ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ.ಕ. ಜಿಲ್ಲೆಯಲ್ಲಿ ಪ್ರವಾಹ: ಮಾಹಿತಿ ಪಡೆದ ಸಿಎಂ ಕುಮಾರಸ್ವಾಮಿ

By Manjunatha
|
Google Oneindia Kannada News

ಬೆಂಗಳೂರು, ಮೇ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಪ್ರವಾಹದಿಂದ ಸಾರ್ವಜನಿಕರನ್ನು ರಕ್ಷಿಸಲು ಅಗತ್ಯವಿದ್ದಲ್ಲಿ ಕೋಸ್ಟ್ ಗಾರ್ಡ್ ನೆರವು ಪಡೆಯುವಂತೆ ಹಾಗೂ ಹೆಚ್ಚಿನ ಅನಾಹುತಗಳಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.

ಭಾರೀ ಮಳೆ ಹಿನ್ನೆಲೆ: ದ.ಕ.ದಲ್ಲಿ 2 ದಿನ ಶಾಲಾ ಕಾಲೇಜುಗಳಿಗೆ ರಜೆಭಾರೀ ಮಳೆ ಹಿನ್ನೆಲೆ: ದ.ಕ.ದಲ್ಲಿ 2 ದಿನ ಶಾಲಾ ಕಾಲೇಜುಗಳಿಗೆ ರಜೆ

ನಿನ್ನೆ ರಾತ್ರಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆಲವು ಕಡೆ ಜೀವ ಹಾನಿ ಸಂಭವಿಸಿದ್ದರೆ, ಹಲವು ಕಡೆ ಆಸ್ತಿ ಹಾನಿ ಹಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ.

In Pics: ಮಳೆಯ ರುದ್ರನರ್ತನಕ್ಕೆ ನಲುಗಿದ ದಕ್ಷಿಣ ಕನ್ನಡ, ಉಡುಪಿ

CM Kumaraswamy took information about heavy rain in costal district

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಯಶಸ್ವಿನಿ ಯೋಜನೆ ಹಾಗೂ ಇತ್ತೀಚೆಗೆ ಜಾರಿಗೊಳಿಸಲಾದ ಆರೋಗ್ಯ ಕರ್ನಾಟಕ ಯೋಜನೆ ಕುರಿತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.

ಈ ಯೋಜನೆಗಳಿಂದ ಬಡವರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಕುರಿತು ಎಲ್ಲ ಅಂಶಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಮಾಹಿತಿಯೊಂದಿಗೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಜಯ್ ಸೇಠ್ ಅವರಿಗೆ ಕುಮಾರಸ್ವಾಮಿ ಸೂಚಿಸಿದ್ದಾರೆ.

English summary
CM Kumaraswamy took information about flood in costal districts and suggest to take help of navy force to rescue people. He also took information about Yashaswini project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X