• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಇನ್ಫೋಸಿಸ್ ನಾರಾಯಣ ಮೂರ್ತಿಯನ್ನು ಭೇಟಿ ಮಾಡಿದ ಕುಮಾರಸ್ವಾಮಿ

|

ಬೆಂಗಳೂರು, ಜೂನ್ 1: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣ ಮೂರ್ತಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಈ ವೇಳೆ ನಾರಾಯಣ ಮೂರ್ತಿ ಅವರು ಕುಮಾರಸ್ವಾಮಿ ಅವರಿಗೆ ಶುಭಾಶಯ ಕೋರಿದರು.

ಜೂನ್ 4 ಅಥವಾ 5 ರಂದು ಸಂಪುಟ ವಿಸ್ತರಣೆ: ಎಚ್.ಡಿ. ಕುಮಾರಸ್ವಾಮಿ

ಶುಕ್ರವಾರ ಬೆಳಿಗ್ಗೆ ನಾರಾಯಣ ಮೂರ್ತಿ ಅವರನ್ನು ಭೇಟಿ ಮಾಡಿ ಕೆಲ ಕಾಲ ಚರ್ಚಿಸಿದ ಕುಮಾರಸ್ವಾಮಿ, ಮಾಹಿತಿ ತಂತ್ರಜ್ಞಾನ ಕ್ಷೇತ್ರ ಹಾಗೂ ಮತ್ತಿತರ ವಲಯಗಳಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳು, ಮೂಲಸೌಕರ್ಯಗಳ ಒದಗಿಸುವಿಕೆ, ಉದ್ಯೋಗ ಮುಂತಾದ ವಿಚಾರಗಳ ಕುರಿತು ಅವರಿಂದ ಸಲಹೆಗಳನ್ನು ಪಡೆದುಕೊಂಡರು.

ಬೆಂಗಳೂರಿನ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ ಹಾಗೂ ಇನ್ನಿತರ ಮಹತ್ವದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಮಿತಿ ರಚಿಸಲು ಮಾರ್ಗದರ್ಶನ ನೀಡುವಂತೆ ನಾರಾಯಣ ಮೂರ್ತಿ ಅವರಿಗೆ ಮನವಿ ಮಾಡಿದರು.

ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಪರಿಣಾಮಕಾರಿ ತ್ಯಾಜ್ಯ ನಿರ್ವಹಣೆ ಕುರಿತು ನಾರಾಯಣ ಮೂರ್ತಿ ಅವರು ತಮ್ಮ ಸಲಹೆಗಳನ್ನು ನೀಡಲಿದ್ದಾರೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿಯೇ ರಚಿಸಲಾಗುವ ಈ ಸಮಿತಿ ಎರಡು ತಿಂಗಳಿಗೆ ಒಮ್ಮೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಿದೆ.

ಸಂಪುಟ ವಿಸ್ತರಣೆ : ಕುಮಾರಸ್ವಾಮಿ ಸಂಪುಟ ಸೇರುವ 20 ಶಾಸಕರ ಪಟ್ಟಿ

ಈ ಸಮಿತಿಯ ಭಾಗವಾಗಿರಲು ನನಗೆ ಹೆಮ್ಮೆ ಇದೆ ಎಂದ ನಾರಾಯಣ ಮೂರ್ತಿ ಅವರು ಇನ್ನು ಎರಡು ತಿಂಗಳಲ್ಲಿ ತಮ್ಮ ಸಲಹೆಗಳನ್ನು ನೀಡುವುದಾಗಿ ತಿಳಿಸಿದರು.

