ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೆನಗುದಿಗೆ ಬಿದ್ದಿದ್ದ ಯೋಜನೆಗೆ ಕೇಂದ್ರದ ಗ್ರೀನ್ ಸಿಗ್ನಲ್: ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ

ನೆನಗುದಿಗೆ ಬಿದ್ದಿದ್ದ ಯೋಜನೆಗೆ ಕೇಂದ್ರದ ಗ್ರೀನ್ ಸಿಗ್ನಲ್: ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ

|
Google Oneindia Kannada News

Recommended Video

ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ..! | Oneindia Kannada

ಹಾಸನ ಡಿ.1: ಕಳೆದ 25 ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಮೇಕೆದಾಟು ಯೋಜನೆ ಜಾರಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಅನುಮತಿ ನೀಡುವ ಮೂಲಕ ಕೇಂದ್ರ ಸರ್ಕಾರ ಮಾಡಿರುವ ಸಹಕಾರಕ್ಕೆ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಹಾಸನ ನಗರದ ನೂತನ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ ವಲಯದ ವತಿಯಿಂದ ಏರ್ಪಡಿಸಲಾಗಿದ್ದ 1,865 ಕೋಟಿ ರೂಪಾಯಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೂಂಡು ಮುಖ್ಯಮಂತ್ರಿ ಮಾತನಾಡಿದರು. (ಮೇಕೆದಾಟು ಯೋಜನೆಗೆ ಒಪ್ಪಿಗೆ ಸಿಗುವ ವಿಶ್ವಾಸ,ಎಚ್ಡಿಕೆ)

ರಾಜ್ಯದಲ್ಲಿ ಆಧುನಿಕ ಕೃಷಿ ಪದ್ದತಿ ಅಳವಡಿಕೆ ಬಗ್ಗೆ ತಾವು 12 ವರ್ಷಗಳ ಹಿಂದೆಯೇ ಚಿಂತಿಸಿದ್ದು ಈಗಾಗಲೇ ಇಸ್ರೇಲ್ ಮಾದರಿಯಲ್ಲಿ ತಂತ್ರಜ್ಞಾನಗಳ ಬಳಕೆಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿನೂತನ ಕ್ತಮಗಳನ್ನು ಜಾರಿ ತರಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು‌

ಜೈವಿಕ ಇಂಧನ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ, ಪ್ರತಿ ಜಿಲ್ಲೆಗೆ ಇಬ್ಬರಂತೆ 60 ತಜ್ಞ ರೈತರ ಸಮಿತಿ ರಚಿಸಲಾಗಿದೆ, ಅವರೊಂದಿಗೆ ಚರ್ಚಿಸಿ ಹೊಸ ಕೃಷಿ ಯೋಜನೆಗಳ ಜಾರಿಗೆ ತರಲು ಕ್ರಮವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. (ಶಿರಾಡಿ ಘಾಟ್ ಬಂದ್ ಹಿಂದೆ ಭಾರೀ ಗುಮಾನಿ)

ಕೇಂದ್ರ ಸರ್ಕಾರದ ಸಹಭಾಗಿತ್ವ ಮತ್ತು ಸಹಕಾರ

ಕೇಂದ್ರ ಸರ್ಕಾರದ ಸಹಭಾಗಿತ್ವ ಮತ್ತು ಸಹಕಾರ

ರಾಜ್ಯದ ಸಮಗ್ರ ಅಭಿವೃದ್ಧಿ ತಮ್ಮ ಆದ್ಯತೆಯಾಗಿದ್ದು ಎಲ್ಲರನ್ನು ಒಳಗೊಂಡ ಸುಸ್ಥಿರ ಅಭಿವೃದ್ಧಿಯತ್ತ ಗಮನ ಹರಿಸಲಾಗಿದೆ. ಇದಕ್ಕೆ ಕೇಂದ್ರ ಸರ್ಕಾರದ ಸಹಭಾಗಿತ್ವ ಮತ್ತು ಸಹಕಾರವನ್ನು ಕೋರುತ್ತೇನೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಹೇಳಿದರು.

ನಮ್ಮ ತಂದೆ ಹೆಚ್.ಡಿ. ದೇವೇಗೌಡರು

ನಮ್ಮ ತಂದೆ ಹೆಚ್.ಡಿ. ದೇವೇಗೌಡರು

ನಮ್ಮ ತಂದೆ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರ ನಡುವೆ ಉತ್ತಮ ಬಾಂಧವ್ಯ ಇದ್ದು ಅದರ ಫಲವಾಗಿ ಅನೇಕ ಯೋಜನೆಗಳಿಗೆ ಕೇಂದ್ರ ನೆರವು ದೊರೆತಿದೆ. ಇದ್ದಕ್ಕಾಗಿ ಧನ್ಯವಾದಗಳನ್ನು ಸಮರ್ಪಿಸುವುದಾಗಿ ಅವರು ಸಿಎಂ ಕುಮಾರಸ್ವಾಮಿ ಹೇಳಿದರು.

ಹುಸಿ ಅಶ್ವಾಸನೆಗಳನ್ನು ನೀಡುವುದಿಲ್ಲ

ಹುಸಿ ಅಶ್ವಾಸನೆಗಳನ್ನು ನೀಡುವುದಿಲ್ಲ

ಶಂಕುಸ್ಥಾಪನೆ ನೆರವೇರಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರು ಮಾತನಾಡಿ ಅಭಿವೃದ್ಧಿ ವಿಚಾರದಲ್ಲಿ ತಾವೆಂದೂ ರಾಜಕೀಯ ಬೆರೆಸುವುದಿಲ್ಲ ಮತ್ತು ಹುಸಿ ಅಶ್ವಾಸನೆಗಳನ್ನು ನೀಡುವುದಿಲ್ಲ. ಸಾಧ್ಯವಾದದ್ದನ್ನ ಮಾತ್ರವೇ ಹೇಳುತ್ತೇನೆ ಮತ್ತು ಅದನ್ನು ಮಾಡಿಯೇ ತೀರುತ್ತೇನೆ. ಕರ್ನಾಟಕ ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ 2 ಲಕ್ಷ ಕೋಟಿ ರೂಪಾಯಿಗಳ ವಿವಿಧ ರಸ್ತೆ ಕಾಮಗಾರಿಗಳನ್ನು ಕೇಂದ್ರ ಸರ್ಕಾರದ ವತಿಯಿಂದ ಕೈಗೊಳ್ಳಲಾಗಿದೆ - ನಿತಿನ್ ಗಡ್ಕರಿ

ನೀರಿನ ಬವಣೆ ನೀಗಿಸಲು ನದಿಗಳ ಜೋಡಣೆ

ನೀರಿನ ಬವಣೆ ನೀಗಿಸಲು ನದಿಗಳ ಜೋಡಣೆ

ಕೆಲವು ಯೋಜನೆಗಳು ಪ್ರಾರಂಭವಾಗಿದ್ದು ಉಳಿದವು ವಿವಿಧ ಹಂತದಲ್ಲಿವೆ. ಕರ್ನಾಟಕ ಸಾಕಷ್ಟು ಅಭಿವೃದ್ದಿ ಸಾಧಿಸಿರುವುದು ಹೆಮ್ಮೆಯ ವಿಚಾರ. ಕೇಂದ್ರ ಸರ್ಕಾರ ರಾಜ್ಯದ ಪ್ರಗತಿಗೆ ಎಲ್ಲಾ ರೀತಿಯ ಸಹಕಾರ ಮತ್ತು ನೆರವು ನೀಡಲು ಸಿದ್ಧ ಎಂದ ನಿತಿನ್ ಗಡ್ಕರಿ ಅವರು ನೀರಿನ ಬವಣೆ ನೀಗಿಸಲು ನದಿಗಳ ಜೋಡಣೆ ಕಾರ್ಯಕ್ರಮವನ್ನು ಜಾರಿಗೆ ತರಲು ಕ್ರಮವಹಿಸಿಲಾಗಿದೆ - ನಿತಿನ್ ಗಡ್ಕರಿ

ಗೋದಾವರಿ ನದಿಯಿಂದ ವ್ಯರ್ಥವಾಗಿ ಸಮುದ್ರ ಸೇರುವ ನೀರು

ಗೋದಾವರಿ ನದಿಯಿಂದ ವ್ಯರ್ಥವಾಗಿ ಸಮುದ್ರ ಸೇರುವ ನೀರು

ಪೋಲಾವರ ಅಣೆಕಟ್ಟು ಯೋಜನೆಗೆ 80,000 ಕೋಟಿ ರೂಪಾಯಿ ವಿನಿಯೋಗಿಸಲಾಗುವುದು. ಗೋದಾವರಿ ನದಿಯಿಂದ ವ್ಯರ್ಥವಾಗಿ ಸಮುದ್ರ ಸೇರುವ ನೀರನ್ನು ಕೃಷ್ಣ ನದಿಗೆ ಅಲ್ಲಿಂದ ಕಾವೇರಿ ನದಿಗೆ ಹರಿಸುವ ಯೋಜನೆ ಇದಾಗಿದೆ. ಕರ್ನಾಟಕ ಹಾಗೂ ತಮಿಳುನಾಡಿಗೆ ಇದರಿಂದ‌ 452 ಟಿ.ಎಂ.ಸಿ. ಹೆಚ್ಚುವರಿ ನೀರು ಲಭ್ಯವಾಗಲಿದೆ. ಹೀಗಾಗಿ ಎರಡು ರಾಜ್ಯಗಳ ನಡುವೆ ನೀರಿನ ವಿಷಯವಾಗಿ ಇರುವ ಹೋರಾಟ ಅಂತ್ಯಗೊಳ್ಳಲಿದೆ ಎನ್ನುವ ಆಶಾಭಾವವನ್ನು ನಿತಿನ್ ಗಡ್ಕರಿ ವ್ಯಕ್ತ ಪಡಿಸಿದರು.

English summary
Chief Minister HD Kumaraswamy thanks to Union Minister Nitin Gadkari and Modi Government for Mekedatu Project over Cauvery river. Nitin Gadkari said, for development union government will not do any politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X