ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

SSLC ಫಲಿತಾಂಶ: ಸರ್ಕಾರಿ ಶಾಲೆಗಳ ಸಾಧನೆ ಕೊಂಡಾಡಿದ ಸಿಎಂ

|
Google Oneindia Kannada News

ಬೆಂಗಳೂರು, ಏಪ್ರಿಲ್ 30: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಸಿಎಂ ಕುಮಾರಸ್ವಾಮಿ ಅಭಿನಂದನೆ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಎಂ, ಫೇಲ್ ಆದ ವಿದ್ಯಾರ್ಥಿಗಳಿಗೆ ಧೃತಿಗೆಡಬೇಡಿ ಎಂದು ಹೇಳಿರುವ ಸಿಎಂ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ, ಮತ್ತೆ ಪರೀಕ್ಷೆ ಎದುರಿಸಿ ಎಂದು ಸಾಂತ್ವಾನದ ಮಾತುಗಳನ್ನಾಡಿದ್ದಾರೆ.

SSLC ಫಲಿತಾಂಶ:ಕುಮಾರಸ್ವಾಮಿ, ಪರಮೇಶ್ವರ್ ಅವರಿಂದ ಅಭಿನಂದನೆ SSLC ಫಲಿತಾಂಶ:ಕುಮಾರಸ್ವಾಮಿ, ಪರಮೇಶ್ವರ್ ಅವರಿಂದ ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶ ತ್ವರಿತವಾಗಿ ಪ್ರಕಟವಾಗುವ ಮೂಲಕ ಪೋಷಕರು ಹಾಗೂ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಇಡೀ ಪರೀಕ್ಷಾ ಪ್ರಕ್ರಿಯೆಯನ್ನು ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಯಶಸ್ವಿಯಾಗಿ ನಿರ್ವಹಿಸಿದ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

CM Kumaraswamy hails government schools performance in SSLC

ತಂತ್ರಜ್ಞಾನದ ನೆರವು ಹಾಗೂ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ದೊರೆತಾಗ ಪರಿಣಾಮಕಾರಿ ಕಾರ್ಯನಿರ್ವಹಣೆ ಸಾಧ್ಯ ಎನ್ನುವುದಕ್ಕೆ ಈ ವರ್ಷದ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷಾ ಪ್ರಕ್ರಿಯೆ ನಿರ್ವಹಣೆ ಉತ್ತಮ ನಿದರ್ಶನ ಎಂದು ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಅಂಕಿ-ಅಂಶಗಳ ಸಮೇತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸಂಪೂರ್ಣ ಮಾಹಿತಿ ಅಂಕಿ-ಅಂಶಗಳ ಸಮೇತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸಂಪೂರ್ಣ ಮಾಹಿತಿ

ಯಾವುದೇ ಸರ್ಕಾರಿ ಶಾಲೆ ಶೂನ್ಯ ಫಲಿತಾಂಶ ದಾಖಲಿಸದೆ ಇರುವುದು ಹಾಗೂ 100% ಫಲಿತಾಂಶ ಪಡೆದ ಶಾಲೆಗಳ ಸಂಖ್ಯೆ 102ರಿಂದ 593ಕ್ಕೆ ಹೆಚ್ಚಳವಾಗಿರುವುದು ಹೆಮ್ಮೆಯ ವಿಷಯ. ಪೋಷಕರು ಸರ್ಕಾರಿಶಾಲೆಗಳ ಕುರಿತು ಕೀಳರಿಮೆ ತೊಡೆದು ಒಲವು ತೋರಿಸಲು ಇದು ಪೂರಕವಾಗಿದೆ.ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಉತ್ತಮ ಪಡಿಸಲು ಅಧಿಕಾರಿಗಳು ಕೈಗೊಂಡ ಕ್ರಮಗಳು ಫಲ ನೀಡಿದೆ ಎಂದು ಸಿಎಂ ಹೇಳಿದ್ದಾರೆ.

ಕರ್ನಾಟಕ SSLC : ಸರ್ಕಾರಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶವೇ ಇಲ್ಲಕರ್ನಾಟಕ SSLC : ಸರ್ಕಾರಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶವೇ ಇಲ್ಲ

ಸರ್ಕಾರಿ ಶಾಲೆಗಳ ಮಕ್ಕಳು ಅದರಲ್ಲೂ ಗ್ರಾಮೀಣ ಪ್ರದೇಶದ ಮಕ್ಕಳು ಅತ್ಯುತ್ತಮ ಸಾಧನೆ ತೋರಬಲ್ಲರು ಎಂಬುದಕ್ಕೆ ಇದು ನಿದರ್ಶನ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

English summary
CM Kumaraswamy today hails government schools performance in SSLC result. He also congratulate students who pass and support failed students. He thanked officers and teachers for better result.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X