ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿ-ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಮುಖ್ಯಾಂಶಗಳು

|
Google Oneindia Kannada News

ಬೆಂಗಳೂರು, ನವೆಂಬರ್ 22: ವ್ಯವಹಾರದಲ್ಲಿ ಏರು-ಪೇರಾದರೆ ನೀವು ತಡೆದುಕೊಳ್ಳಬಹುದು ಆದರೆ ಬೆಳೆದ ಬೆಳೆಗೆ ಬೆಲೆ ಕಡಿಮೆ ಆದರೆ ರೈತ ಕಂಗಾಲಾಗುತ್ತಾನೆ, ನೀವು ಕೂಡಲೇ ರೈತರ ಬಾಕಿ ಪಾವತಿಸಿ ಎಂದು ಸಿಎಂ ಕುಮಾರಸ್ವಾಮಿ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸೂಚಿಸಿದರು.

ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸುವ ಬಗ್ಗೆ ಸಿಎಂ ಕುಮಾರಸ್ವಾಮಿ ಅವರು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಕೃಷ್ಣ ಅತಿಥಿಗೃಹದಲ್ಲಿ ನಡೆಸಿದ ಸಭೆಯಲ್ಲಿ ಮಾತನಾಡಿದರು.

ಕುಮಾರಸ್ವಾಮಿ ಮಾತುಕತೆ ಬಳಿಕವೂ ನಿಂತಿಲ್ಲ ರೈತರ ಪ್ರತಿಭಟನೆ ಕುಮಾರಸ್ವಾಮಿ ಮಾತುಕತೆ ಬಳಿಕವೂ ನಿಂತಿಲ್ಲ ರೈತರ ಪ್ರತಿಭಟನೆ

ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ವಿವರವಾದ ಮಾಹಿತಿ ನೀಡಿದರು. ದೇಶದಲ್ಲಿ ಪ್ರಸ್ತುತ 230 ಲಕ್ಷ ಟನ್ ಸಕ್ಕರೆ ದಾಸ್ತಾನು ಇದೆ. ಹೆಚ್ಚುವರಿ ಉತ್ಪಾದನೆ ಸಮಸ್ಯೆಯನ್ನು ಸರಿಪಡಿಸಲು ಕೇಂದ್ರ ಸರ್ಕಾರ ಕಬ್ಬಿನಿಂದ ಇಥೆನಾಲ್ ಉತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದೆ. ಇದಲ್ಲದೆ ಎಫ್ಆರ್ ಪಿ ಪಾವತಿ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಗಳು ನಷ್ಟ ಅನುಭವಿಸಿದ ಸಂದರ್ಭದಲ್ಲಿ ನೆರವಾಗಲು ಸಕ್ಕರೆ ಸ್ಥಿರತೆಯ ನಿಧಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ವಿವರಿಸಿದರು.

ಮೊತ್ತ ಪಾವತಿಸುವುದು ಮಾಲೀಕರ ಬದ್ಧತೆ

ಮೊತ್ತ ಪಾವತಿಸುವುದು ಮಾಲೀಕರ ಬದ್ಧತೆ

ಮುಖ್ಯಮಂತ್ರಿಯವರು ಇದು ಸಕ್ಕರೆ ಕಾರ್ಖಾನೆ ಮಾಲೀಕರು ರೈತರೊಂದಿಗೆ ವಿಶ್ವಾಸದ ಮೇಲೆ ಮಾಡಿಕೊಂಡಿರುವ ಒಪ್ಪಂದ. ಆದ್ದರಿಂದ ಈ ಮೊತ್ತ ಪಾವತಿಸುವುದು ನಿಮ್ಮ ಬದ್ಧತೆ. ಕಾರ್ಖಾನೆ ಮಾಲೀಕರು ವ್ಯವಹಾರದಲ್ಲಿ ಆಗುವ ಏರುಪೇರುಗಳನ್ನು ಸರಿಪಡಿಸಿಕೊಳ್ಳುವ ಸಾಮರ್ಥ್ಯವಿರುತ್ತದೆ. ಆದರೆ ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಬಾರದಿದ್ದರೆ ಸುಧಾರಿಸಿಕೊಳ್ಳುವುದು ಸಾಧ್ಯವಿಲ್ಲ. ರೈತರ ಹಿತರಕ್ಷಣೆ ಸರ್ಕಾರದ ಕರ್ತವ್ಯವಾಗಿರುವುದರಿಂದ ರೈತರಿಗೆ ಒಪ್ಪಿಗೆ ಸೂಚಿಸಿದಂತೆ ಸೂಕ್ತ ದರ ನೀಡುವಂತೆ ಮುಖ್ಯಮಂತ್ರಿಗಳು ಕಾರ್ಖಾನೆ ಮಾಲೀಕರಿಗೆ ತಿಳಿಸಿದರು.

ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ಆರಂಭ, ಮಾಧ್ಯಮಗಳಿಗೆ ನಿರ್ಬಂಧಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ಆರಂಭ, ಮಾಧ್ಯಮಗಳಿಗೆ ನಿರ್ಬಂಧ

ಬೆಲೆ ಕುಸಿತದಿಂದ ಸಮಸ್ಯೆ ಆಗಿದೆ

ಬೆಲೆ ಕುಸಿತದಿಂದ ಸಮಸ್ಯೆ ಆಗಿದೆ

2017-18ನೇ ಸಾಲಿನಲ್ಲಿ ಸಕ್ಕರೆ ದರ ಏಕಾಏಕಿ ಕುಸಿದಿದ್ದರಿಂದ ಹಾಗೂ ಇನ್ನಿತರ ವಿವಿಧ ಸಮಸ್ಯೆಗಳ ಕಾರಣದಿಂದ ಈ ಸಮಸ್ಯೆ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ 2900 ರೂಪಾಯಿನಲ್ಲಿ ಸಾರಿಗೆ ಮತ್ತು ಕಟಾವು ವೆಚ್ಚ 650 ರೂಪಾಯಿ ಕಡಿತಗೊಳಿಸಿ, ಪ್ರತಿ ಟನ್ ಗೆ 2250 ರೂಪಾಯಿ ದರದಲ್ಲಿ ರೈತರಿಗೆ ನೀಡಲು ಒಪ್ಪಿಕೊಂಡಿರುವುದಾಗಿ ಮಾಲೀಕರು ತಿಳಿಸಿದರು.

ಬಡ ವ್ಯಾಪಾರಸ್ಥರಿಗಾಗಿ ಬಡವರ ಬಂಧು ಯೋಜನೆ ಆರಂಭ ಬಡ ವ್ಯಾಪಾರಸ್ಥರಿಗಾಗಿ ಬಡವರ ಬಂಧು ಯೋಜನೆ ಆರಂಭ

ಬೆಳಗಾವಿ ಕಾರ್ಖಾನೆಗಳು ದರ ಹೆಚ್ಚು ನೀಡಿವೆ

ಬೆಳಗಾವಿ ಕಾರ್ಖಾನೆಗಳು ದರ ಹೆಚ್ಚು ನೀಡಿವೆ

ಬೆಳಗಾವಿ ಜಿಲ್ಲೆಯಲ್ಲಿ ಬಹುತೇಕ ಕಾರ್ಖಾನೆಗಳು ಎಫ್ಆರ್ ಪಿ ದರಕ್ಕಿಂತ ಹೆಚ್ಚುವರಿ ಹಣವನ್ನು ನೀಡಿವೆ. ಉಳಿದ 9 ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಮ್ಮತಿಸಿದ ಮೊತ್ತ ನೀಡದಿದ್ದರೂ, ಎಫ್ಆರ್ ಪಿ ದರಕ್ಕಿಂತ ಹೆಚ್ಚಿಗೆ ದರ ಪಾವತಿಸಿರುವುದಾಗಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ರೈತರೊಂದಿಗೆ ಚರ್ಚಿಸಿ ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳುವುದಾಗಿ ಮಾಲೀಕರು ತಿಳಿಸಿದರು.

ಕಾಂಗ್ರೆಸ್‌ ಹೈಕಮಾಂಡ್‌ನಿಂದ ಕುಮಾರಸ್ವಾಮಿ ಮೇಲೆ ಒತ್ತಡ: ಕಾರಣ ಏನು? ಕಾಂಗ್ರೆಸ್‌ ಹೈಕಮಾಂಡ್‌ನಿಂದ ಕುಮಾರಸ್ವಾಮಿ ಮೇಲೆ ಒತ್ತಡ: ಕಾರಣ ಏನು?

ರೈತರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ

ರೈತರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ

ರೈತರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ. ಯಾವುದೇ ರೀತಿಯ ಗೊಂದಲಕ್ಕೆ ಎಡೆ ಮಾಡದಂತೆ ರೈತರೊಂದಿಗೆ ಚರ್ಚಿಸಿ, ಸಮಸ್ಯೆಯನ್ನು ಬಗೆಹರಿಸುವಂತೆ ಮಾಲೀಕರಿಗೆ ಸೂಚನೆ ನೀಡಿದರು. ಈಗಾಗಲೇ ಕಟಾವಿಗೆ ಸಿದ್ಧವಿರುವ ಕಬ್ಬನ್ನು ಅರೆಯಲು ರೈತರೊಂದಿಗೆ ಕ್ರಮ ಬದ್ಧ ಒಪ್ಪಂದ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ರೈತರೊಂದಿಗೆ ಸಮನ್ವಯ ಸಾಧಿಸಿ ಕಬ್ಬು ಅರೆಯುವ ಪ್ರಕ್ರಿಯೆ ಮುಂದುವರಿಸಲು ಸೂಚಿಸಿದರು.

'ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ'

'ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ'

ಪ್ರಸಕ್ತ ಹಂಗಾಮಿನಲ್ಲಿ ಇಂತಹ ಯಾವುದೇ ಗೊಂದಲವಾಗದಂತೆ ಎಚ್ಚರ ವಹಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ಸೂಚಿಸಿದರು.. ಎಲ್ಲ ಸಕ್ಕರೆ ಕಾರ್ಖಾನೆ ಮಾಲೀಕರು ಕಡ್ಡಾಯವಾಗಿ ಎಫ್.ಆರ್.ಪಿ. ದರ ಪಾವತಿಸಬೇಕು. ಇದಕ್ಕೆ ಸರ್ಕಾರದ ಮಾರ್ಗಸೂಚಿಗಳಂತೆ ಪ್ರತಿ ರೈತನೊಂದಿಗೆ ಕಡ್ಡಾಯವಾಗಿ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಬೇಕು. ನಂತರ ಕಬ್ಬು ನಿಯಂತ್ರಣ ಮಂಡಳಿಯ ನಿರ್ಣಯಗಳಂತೆ ಆದಾಯ ಹಂಚಿಕೆ ಸೂತ್ರ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.. ಇದಲ್ಲದೆ ರೈತರಿಗೆ ತೂಕ ಹಾಗೂ ಇಳುವರಿ ಪ್ರಮಾಣ ನಿಗದಿಯಲ್ಲಿ ಪಾರದರ್ಶಕತೆ ತರಲು ಸರ್ಕಾರ ಹೊರಡಿಸುವ ಸುತ್ತೋಲೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದರು.

ಸಭೆಯಲ್ಲಿ ಭಾಗವಹಿಸದವರು ಯಾರ್ಯಾರು?

ಸಭೆಯಲ್ಲಿ ಭಾಗವಹಿಸದವರು ಯಾರ್ಯಾರು?

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಹಾಗೂ ಇತರ ಅಧಿಕಾರಿಗಳು, ಮಾಜಿ ಸಚಿವರಾದ ಎಸ್.ಆರ್. ಪಾಟೀಲ, ಸತೀಶ್ ಜಾರಕಿಹೊಳಿ, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ ಸೇರದಂತೆ 31 ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆ ಮಾಲೀಕರ ಒಕ್ಕೂಟದ ಅಧ್ಯಕ್ಷ ಉಪಸ್ಥಿತರಿದ್ದರು.

English summary
CM Kumaraswamy conduct meeting with Sugar factory owners today. He requested factory owners to pay pending money of farmers as soon as possible. He also said owners should follow government rules.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X