ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉನ್ನತ ಮಟ್ಟದ ಸಭೆಯಲ್ಲಿ ಎಚ್ಡಿಕೆ ಪ್ರಕಟಿಸಿದ ಜನಪರ ಘೋಷಣೆಗಳು

ಉನ್ನತ ಮಟ್ಟದ ಸಭೆಯಲ್ಲಿ ಎಚ್ಡಿಕೆ ಪ್ರಕಟಿಸಿದ ಜನಪರ ಘೋಷಣೆಗಳು

By Balaraj Tantry
|
Google Oneindia Kannada News

ಬೆಂಗಳೂರು, ಜುಲೈ 24: ಸರಕಾರದ ಉನ್ನತ ಮಟ್ಟದ ಸಚಿವರ ಸಭೆ ಮತ್ತು ತೈವಾನ್ ಕಂಪೆನಿಯ ಪ್ರತಿನಿಧಿಗಳನ್ನು ಭೇಟಿಯಾದ ನಂತರ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಲವು ಜನಪರ ಕಾರ್ಯಕ್ರಮ ಮತ್ತು ಸರಕಾರದ ಮುಂದಿನ ನಿರ್ಧಾರಗಳ ಬಗ್ಗೆ ಹೇಳಿಕೆಯನ್ನು ನೀಡಿದ್ದಾರೆ.

ಮಂಗಳವಾರ (ಜು 24) ತೈವಾನ್ ಮೂಲದ ವಿಸ್ಟ್ರನ್ ಟೆಕ್ನಾಲಜೀಸ್ ಕಂಪನಿಯ ತಂಡ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತ್ತು. ಈ ಸಂದರ್ಭದಲ್ಲಿ, ರಾಜ್ಯದಲ್ಲಿ ದೊಡ್ಡ ಮಟ್ಟದ ಹೂಡಿಕೆಯನ್ನು ಮಾಡಲು ನಿರ್ಧರಿಸಿರುವುದನ್ನು ಸ್ವಾಗತಿಸಿದ ಮುಖ್ಯಮಂತ್ರಿಗಳು, ಯೋಜನೆಯ ವಿಸ್ತರಣೆಗೆ ಅಗತ್ಯವಿರುವ ಸ್ಥಳದ ಕುರಿತು ಪ್ರಸ್ತಾವನೆಯನ್ನು ಸಲ್ಲಿಸುವಂತೆ ತಿಳಿಸಿದರು.

ಇದಾದ ನಂತರ, ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ರಾಜ್ಯದ ಸರ್ಕಾರಿ ಶಾಲೆ, ಕಾಲೇಜುಗಳು, ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳ ಮೇಲಾದರೂ, ಸರಕಾರೀ ಯಂತ್ರ ಇನ್ನೂ ಚುರುಕುಗೊಂಡಿಲ್ಲ ಎನ್ನುವ ವಿರೋಧ ಪಕ್ಷಗಳ ಆರೋಪದ ನಡುವೆ, ಇತ್ತೀಚಿನ ದಿನಗಳಲ್ಲಿ ಕುಮಾರಸ್ವಾಮಿ ಸರಕಾರದ ಕೆಲಸ ವೇಗವನ್ನು ಪಡೆದುಕೊಳ್ಳುತ್ತಿದೆ. ಎಚ್ಡಿಕೆ ಪ್ರಕಟಿಸಿದ ಜನಪರ ಘೋಷಣೆಗಳು, ಮುಂದೆ ಓದಿ..

ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆ

ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆ

ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಿಸುವಾಗ ಉತ್ತಮ ಗುಣಮಟ್ಟದ ಬೈಸಿಕಲ್ ಒದಗಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಅವರು 2018-19ನೇ ಸಾಲಿಗೆ 5.14 ಲಕ್ಷ ಬೈಸಿಕಲ್‍ಗಳನ್ನು ಅಂದಾಜು 184 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುತ್ತಿದ್ದು, ಮೂರು ಹಂತಗಳಲ್ಲಿ ಗುಣಮಟ್ಟದ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಶಾಲಾ ಕೊಠಡಿಗಳ ಕುರಿತು ವಿವರವಾದ ಮಾಹಿತಿ ಒದಗಿಸುವಂತೆ ಮುಖ್ಯಮಂತ್ರಿ ಸೂಚನೆ

ಶಾಲಾ ಕೊಠಡಿಗಳ ಕುರಿತು ವಿವರವಾದ ಮಾಹಿತಿ ಒದಗಿಸುವಂತೆ ಮುಖ್ಯಮಂತ್ರಿ ಸೂಚನೆ

ಹಿಂದೆ, ವಿತರಿಸಲಾಗಿರುವ ಬೈಸಿಕಲ್‍ಗಳ ಕುರಿತು ಪೋಷಕರು ಅತೃಪ್ತಿ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಇದೇ ಸಂದರ್ಭದಲ್ಲಿ ಶಾಲೆಗಳ ಕಟ್ಟಡಗಳ ನಿರ್ವಹಣೆಗಳ ಕುರಿತು ವಿವರವಾದ ಮಾಹಿತಿಯೊಂದಿಗೆ ದುರಸ್ತಿಯಾಗಬೇಕಾದ ಹಾಗೂ ಹೆಚ್ಚುವರಿಯಾಗಿ ನಿರ್ಮಿಸಬೇಕಾದ ಶಾಲಾ ಕೊಠಡಿಗಳ ಕುರಿತು ವಿವರವಾದ ಮಾಹಿತಿ ಒದಗಿಸುವಂತೆ ಮುಖ್ಯಮಂತ್ರಿ ಸೂಚನೆ. ಕಾರ್ಪೊರೇಟ್ ಸಂಸ್ಥೆಗಳಿಂದ ಈ ಉದ್ದೇಶಕ್ಕೆ ನೆರವು ಪಡೆಯಲು ಪ್ರಯತ್ನಿಸುವುದಾಗಿ ಮುಖ್ಯಮಂತ್ರಿ ಹೇಳಿಕೆ.

ತೈವಾನ್ನಿನ ವಿಸ್ಟ್ರನ್ ಟೆಕ್ನಾಲಜೀಸ್ ಕಂಪನಿ 3000 ಕೋಟಿ ರೂ.ಗಳ ಹೂಡಿಕೆ

ತೈವಾನ್ನಿನ ವಿಸ್ಟ್ರನ್ ಟೆಕ್ನಾಲಜೀಸ್ ಕಂಪನಿ 3000 ಕೋಟಿ ರೂ.ಗಳ ಹೂಡಿಕೆ

ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ತೈವಾನ್ನಿನ ವಿಸ್ಟ್ರನ್ ಟೆಕ್ನಾಲಜೀಸ್ ಕಂಪನಿ 3,000 ಕೋಟಿ ರೂ.ಗಳ ಹೂಡಿಕೆಯನ್ನು ಮಾಡಲಿದೆ. ವಿಸ್ಟ್ರನ್ ಟೆಕ್ನಾಲಜೀಸ್ ಕಂಪನಿಯ ತಂಡದಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ. ಸಂಸ್ಥೆಗೆ ವಿಶೇಷ ಉತ್ತೇಜನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಮೊಬೈಲ್ ಫೋನ್ ಗಳ ದುರಸ್ತಿ ಮತ್ತು ನವೀಕರಣ ತಂತ್ರಜ್ಞಾನಕ್ಕೂ ಹೆಚ್ಚಿನ ಬೇಡಿಕೆ ಇದೆ. ಚಿಕ್ಕಬಳ್ಳಾಪುರದಲ್ಲಿ ಈ ನಿಟ್ಟಿನಲ್ಲಿ ತರಬೇತಿ ವ್ಯವಸ್ಥೆ ಕಲ್ಪಿಸಲು ಸಂಸ್ಥೆ ಗಮನಹರಿಸಬಹುದು - ಕುಮಾರಸ್ವಾಮಿ ಹೇಳಿಕೆ.

ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶ

ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶ

ನರಸಾಪುರದಲ್ಲಿ 43 ಎಕರೆ ಸ್ಥಳದಲ್ಲಿ ಪ್ರಾರಂಭವಾಗಲಿರುವ ಐಫೋನ್ ತಯಾರಕ ಕಂಪನಿಯು ರಾಷ್ಟ್ರದಲ್ಲಿಯೇ ಅತಿ ದೊಡ್ಡ ಯೋಜನೆಯಾಗಿದೆ. ಪ್ರಾರಂಭದಲ್ಲಿ 10,500 ಸ್ಥಳೀಯರಿಗೆ ಉದ್ಯೋಗಾವಕಾಶ ದೊರೆಯಲಿದೆ. ಕಂಪನಿಯ ವಿಸ್ತರಣೆಯನ್ನೂ ರಾಜ್ಯದಲ್ಲಿಯೇ ಮಾಡಲು ಉದ್ದೇಶಿಸಲಾಗಿದ್ದು., ಇದಕ್ಕಾಗಿ ಸ್ಥಳದ ಅವಶ್ಯಕತೆಯಿದೆ ಎಂದು ಕಂಪನಿಯ ಭಾರತದ ವ್ಯವಸ್ಥಾಪಕ ನಿರ್ದೇಶಕರ ಗುರುರಾಜ್ ತಿಳಿಸಿದರು. ಕನ್ನಡದವರಿಗೆ ಉದ್ಯೋಗಾವಕಾಶ ನೀಡಲು ಒಪ್ಪಿದಲ್ಲಿ 7 ದಿನಗಳಲ್ಲಿ ಒಡಂಬಡಿಕೆಗೆ ಸಹಿಮಾಡಿಕೊಳ್ಳುವುದಾಗಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಾಗ್ದಾನ.

ಪ್ರಯೋಗಾಲಯ, ಶೌಚಾಲಯ, ಗ್ರಂಥಾಲಯ ಮತ್ತಿತರ ಅಗತ್ಯ ಸೌಲಭ್ಯ

ಪ್ರಯೋಗಾಲಯ, ಶೌಚಾಲಯ, ಗ್ರಂಥಾಲಯ ಮತ್ತಿತರ ಅಗತ್ಯ ಸೌಲಭ್ಯ

ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ತರಗತಿ ಕೊಠಡಿಗಳು, ಪ್ರಯೋಗಾಲಯ, ಶೌಚಾಲಯ, ಗ್ರಂಥಾಲಯ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಹಣಕಾಸಿನ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಮಂಜೂರು ಮಾಡಿದ್ದ ಶಾಲೆ-ಕಾಲೇಜುಗಳಿಗೆ ಮೂಲ ಸೌಕರ್ಯದ ಕೊರತೆ ಎದುರಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ಕೂಡಲೇ ಸೌಲಭ್ಯ ಒದಗಿಸಲು ಸೂಚಿಸಿದರು.ಶಾಲೆಗಳ ಮೂಲ ಸೌಕರ್ಯ ಒದಗಿಸಲು ಹಿರಿಯ ವಿದ್ಯಾರ್ಥಿಗಳ ನೆರವು ಪಡೆಯಲು ಪೂರಕವಾಗಿ ಹಿರಿಯ ವಿದ್ಯಾರ್ಥಿಗಳ ಸಂಘಗಳನ್ನು ಸ್ಥಾಪಿಸಲು ತೀರ್ಮಾನಿಸಲಾಯಿತು.

ವಿಪ್ರೋ ಸಂಸ್ಥೆಯ ಅಧ್ಯಕ್ಷ ಅಜೀಂ ಪ್ರೇಂಜಿ ಮಂಗಳವಾರ ಬೆಳಗ್ಗೆ ಸಿಎಂ ಅವರನ್ನು ಭೇಟಿಯಾಗಿದ್ದರು.

English summary
CM Kumaraswamy High level Ministers and Taiwanese company delegation meeting on July 24. Taiwanese company to invest 3000 crores in State and government will distribute quality bycycle to students, basic infrastructure facility to government schools will be provided - CM Kumraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X