ಪರಿಶಿಷ್ಟ ಪಂಗಡ ಮೀಸಲಾತಿ ಕುರಿತು ಸಿಎಂ ಕುಮಾರಸ್ವಾಮಿ ಸಭೆ

ಬೆಂಗಳೂರು, ಜೂನ್ 25: ಪರಿಶಿಷ್ಟ ಪಂಗಡ ಮೀಸಲಾತಿ ಹೋರಾಟ ಇಂದು ಏಕಾ-ಏಕಿ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೆ ಸಿಎಂ ಕುಮಾರಸ್ವಾಮಿ ಅವರು ಪರಿಶಿಷ್ಟ ಪಂಗಡ ಮೀಸಲಾತಿ ಬಗ್ಗೆ ಸಭೆ ನಡೆಸಿದ್ದಾರೆ.

ಪರಿಶಿಷ್ಟ ಪಂಡಗದ ಶಾಸಕರು, ಸಚಿವರನ್ನು ಒಳಗೊಂಡಂತೆ ಸರ್ಕಾರಿ ಅಧಿಕಾರಿಗಳ ಜೊತೆ ಇಂದು ಕುಮಾರಸ್ವಾಮಿ ಅವರು ಮೀಸಲಾತಿ ಕುರಿತು ಸಭೆ ನಡೆಸಿದ್ದಾರೆ.

ಸಭೆಗೂ ಮುನ್ನಾ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕುರಿತು ಸರ್ಕಾರ ಗಂಭೀರವಾಗಿ ಚಿಂತಿಸಲಿದೆ, ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಚರ್ಚಿಸಲಿದ್ದಾರೆ ಎಂದು ಹೇಳಿದರು.

CM Kumaraswamy had meeting about Schedule tribe reservation

ಸಭೆಯಲ್ಲಿ ಡಿಸಿಎಂ ಡಾ. ಜಿ.ಪರಮೇಶ್ವರ್ ಸಚಿವರುಗಳಾದ ಸತೀಶ್ ಜಾರಕಿಹೊಳಿ, ಈ ತುಕಾರಾಮ್, ಶಾಸಕರುಗಳಾದ ಕುಮಠಳ್ಳಿ, ಅನಂತ್ ನ್ಯಾಮಗೌಡ, ಮುನಿರತ್ನ , ಉಗ್ರಪ್ಪ ಸೇರಿದಂತೆ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.

ಪರಿಶಿಷ್ಟ ಪಂಗಡ ಸಮುದಾಯಕ್ಕೆ 7.5 ಮೀಸಲಾತಿಯನ್ನು ನೀಡಬೇಕು ಎಂದು ಒತ್ತಾಯಿಸಿ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲಾಯಿತು. ಅದಕ್ಕೂ ಮುನ್ನಾ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ಎಲ್ಲ ಶಾಸಕರು ರಾಜೀನಾಮೆ ನೀಡಿ ಎಂದು ಸ್ವಾಮೀಜಿ ಒತ್ತಾಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+