ಗುರುವಾರ ಸಿಎಂ ವಿಶ್ವಾಸಮತ ಯಾಚನೆ: ಸರ್ಕಾರದ ಭವಿಷ್ಯ ಅಂದೇ ನಿರ್ಧಾರ
Recommended Video
ಬೆಂಗಳೂರು, ಜುಲೈ 15: ಸಿಎಂ ಕುಮಾರಸ್ವಾಮಿ ಅವರು ವಿಧಾನಸಭೆಯಲ್ಲಿ ಗುರುವಾರ (ಜುಲೈ 18) ರಂದು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.
ಇಂದೇ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮಾಡಬೇಕು ಎಂದು ಬಿಜೆಪಿ ಪಟ್ಟು ಹಿಡಿದಿತ್ತು, ಆದರೆ ಕಲಾಪ ಸಲಹ ಸಮಿತಿ ಸಭೆಯಲ್ಲಿ ಚರ್ಚೆ ನಡೆದು ವಿಶ್ವಾಸಮತ ಯಾಚನೆಗೆ ಗುರುವಾರದ ಸಮಯ ನಿಗದಿ ಪಡಿಸಲಾಗಿದೆ.
ಕಳೆದ ಶುಕ್ರವಾರ (ಜುಲೈ 12) ಅಧಿವೇಶನದ ಮೊದಲ ದಿನವೇ ಸ್ವಯಂ ಪ್ರೇರಿತರಾಗಿ ತಾವು ವಿಶ್ವಾಸಮತ ಯಾಚಿಸುವುದಾಗಿ ಹೇಳಿದ್ದರು. ಆ ನಂತರ ನಡೆದ ಬೆಳವಣಿಗೆಗಳಲ್ಲಿ ಅತೃಪ್ತರ ಅರ್ಜಿ ವಿಚಾರಣೆ ನಡೆಸಿ ಸುಪ್ರಿಂ ಕೋರ್ಟ್ ನೀಡಿದ ಪ್ರಾಥಮಿಕ ಆದೇಶ ಮಹತ್ವ ಪಡೆದುಕೊಂಡಿತು.

ಸುಪ್ರಿಂಕೋರ್ಟ್ ನಾಳೆ ಅತೃಪ್ತ ಶಾಸಕರ ಅರ್ಜಿ ವಿಚಾರಣೆ
ನಾಳೆ ಮತ್ತೆ ಅತೃಪ್ತರ ಅರ್ಜಿಗಳ ವಿಚಾರಣೆಯನ್ನು ಸುಪ್ರಿಂಕೋರ್ಟ್ ನಡೆಸಲಿದ್ದು, ನಾಳಿನ ವಿಚಾರಣೆ ಮತ್ತು ಆದೇಶ ರಾಜ್ಯ ರಾಜಕೀಯದ ಮಟ್ಟಿಗೆ ಭಾರಿ ಮಹತ್ವದ್ದಾಗಿದೆ. ಆದ ಕಾರಣದಿಂದಲೇ ಕುಮಾರಸ್ವಾಮಿ ಸಹ ನಾಳಿನ ಸುಪ್ರಿಂಕೋರ್ಟ್ ವಿಚಾರಣೆಯ ಬಳಿಕವೇ ವಿಶ್ವಾಸಮತ ಯಾಚನೆ ಮಾಡುವ ನಿರ್ಣಯಕ್ಕೆ ಬಂದಿದ್ದರು.

ಕಲಾಪ ಸಲಹಾ ಸಮಿತಿಯಲ್ಲಿ ನಿರ್ಣಯ
ಇಂದು ಬೆಳಿಗ್ಗೆ ವಿಧಾನಸೌಧದಲ್ಲಿ ಸ್ಪೀಕರ್ ಅವರನ್ನು ಯಡಿಯೂರಪ್ಪ ಭೇಟಿಯಾಗಿ ಇಂದೇ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಆದರೆ ನಂತರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಬಹು ಸಮಯ ಚರ್ಚೆ ನಡೆದ ಬಳಿಕ ವಿಶ್ವಾಸಮತ ಯಾಚನೆಗೆ ದಿನಾಂಕ ಮತ್ತು ಸಮಯ ನಿಗದಿ ಮಾಡಲಾಗಿದೆ.

18 ಶಾಸಕರ ಬೆಂಬಲ ಕಳೆದುಕೊಂಡಿದೆ ಮೈತ್ರಿ
ಪ್ರಸ್ತುತ 18 ಶಾಸಕರ ಬೆಂಬಲ ಕಳೆದುಕೊಂಡಿರುವ ಮೈತ್ರಿ ಸರ್ಕಾರಕ್ಕೆ ಬಹುಮತದ ಕೊರತೆ ಇದೆ. ಆದರೆ ವಿಶ್ವಾಸಮತ ಯಾಚನೆಗೆ ಇನ್ನೂ ಮೂರು ದಿನಗಳ ಕಾಲಾವಕಾಶ ಇರುವ ಕಾರಣ ಈ ನಡುವೆ ಬಹುಮತ ಸಂಪಾದಿಸುವ ಕಾರ್ಯದಲ್ಲಿ ಮೈತ್ರಿ ಪಕ್ಷಗಳು ತೊಡಗಲಿವೆ.

ಉತ್ಸಾಹದಲ್ಲಿದೆ ಬಿಜೆಪಿ
ಬಿಜೆಪಿಯು ತನ್ನೆಲ್ಲಾ ಶಾಸಕರನ್ನು ರೆಸಾರ್ಟ್‌ನಲ್ಲಿ ಒಟ್ಟಿಗೆ ಇರಿಸಿಕೊಂಡಿರುವ ಜೊತೆಗೆ ಕಾಂಗ್ರೆಸ್-ಜೆಡಿಎಸ್ ನಿಂದ ಕರೆತಂದಿರುವ ಅತೃಪ್ತ ಶಾಸಕರನ್ನೂ ಸಹ ಜಾಗೃತೆಯಿಂದ ಕಾಪಾಡುತ್ತಿದೆ. ಹೆಚ್ಚು ಸಂಖ್ಯಾಬಲ ಹೊಂದಿರುವ ಬಿಜೆಪಿಯು ವಿಶ್ವಾಸಮತದಲ್ಲಿ ಸರ್ಕಾರವನ್ನು ಸೋಲಿಸುವ ಉತ್ಸಾಹದಲ್ಲಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications