ರೈತ ಮಹಿಳೆಗೆ ಬೈಗುಳ, ವಿವಾದಕ್ಕೆ ಸ್ಪಷ್ಟನೆ ಕೊಟ್ಟರು ಕುಮಾರಸ್ವಾಮಿ
ಬೆಂಗಳೂರು, ನವೆಂಬರ್ 19: ನಾನು ಪಲಾಯನವಾದಿಯಲ್ಲ, ನಾಳೆ ವಿಧಾನಸೌಧದಲ್ಲಿ ರೈತರೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.
ರೈತರ ಪ್ರತಿಭಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ ಅವರು, ನಾನು ಆ ರೈತ ಮಹಿಳೆಯ ಬಗ್ಗೆ ಕೆಟ್ಟದಾಗಿ ಮಾತನಾಡಿಲ್ಲ, ನಾನು ಮಾತನಾಡಿದ ವಿಡಿಯೋ ಮತ್ತೆ ನೋಡಿ, ನಾನು ಆಕೆಗೆ 'ತಾಯಿ' ಎಂದು ಕರೆದಿದ್ದೇನೆ ಎಂದು ಹೇಳಿದರು.
ಸುದೀರ್ಘವಾಗಿ ಮಾತನಾಡಿದ ಕುಮಾರಸ್ವಾಮಿ ಅವರು, ಮಾಧ್ಯಮಗಳ ಮೇಲೂ ಅಸಮಾಧಾನ ಹೊರಹಾಕಿದರು. ನಾನು ಕೆಟ್ಟ ಉದ್ದೇಶದಿಂದ, ಅಗೌರವ ಮಾಡಬೇಕು ಎಂಬ ಉದ್ದೇಶದಿಂದ ಮಾತನಾಡಿಲ್ಲ, ಆ ಮಹಿಳೆಯನ್ನು 'ತಾಯಿ' ಎಂದು ಕರೆದು ಮಾತನಾಡಿದ್ದೇನೆ ಆದರೆ ನನ್ನ ಮಾತಿಗೆ ಬೇರೆ ಬಣ್ಣ ಬಳಿದು ತೋರಿಸಲಾಗಿದೆ ಎಂದು ಹೇಳಿದರು.
ನಾನು ಬೇಜವಾಬ್ದಾರಿಯ ಮನುಷ್ಯ ಅಲ್ಲ, ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ ಕೆಲಸ ಮಾಡುತ್ತಿದ್ದೇನೆ, ನಾನು ಯಾರ ಬಳಿಯಿಂದಲೂ ಹೇಳಿಸಿಕೊಂಡು ಕೆಲಸ ಮಾಡುವ ಅವಶ್ಯಕತೆ ಇಲ್ಲ ಎಂದು ಅವರು ಸಿಡಿಮಿಡಿಯಾದರು.

ಸಂಪುಟ ಸಭೆ ಕಾರಣ ಬೆಳಗಾವಿಗೆ ಹೋಗಿಲ್ಲ
ನಾನು ಪಲಾಯನ ಮಾಡುವನಲ್ಲ, ನಾನು ಬೆಳಗಾವಿಗೆ ಹೋಗದೇ ಇರುವುದಕ್ಕೆ ಸಂಪುಟ ಸಭೆ ಕಾರಣ ಅಷ್ಟೆ ಅಲ್ಲದೆ. ನಾನು ರೈತ ಮುಖಂಡರಿಗೆ ಇಲ್ಲಿಗೆ ಬರಲು ವ್ಯವಸ್ಥೆ ಮಾಡಿದ್ದೇನೆ. ನಾನು ಪಲಾಯನ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ತಮ್ಮನ್ನು ಸಮರ್ಥಿಸಿಕೊಂಡರು.

ರೈತರ ಮೇಲೆ ಕ್ರಮ ಇಲ್ಲ
ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ನಾವು ಸಹ ಪ್ರತಿಭಟನಾನಿರತ ರೈತರ ಮೇಲೆ ಕ್ರಮ ಕೈಗೊಳ್ಳಬೇಡಿ ಎಂದು ಪೊಲೀಸರಿಗೆ ಸೂಚಿಸಿದ್ದೆವು ಎಂದ ಕುಮಾರಸ್ವಾಮಿ, ನಿನ್ನೆ ಬೆಳಗಾವಿ ಸುವರ್ಣಸೌಧದ ಗೇಟ್ ಬಾಗಿಲು ಒಡೆಯುವ ಕಾರ್ಯ ಮಾಡಿದವರ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಂಪುಟ ಸಭೆಯಲ್ಲಿ 48 ಯೋಜನೆಗಳಿಗೆ ಅಸ್ತು
ಸಂಪುಟ ಸಭೆಯಲ್ಲಿ 48 ಯೋಜನೆಗಳ ಬಗ್ಗೆ ಚರ್ಚೆ ಮಾಡಿ ಅನುಮೋದನೆ ಪಡೆದಿದ್ದೇವೆ. ನಾನು ಬೆಳಗಾವಿಗೆ ಹೋಗಿ ರೈತರನ್ನು ಭೇಟಿ ಆಗದೇ ಇದ್ದುದ್ದಕ್ಕೆ ಇದೇ ಕಾರಣ. ಬೆಳಗಾವಿಗೆ ಹೋಗಲಾಗದ ಕಾರಣ ಅವರನ್ನು ಇಲ್ಲಿಗೆ ಬರಲು ಹೇಳಿದ್ದೇನೆ ಎಂದು ಅವರು ಹೇಳಿದರು.

ಮನವಿ ಮಾಡಿದ್ದರೂ ಪ್ರತಿಭಟನೆ ಮಾಡಿದ್ದಾರೆ
ನಾನು ಮೊನ್ನೆಯೇ ರೈತ ಮುಖಂಡರೊಡನೆ ದೂರವಾಣಿ ಮೂಲಕ ಮಾತನಾಡಿ ಮನವಿ ಮಾಡಿದ್ದೇನೆ, ಆದರೂ ಸಹ ಕೆಲವರು ಪ್ರತಿಭಟನೆ ಮಾಡಿದ್ದಾರೆ. ನನ್ನ ಪ್ರತಿಕೃತಿಗೆ ಕೊಡಲಿಯಿಂದ ಹೊಡೆದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ, ನಾಳೆ ರೈತ ಮುಖಂಡರ ಜೊತೆ ನೇರವಾಗಿ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.

ಯಡಿಯೂರಪ್ಪ ಮಾತಿಗೆ ಗರಂ
ತಮ್ಮ ವಿರುದ್ಧ ಆರೋಪಗಳನ್ನು ಮಾಡಿದ ಬಿಜೆಪಿಯವರ ಮೇಲೆ ವಿಶೇಷವಾಗಿ ಯಡಿಯೂರಪ್ಪ ಅವರ ಮೇಲೆ ಹರಿಹಾಯ್ದ ಸಿಎಂ, ಗೊಬ್ಬರ ಕೇಳಿದ ರೈತನಿಗೆ ಗುಂಡು ಹೊಡೆಸಿದ ಸರ್ಕಾರ ನಿಮ್ಮದು, ನೀವು ರೈತರ ಕಾಳಜಿ ಬಗ್ಗೆ ದೇವೇಗೌಡ, ಕುಮಾರಸ್ವಾಮಿ, ರೇವಣ್ಣಗೆ ಪಾಠ ಮಾಡುತ್ತೀರಾ ಎಂದು ಪ್ರಶ್ನೆ ಕೇಳಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications