ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಡಿಎಸ್-ಕಾಂಗ್ರೆಸ್ ಸೋಲಿನ ಕುರಿತು ಕುಮಾರಸ್ವಾಮಿ ಟ್ವೀಟ್

|
Google Oneindia Kannada News

ಬೆಂಗಳೂರು, ಮೇ 23: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳಿಗೆ ಎದುರಾಗಿರುವ ಹೀನಾಯ ಸೋಲಿನ ಕುರಿತು ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಚುನಾವಣೆ ಫಲಿತಾಂಶ 2019: ರಾಜ್ಯವಾರು ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಚುನಾವಣೆ ಫಲಿತಾಂಶ 2019: ರಾಜ್ಯವಾರು ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ಸಂಸದರಾಗಿ ಆಯ್ಕೆ ಆಗಿರುವ ರಾಜ್ಯದ ಅಭ್ಯರ್ಥಿಗಳಿಗೆ ಶುಭಾಶಯಗಳ ಹೇಳಿರುವ ಕುಮಾರಸ್ವಾಮಿ, ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ. ಈ ಫಲಿತಾಂಶವನ್ನು ಗೌರವಿಸುತ್ತೇನೆ ಹಾಗೂ ಮತ್ತೊಮ್ಮೆ ಜನಾದೇಶ ಪಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

ಚುನಾವಣೆ ಸೋಲಿನ ಬಗ್ಗೆಯೂ ಪ್ರತಿಕ್ರಿಯಿಸಿರುವ ಅವರು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ ಎಂದಿದ್ದಾರೆ.

'ಜೆಡಿಎಸ್ ಹಲವು ಸೋಲು-ಗೆಲುವು ಕಂಡಿದೆ'

'ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ. ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ' ಎಂದು ಕಾರ್ಯಕರ್ತರಲ್ಲಿ ವಿಶ್ವಾಸ ತುಂಬಿದ್ದಾರೆ ಎಚ್‌ಡಿಕೆ.

ಮೈತ್ರಿ ಕಾರ್ಯಕರ್ತರಿಗೆ ಅಭಿನಂದನೆ: ಎಚ್‌ಡಿಕೆ

ಚುನಾವಣೆಯ ಸಂದರ್ಭದಲ್ಲಿ ಸಹಕರಿಸಿದ ಮೈತ್ರಿ ಪಕ್ಷಗಳ ಎಲ್ಲ ಕಾರ್ಯಕರ್ತರಿಗೆ ಹೃದಯ ಪೂರ್ವಕ ಧನ್ಯವಾದ ಎಂದು ಸೋಲಿನ ಸಮಯದಲ್ಲೂ ಮೈತ್ರಿ ಪಕ್ಷದವರನ್ನು ನೆನಪಿಸಿಕೊಂಡಿದ್ದಾರೆ.

ದೇವೇಗೌಡ ಅವರ ಭೇಟಿ ಆದ ಕುಮಾರಸ್ವಾಮಿ

ದೇವೇಗೌಡ ಅವರ ಭೇಟಿ ಆದ ಕುಮಾರಸ್ವಾಮಿ

ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನದ ವೇಳೆಗೆ ದೇವೇಗೌಡ ಅವರನ್ನು ಭೇಟಿ ಆಗಿ ದೀರ್ಘಕಾಲ ಮಾತುಕತೆ ನಡೆಸಿದರು. ಇಬ್ಬರೂ ನಾಯಕರು ಪಕ್ಷದ ಉಳಿವು, ಮತ್ತು ಮುಂದೆ ಇಡಬಹುದಾದ ಹೆಜ್ಜೆಯ ಬಗ್ಗೆ ಕೂಲಂಕುಶವಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ನಿಖಿಲ್ ಸೋಲಿನಿಂದ ತೀವ್ರ ಆಘಾತ

ನಿಖಿಲ್ ಸೋಲಿನಿಂದ ತೀವ್ರ ಆಘಾತ

ನಿಖಿಲ್ ಕುಮಾರಸ್ವಾಮಿ ಸೋಲು ಕುಮಾರಸ್ವಾಮಿ ಅವರಿಗೆ ತೀವ್ರ ಆಘಾತ ತಂದಿದೆ ಎನ್ನಲಾಗಿದೆ. ತಂದೆ-ಮಗ ಇಬ್ಬರೂ ಸಹ ಸೋತಿರುವುದು ಸಹಜವಾಗಿಯೇ ಸಿಎಂ ಅವರನ್ನು ಅಧೀರರನ್ನಾಗಿಸಿದೆ. ಹಾಗಾಗಿಯೇ ಅವರು ಇಂದು ಯಾವುದೇ ಸುದ್ದಿಗೋಷ್ಠಿ ಮಾಡಿಲ್ಲ.

English summary
CM Kumaraswamy tweet about lok sabha election defeat. He tweeted about election result and said in democracy winning and loosing is common. He also said congress and JDS leaders will think about the defeat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X