ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಕಷ್ಟದಲ್ಲಿದ್ದ ವಿಧವೆಯ ಸ್ವಯಂ ಉದ್ಯೋಗಕ್ಕೆ ಎಚ್‌ಡಿಕೆ ಧನಸಹಾಯ

|
Google Oneindia Kannada News

ಬೆಂಗಳೂರು, ಆಗಸ್ಟ್ 03: ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ ಅವರು ಇಂದು ಬೆಂಗಳೂರಿನ ಸಮುನಹಳ್ಳಿಯ ಪುಷ್ಪಲತಾ ಎಂಬ ಮಹಿಳೆಗೆ ಸ್ವಯಂಉದ್ಯೋಗ ಕೈಗೊಳ್ಳಲು 25 ಸಾವಿರ ರೂ.ಗಳ ಧನಸಹಾಯ ನೀಡಿದರು.

ಪುಷ್ಪಲತಾ ವಿಧವೆಯಾಗಿದ್ದು, ಒಂದು ಮಗುವಿದೆ. ಆರ್ಥಿಕ ಸಂಕಷ್ಟದಲ್ಲಿದ್ದು, ದುಡಿಮೆಗೆ ಮಾರ್ಗ ಕೋರಿ ಮುಖ್ಯಮಂತ್ರಿಗಳನ್ನು ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿದರು. ಪುಷ್ಪಲತಾ ಅವರ ಸಮಸ್ಯೆಯನ್ನು ಆಲಿಸಿದ ಅವರು, ಸ್ವಯಂಉದ್ಯೋಗ ಪ್ರಾರಂಭಿಸಲು ಸಲಹೆ ನೀಡಿ ಧನಸಹಾಯ ನೀಡಿದರು.

ಆ ನಂತರ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಅಧ್ಯಕ್ಷ ಹೆಚ್.ಎಸ್.ದೊರೆಸ್ವಾಮಿ ಅವರೊಂದಿಗೆ ಇಂದು ಕುಮಾರಸ್ವಾಮಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಾತುಕತೆ ನಡೆಸಿದರು.

ಬಿಬಿಎಂಪಿ, ಬಿಡಿಎ ಜತೆ ಹಲವು ಸುತ್ತಿನ ಸಭೆ

ಬಿಬಿಎಂಪಿ, ಬಿಡಿಎ ಜತೆ ಹಲವು ಸುತ್ತಿನ ಸಭೆ

ಕೆರೆ ರಕ್ಷಣೆ ಬಗ್ಗೆ ಚರ್ಚೆ ಮಾಡಿದ ದೊರೆಸ್ವಾಮಿ ಅವರಿಗೆ, ತಾವುಈಗಾಗಲೇ ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದ್ದು, ಬೆಂಗಳೂರಿನ ಕೆರೆಗಳನ್ನು ರಕ್ಷಿಸಲು ಮನವಿ ಮಾಡಿದ್ದಾರೆ. ಕೆರೆಗಳು ನಮ್ಮ ಜೀವನಾಡಿ. ಅವುಗಳನ್ನು ರಕ್ಷಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಕುಮಾರಸ್ವಾಮಿ ಭೇಟಿ ಮಾಡಿದ ದೊರೆಸ್ವಾಮಿ

ಕುಮಾರಸ್ವಾಮಿ ಭೇಟಿ ಮಾಡಿದ ದೊರೆಸ್ವಾಮಿ

ಬೆಂಗಳೂರಿನ ಕೆರೆಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಹಾಗೂ ಅವುಗಳ ರಕ್ಷಣೆಗೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸರ್ಕಾರವು ಭೂಮಿ-ವಸತಿ ಯೋಜನೆಗಳ ಅನುಷ್ಠಾನದ ಮೇಲುಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ಅದು ಫೆಬ್ರವರಿಯಲ್ಲಿ ಕಾರ್ಯಾರಂಭ ಮಾಡಿತ್ತು. ಆದರೆ ಚುನಾವಣೆಗಳು ಬಂದ ಕಾರಣ ಕೆಲಸ ಮುಂದುವರೆದಿಲ್ಲ. ಅದು ತ್ವರಿತವಾಗಿ ಪುನಃ ಕಾರ್ಯಾರಂಭ ಮಾಡಿ ಬೆಂಗಳೂರಿನ ಕೆರೆಗಳನ್ನು ರಕ್ಷಿಸುವುದೂ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಹೆಚ್.ಎಸ್.ದೊರೆಸ್ವಾಮಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

ಬಂಡಿಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಇಲ್ಲ

ಬಂಡಿಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಇಲ್ಲ

ಬಂಡಿಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಇರುವ ನಿರ್ಬಂಧ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿಲುವನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಇದಲ್ಲದೆ ಎಲಿವೆಟೆಡ್ ರಸ್ತೆ ನಿರ್ಮಾಣ ಕಾರ್ಯಸಾಧುವಲ್ಲ (not feasible) ಎಂದು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಅಲೆಮಾರಿ ಆಯೋಗ ರಚನೆಗೆ ಸೂಚನೆ

ಅಲೆಮಾರಿ ಆಯೋಗ ರಚನೆಗೆ ಸೂಚನೆ

ಅಲೆಮಾರಿ ಆಯೋಗ ರಚನೆಗೆ ಸಂಬಂಧಿಸಿದಂತೆ ವಿಸ್ತೃತ ಕಾರ್ಯಸಾಧ್ಯ ವರದಿ ಸಲ್ಲಿಸಲು ಸಮಿತಿಯೊಂದನ್ನು ರಚಿಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದರು. ರಾಜ್ಯ ಅಲೆಮಾರಿ ಬುಡಕಟ್ಟು ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಇಂದು ಭೇಟಿ ಮಾಡಿ ಚರ್ಚಿಸಿದರು. ಅಲೆಮಾರಿಗಳ ಆಯೋಗ ರಚನೆಗೆ ರಾಜ್ಯದಲ್ಲಿರುವ ಅಲೆಮಾರಿ, ಬುಡಕಟ್ಟು ಸಮುದಾಯದವರ ಜನಸಂಖ್ಯೆ, ಸ್ಥಿತಿಗತಿಯ ಸಂಪೂರ್ಣ ವಿವರಗಳನ್ನು ಸಲ್ಲಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

English summary
CM Kuamraswamy met freedom fighter Doreswamy and talked about lake rescue of Bengaluru. He also instructed officers to form Tramp people care comity.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X