ನೀವು ಅಧಿಕಾರದಲ್ಲಿರುವಾಗಲೂ, ಇಲ್ಲದಿರುವಾಗಲೂ ನಿಮ್ಮ ಚಟುವಟಿಕೆಗಳನ್ನು ನಾನು ಹತ್ತಿರದಿಂದ ಗಮನಿಸುತ್ತಿದ್ದೇನೆ. ನೀವು ರಾಜ್ಯದ ಜನತೆಗೆ, ಕೃಷಿಕರಿಗಾಗಿ ಮಾಡುತ್ತಿರುವ ಕೆಲಸ ಪ್ರಶಂಸನೀಯವಾಗಿದೆ. ಇಸ್ರೇಲ್‌ಗೆ ಭೇಟಿ ನೀಡಿ ಕೃಷಿ ಪದ್ಧತಿಯ ಅಧ್ಯಯನ ನಡೆಸಿದ್ದರ ಬಗ್ಗೆಯೂ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ನಗರ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತಹ ಸಂದರ್ಭದಲ್ಲಿ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರದ ಎನ್‌ಜಿಒಗಳನ್ನು ಸಹ ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ನಾರಾಯಣ ಮೂರ್ತಿ ಅವರು ಸಲಹೆ ನೀಡಿದರು.

'ಇಂದು ಇನ್ಫೋಸಿಸ್ ಸಹ ಸಂಸ್ಥಾಪಕರಾದ ಶ್ರೀ ಎನ್.ಆರ್. ನಾರಾಯಣ ಮೂರ್ತಿ ಅವರನ್ನು ಭೇಟಿ ಮಾಡಿದೆ. ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲು ಅವರ ಸಲಹೆಗಳನ್ನು ಕೋರಿದೆ' ಎಂದು ಕುಮಾರಸ್ವಾಮಿ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ನಾರಾಯಣ ಮೂರ್ತಿ ಹಾಗೂ ಕುಮಾರಸ್ವಾಮಿ ಅವರು ಈ ಹಿಂದಿನಿಂದಲೂ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರ್ ಅಭಿನಯಿಸಿದ್ದ 'ಜಾಗ್ವಾರ್' ಚಿತ್ರದ ಚಿತ್ರೀಕರಣಕ್ಕೆ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಅವಕಾಶ ಕಲ್ಪಿಸಲಾಗಿತ್ತು.

ಇದಕ್ಕೂ ಮುನ್ನ ಪುನೀತ್ ರಾಜ್‌ಕುಮಾರ್ ಅಭಿನಯದ 'ನಿನ್ನಿಂದಲೇ', ಉಪೇಂದ್ರ ಅಭಿನಯದ 'ಸೂಪರ್' ಸೇರಿದಂತೆ ಅನೇಕ ಚಿತ್ರತಂಡಗಳು ಚಿತ್ರೀಕರಣಕ್ಕೆ ಅವಕಾಶ ನೀಡುವಂತೆ ಇನ್ಫೋಸಿಸ್‌ಅನ್ನು ಸಂಪರ್ಕಿಸಿದ್ದವು. ಆದರೆ, ಅನುಮತಿ ನೀಡಿರಲಿಲ್ಲ. ಆದರೆ, ಜಾಗ್ವಾರ್ ಚಿತ್ರೀಕರಣಕ್ಕೆ ಇನ್ಫೋಸಿಸ್ ಉಚಿತವಾಗಿ ಅವಕಾಶ ನೀಡಿತ್ತು.

ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದ ವೇಳೆ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ. ಕುಮಾರಸ್ವಾಮಿ ಅವರು, ಬೆಂಗಳೂರಿನ ಇನ್ಫೋಸಿಸ್ ಕ್ಯಾಂಪಸ್‌ಗೆ ಭೇಟಿ ನೀಡಿದ್ದರು. ಆಗ ಇನ್ಫೋಸಿಸ್ ಕರ್ನಾಟಕದ ಹೆಮ್ಮೆ ಎಂದು ಬಣ್ಣಿಸಿದ್ದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Chief Minister HD Kumaraswamy met Infosys Co Founder NR Narayana Murthy on Friday. He discussed regarding the development of Bengaluru and other sectors and asked for his suggestion to the committee.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more