ಎಚ್‌ಡಿಕೆ ಜನತಾ ದರ್ಶನ ಸಮಯ ಬದಲು: ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ
Recommended Video

ಬೆಂಗಳೂರು, ಆಗಸ್ಟ್ 27: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜನತಾ ದರ್ಶನ ಮಾಡುವ ಸಮಯ ಬದಲಾಗಿದ್ದು. ಇನ್ನು ಮುಂದೆ ಶನಿವಾರ ಮಾತ್ರವೇ ಸಿಎಂ ಅವರು ಸಾರ್ವಜನಿಕರನ್ನು ಭೇಟಿ ಆಗಲಿದ್ದಾರೆ.
ಅನಿಯಮಿತವಾಗಿ ಸಾರ್ವಜಿಕರು, ಗೃಹ ಕಚೇರಿ ಕೃಷ್ಣಾ, ವಿಧಾನಸೌಧದ ಸಿಎಂ ಕಚೇರಿ, ಜೆ.ಪಿ ನಗರ ನಿವಾಸಗಳಿಗೆ ಭೇಟಿ ನೀಡುತ್ತಿರುವ ಕಾರಣ ಮುಖ್ಯಮಂತ್ರಿಗಳ ನಿಗದಿತ ಕಾರ್ಯಕ್ರಮಗಳಿಗೆ ತೊಂದರೆ ಆಗುತ್ತಿದೆ ಹಾಗಾಗಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬದಲಾದ ವೇಳಾಪಟ್ಟಿಯ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಮುಖ್ಯಮಂತ್ರಿಗಳು ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳಿಗೆ ಸರಿಯಾದ ಸಮಯಕ್ಕೆ ಹೋಗಲಾಗುತ್ತಿಲ್ಲವಾದ ಕಾರಣ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಟ್ವಿಟ್ಟರ್‌ನಲ್ಲಿ ಪ್ರಕಟಿಸಿರುವ ಪತ್ರದಲ್ಲಿ ಹೇಳಿದ್ದಾರೆ.

ಶನಿವಾರ ಬೆಳಿಗ್ಗೆ 11 ರಿಂದ ಸಂಜೆ 4:30
ಇಷ್ಟು ದಿನ ಅನಿಯಮಿತವಾಗಿ ಸಮಯಾವಕಾಶ ಸಿಕ್ಕಾಗಲೆಲ್ಲಾ ಅಥವಾ ಪ್ರತಿದಿನ ಬೆಳಿಗ್ಗೆ ಸಮಯ ಗೃಹ ಕಚೇರಿ ಕೃಷ್ಣಾ ಎದುರು ಕುಮಾರಸ್ವಾಮಿ ಅವರು ಸಾರ್ವಜನಿಕರ ಭೇಟಿ ಆಗುತ್ತಿದ್ದರು. ಆದರೆ ಇನ್ನು ಮುಂದೆ ಶನಿವಾರ ಬೆಳಿಗ್ಗೆ 11 ರಿಂದ ಸಂಜೆ 4:30ರ ವರವರೆಗೆ ಮಾತ್ರ ಸಿಎಂ ಅವರು ಸಾರ್ವಜನಿಕರನ್ನು ಭೇಟಿ ಆಗಲಿದ್ದಾರೆ.

ಗೃಹ ಕಚೇರಿ ಕೃಷ್ಣಾ ಬಳಿ ಸಾರ್ವಜನಿಕ ಭೇಟಿ
ಮುಖ್ಯಮಂತ್ರಿ ಅವರು ಬೆಂಗಳೂರಿನಲ್ಲಿದ್ದಾಗ ಮಾತ್ರವೇ ಶನಿವಾರದಂದು ಸಾರ್ವಜನಿಕರ ದರ್ಶನಕ್ಕೆ ಸಿಗಲಿದ್ದು. ಸಾರ್ವಜನಿಕ ಭೇಟಿಯು ಗೃಹ ಕಚೇರಿ ಕೃಷ್ಣದಲ್ಲಿ ನಡೆಯಲಿದೆ.

ಖಾಸಗಿ ದೂರು ಸ್ವೀಕರಿಸುವುದಿಲ್ಲ
ಮುಖ್ಯಮಂತ್ರಿ ಅವರ ಸಾರ್ವಜನಿಕ ಭೇಟಿ ಸಂದರ್ಭದಲ್ಲಿ ಯಾವುದೇ ಖಾಸಗಿ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸಿಎಂ ಅವರ ಕಚೇರಿ ಮಾಹಿತಿ ನೀಡಿದೆ. ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದ ದೂರುಗಳೂ ಸಹ ಸಾರ್ವಜನಿಕ ಭೇಟಿ ಸಂದರ್ಭ ನೀಡುವಂತಿಲ್ಲ. ಸರ್ಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಮಾತ್ರವೇ ಸಾರ್ವಜನಿಕರು ನೀಡಬೇಕಿರುತ್ತದೆ.

ವೈದ್ಯಕೀಯ ಪರಿಹಾರಕ್ಕೆ ಬೇಡಿಕೆ ಇಡುವವರು ದಾಖಲಾತಿ ತನ್ನಿ
ವೈದ್ಯಕೀಯ ಪರಿಹಾರ ನಿಧಿಗೆ ಬೇಡಿಕೆ ಇಡುವವರು, ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ವೈದ್ಯಕೀಯ ಬಿಲ್ ವಿವರ, ಚಿಕಿತ್ಸೆಯ ವಿವರದ ಜೊತೆಗೆ ಲಿಖಿತ ಮನವಿ ಸಲ್ಲಿಸಬೇಕಿದೆ. ಸಾರ್ವಜನಿಕ ಭೇಟಿ ಸಮಯದಲ್ಲಿ ಮುಖ್ಯಮಂತ್ರಿಗಳ ಸಲಹೆ ಸೂಚನೆಯಂತೆ ತೆಗೆದುಕೊಳ್ಳಲಾದ ಕ್ರಮಗಳನ್ನು ಎಸ್‌ಎಂಎಸ್ ಮೂಲಕ ದೂರುದಾರರ ಗಮನಕ್ಕೆ ತರಲಾಗುವುದು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications