯದಿಂದ ಕೇಳಿ ಬಂದಿದ್ದವು. ಆದರೆ ಸಿಎಂ ಇಬ್ರಾಹಿಂ ಅವರು ಏಕಾಏಕಿ ಉಲ್ಟಾ ಹೊಡೆದಿದ್ದಾರೆ. ಅದಕ್ಕೆ ಕಾರಣ ಬಿಜೆಪಿ ಜೊತೆಗೆ ಜೆಡಿಎಸ್ ಸಖ್ಯ ಬೆಳೆಸಿದ್ದು ಎನ್ನಲಾಗುತ್ತಿದೆ.

ನಾನು ಕಾಂಗ್ರೆಸ್ ಪಕ್ಷಕ್ಕೆ ಬದ್ಧ

ನಾನು ಕಾಂಗ್ರೆಸ್ ಪಕ್ಷಕ್ಕೆ ಬದ್ಧ

ನಾನು ಕಾಂಗ್ರೆಸ್ಸಿಗ, ಕಾಂಗ್ರೆಸ್ ಪಕ್ಷ ಏನು ಹೇಳುತ್ತದೆಯೋ ಅದಕ್ಕೆ ನಾನು ಬದ್ಧ. ಇತರ ರಾಜಕೀಯ ಮುಖಂಡರೊಡನೆ ಸಂಬಂದ ಕೇವಲ ವೈಯುಕ್ತಿಕ ಎಂದು ವಿಧಾನಸೌಧದಲ್ಲಿ ಸಿಎಂ ಇಬ್ರಾಹಿಂ ಅವರು ಹೇಳಿಕೆ ಕೊಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ ದೇವೇಗೌಡರನ್ನು ಭೇಟಿ ಮಾಡಿದ್ದ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಸೇರುವುದನ್ನು ಪರೋಕ್ಷವಾಗಿ ಹೇಳಿದ್ದರು. ಅದರೆ ಜೆಡಿಎಸ್ ಯಾವಾಗ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿತೊ ಆಗ ಇಬ್ರಾಹಿಂ ಅವರು ಮನಸ್ಸು ಬದಲಿಸಿದ್ದಾರೆ ಎನ್ನಲಾಗಿದೆ.

ಗೋಮಾತೆ ಮೇಲೆ ಪ್ರಮಾಣ ಮಾಡಿ: ಯಡಿಯೂರಪ್ಪಗೆ ಸಿದ್ದರಾಮಯ್ಯ ಸವಾಲು!ಗೋಮಾತೆ ಮೇಲೆ ಪ್ರಮಾಣ ಮಾಡಿ: ಯಡಿಯೂರಪ್ಪಗೆ ಸಿದ್ದರಾಮಯ್ಯ ಸವಾಲು!

ನಮ್ಮನ್ನು ಹೊಡೆಯುವುದು ಬಾಕಿ

ನಮ್ಮನ್ನು ಹೊಡೆಯುವುದು ಬಾಕಿ

ವಿಧಾನ ಪರಿಷತ್‌ನಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ್ಕೆ ಅಂಗೀಕಾರ ಪಡೆದುಕೊಂಡಿದ್ದನ್ನು ಇಬ್ರಾಹಿಂ ಅವರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ವಿಧೇಯಕ ಅಂಗೀಕಾರ ಆಗುವಾಗ ನಮ್ಮನ್ನು ಹೊಡೆಯುವುದೊಂದು ಬಾಕಿ ಇತ್ತು. ಕೌನ್ಸಿಲ್‌ನಲ್ಲಿ ಇನ್ನು ನಾಲ್ಕು ಜನ ಬಿಜೆಪಿಯವರು ಹೆಚ್ಚಾದರೆ ನಮ್ಮನ್ನು ಹೊಡೆದು ಹೊರಗೆ ಹಾಕುತ್ತಾರೆ ಎಂಬ ಗಂಭೀರ ಆರೋಪವನ್ನು ಇಬ್ರಾಹಿಂ ಮಾಡಿದ್ದಾರೆ.

ಪ್ರಜಾಪ್ರಭುತ್ವ ಉಳಿಯಲ್ಲ

ಪ್ರಜಾಪ್ರಭುತ್ವ ಉಳಿಯಲ್ಲ

ಜೊತೆಗೆ ಕರ್ನಾಟಕ ಇತಿಹಾಸದಲ್ಲಿ ಇಂತಹ ಸರ್ಕಾರ ಇರಲಿಲ್ಲ. ಸದನದಲ್ಲಿ ನಿಯಮ ನಡವಳಿಕೆ ಇಲ್ಲ. ಉಪಸಭಾಪತಿ ಏಕಾಏಕಿ ಬಿಲ್ ಪಾಸ್ ಮಾಡಿದ್ದಾರೆ. ವಿಧೇಯಕವನ್ನು ಮತಕ್ಕೆ ಹಾಕಿದ್ದರೆ ಸೋಲಾಗುತ್ತಿತ್ತು. ಈಗಲೂ ಬೇಕಾದರೆ ಮತಕ್ಕೆ ಹಾಕಲಿ. ವಿಧೇಯಕ ಮಂಡನೆ ಸಂದರ್ಭದಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ. ಯಡಿಯೂರಪ್ಪ ರಿಮೋಟ್ ಕಂಟ್ರೋಲ್‌ನಲ್ಲಿ ಸದನ ನಡೆಸಿದ್ದಾರೆ. ಹೀಗೆ ಮಾಡುತ್ತಾ ಹೋದರೆ ಪ್ರಜಾಪ್ರಭುತ್ವ ಉಳಿಯಲ್ಲ ಎಂಬ ಗಂಭೀರ ಎಚ್ಚರಿಕೆಯನ್ನು ಇಬ್ರಾಹಿಂ ಕೊಟ್ಟಿದ್ದಾರೆ.


ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ ಮಾಡಿಕೊಳ್ಳಲು ಜೆಡಿಎಸ್ ಸಹಾಯ ಮಾಡಿರುವುದು ಸಿಎಂ ಇಬ್ರಾಹಿಂ ಅವರ ಮಹತ್ವಾಕಾಂಕ್ಷೆಗೆ ಅಡ್ಡಿಯಾಗಿದೆ. ಇಲ್ಲದಿದ್ದರೆ ಇಬ್ರಾಹಿಂ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗುತ್ತಿದ್ದರು ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದೆ.

English summary
Congress MLC CM Ibrahim opposes Karnataka Prevention Of Slaughter And Preservation Of Cattle Bill2020. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X