ಮಳೆ ಪೀಡಿತ ಜಿಲ್ಲೆಗಳಿಗೆ 200 ಕೋಟಿ ಬಿಡುಗಡೆ ಮಾಡಿದ ಸಿಎಂ
ಬೆಂಗಳೂರು, ಆಗಸ್ಟ್ 16: ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಿಗೆ ಕುಮಾರಸ್ವಾಮಿ ಅವರು 200 ಕೋಟಿ ಬಿಡುಗಡೆ ಮಾಡಿದ್ದಾರೆ.
ಇಂದು ಕೆಲವು ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಕುಮಾರಸ್ವಾಮಿ ಅವರು, ಮಳೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳಲ್ಲಿ ಸಂರಕ್ಷಣಾ ಕಾರ್ಯ ಹಾಗೂ ಪುನರ್ ವಸತಿಗೆ 200 ಕೋಟಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದರು.
ಇಂದಿನ ಸಭೆಯಲ್ಲಿ ಮಳೆಯಿಂದ ಉಂಟಾಗಿರುವ ಪ್ರವಾಹ ಹಾಗೂ ಭೂ ಕುಸಿತದ ಬಗ್ಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮಾಹಿತಿ ಪಡೆದರು.

ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಸಂಭವಿಸಿರುವ ನಷ್ಟದ ಕುರಿತು ಎರಡು ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚಿಸಿದರು.
ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿಯೇ ವಾಸ್ತವ್ಯ ಹೂಡಿ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ಮಾಡುತ್ತಿದ್ದಾರೆ. 29 ಗಂಜಿ ಕೇಂದ್ರಗಳನ್ನು ತೆರೆಯಲಾಗಿದ್ದು 1755ಜನರಿಗೆ ಆಶ್ರಯ ನೀಡಲಾಗಿದೆ ಎಂದು ಸಭೆಯಲ್ಲಿ ಮಾಃಇತಿ ನೀಡಿದರು.

ಮುಖ್ಯ ಮಂತ್ರಿಗಳು ಬಿಡುಗಡೆ ಮಾಡಲಿರುವ 200 ಕೋಟಿ ಅನುದಾನ ಕೊಡಗು,ದಕ್ಷಿಣ ಕನ್ನಡ,ಉಡುಪಿ,ಹಾಸನ, ಚಿಕ್ಕಮಗಳೂರು,ಉತ್ತರ ಕನ್ನಡ ಜಿಲ್ಲೆಗಳಿಗೆ ಸೇರಲಿದೆ.












Click it and Unblock the Notifications