ಬಜೆಟ್ ಘೋಷಣೆ ಅನುಷ್ಠಾನ; ವೈದ್ಯಕೀಯ ಶಿಕ್ಷಣ ಇಲಾಖೆ ಜೊತೆ ಸಿಎಂ ಸಭೆ

ಬೆಂಗಳೂರು, ಮೇ 04 : ಕರ್ನಾಟಕ ಬಜೆಟ್ 2022-23ರಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿತ್ತು. ಬಜೆಟ್ ಯೋಜನೆ ಅನುಷ್ಠಾನದ ಕುರಿತು ಈಗ ಮುಖ್ಯಮಂತ್ರಿಗಳು ಗಮನಹರಿಸಿದ್ದಾರೆ.

ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23 ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ಯೋಜನೆಗಳ ಅನುಷ್ಠಾನ ಕುರಿತಾಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಬಜೆಟ್‌ನಲ್ಲಿ ಘೋಷಣೆ ಮಾಡಿದ ಯೋಜನೆಗಳು, ಅದರ ಅನುಷ್ಠಾನದ ಕುರಿತು ಸಭೆಯಲ್ಲಿ ಮುಖ್ಯಮಂತ್ರಿಗಳು ಇಲಾಖೆಯ ಅಧಿಕಾರಿಗಳಿಗೆ ಕೆಲವೊಂದು ಮಹತ್ವದ ಸೂಚನೆಯನ್ನು ನೀಡಿದರು.

CM Meeting Highlights on Plan Implementation announced in Budget for Medical Education Department

ಬಜೆಟ್‌ನಲ್ಲಿ ಘೋಷಣೆಯಗಿರುವ ಯೋಜನೆಗಳಿಗೆ ವೇಗವನ್ನು ನೀಡುವ ಕುರಿತು ಮುಖ್ಯಮಂತ್ರಿಗಳು ಸೂಚನೆಯನ್ನು ನೀಡಿದರು. ಹುಬ್ಬಳ್ಳಿಯಲ್ಲಿ 250 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರಕ್ಕೆ ಆಗಸ್ಟ್ 15 ರೊಳಗೆ ಶಂಕುಸ್ಥಾಪನೆ ನೆರವೇರಿಸಲು ಕ್ರಮ ವಹಿಸಲು ನಿರ್ದೇಶನ ನೀಡಲಾಯಿತು.

ಕರ್ನಾಟಕದಲ್ಲಿ ಪಿಜಿ ಕೇಂದ್ರವನ್ನು ಸ್ಥಾಪಿಸಲು ಎಲ್ಲಾ ಸೌಕರ್ಯಗಳಿವೆ. ಇದನ್ನು ಪ್ರಾರಂಭಿಸಲು ಅಗತ್ಯವಿರುವ ಅನುಮೋದನೆಯನ್ನು ರಾಷ್ಟ್ರೀಯ ವೈದ್ಯಕೀಯ ಮಂಡಳಿಯಿಂದ ಪಡೆಯಬೇಕು. ಇದಕ್ಕಾಗಿ ಯಾವೆಲ್ಲಾ ಕಾರ್ಯಗಳನ್ನು ಮಾಡಬೇಕು. ಕೇಂದ್ರ ಸರ್ಕಾರದಿಂದ ಹೇಗೆ ಅನುಮೋದನೆಯನ್ನು ಪಡೆಯಬೇಕು ಎಂಬುದನ್ನು ಚರ್ಚಿಸಿದರು.

ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಿಂದ ಅಗತ್ಯವಿರುವ ಪಿಜಿ ಸ್ಥಾನಗಳ ಬಗ್ಗೆ ಮಾಹಿತಿ ಪಡೆಯಲು ಸೂಚಿಸಿದರು. ಇನ್ನು ರಾಮನಗರ ಜಿಲ್ಲೆಯಲ್ಲಿ ಸದಾ ವಿವಾದಕ್ಕೆ ಆಸ್ಪದವಾಗುತ್ತಿದ್ದ ಅರ್ಚಕರಹಳ್ಳಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಪ್ರಕ್ರಿಯೆಗಳನ್ನು ಕೂಡಲೇ ಪೂರ್ಣಗೊಳಿಸಿ ಜೂನ್ ಅಂತ್ಯದೊಳಗೆ ಕಾಲೇಜು ನಿರ್ಮಾಣ ಕಾರ್ಯ ಪ್ರಾರಂಭಿಸಬೇಕು ಎಂದು ಸೂಚಿಸಿದರು.

CM Meeting Highlights on Plan Implementation announced in Budget for Medical Education Department

ಬಜೆಟ್ ಘೋಷಣೆಯಂತೆ ಬೆಂಗಳೂರಿನಲ್ಲಿ ಅಂಗಾಂಗ ದಾನ ಕೇಂದ್ರವನ್ನು ಪ್ರಾರಂಭಿಸಲಾಗಿದ್ದು, ನಿಮ್ಹಾನ್ಸ್ ಮೂಲಕ ಅಂಗಾಂಗ ದಾನ ಪ್ರಕ್ರಿಯೆಯನ್ನು ಈ ವರ್ಷವೇ ಪ್ರಾರಂಭಿಸಲು ಸೂಚನೆಯನ್ನು ನೀಡಿದರು ಹಾಗೂ ಚಿತ್ರದುರ್ಗದಲ್ಲಿ ನೂತನ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಕೈಗೊಳ್ಳಲಾಗಿರುವ ಪ್ರಕ್ರಿಯೆಗಳಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ನೀಡಿದ ಸೂಚನೆಗಳು:

1. ಹುಬ್ಬಳ್ಳಿಯಲ್ಲಿ 250 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರಕ್ಕೆ ಆಗಸ್ಟ್ 15 ರೊಳಗೆ ಶಂಕುಸ್ಥಾಪನೆ ನೆರವೇರಿಸಲು ಅಗತ್ಯ ಕ್ರಮ ವಹಿಸುವುದು.

2.ಕರ್ನಾಟಕದಲ್ಲಿ ಪಿ.ಜಿ ಕೇಂದ್ರವನ್ನು ಸ್ಥಾಪಿಸಲು ಎಲ್ಲಾ ಸೌಕರ್ಯಗಳಿವೆ. ಇದನ್ನು ಪ್ರಾರಂಭಿಸಲು ಅಗತ್ಯವಿರುವ ಅನುಮೋದನೆಯನ್ನು ರಾಷ್ಟ್ರೀಯ ವೈದ್ಯಕೀಯ ಮಂಡಳಿಯಿಂದ ಪಡೆಯಬೇಕು.

3.ಇದರ ಜೊತೆಯಲ್ಲಿಯೇ ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಿಂದ ಅಗತ್ಯವಿರುವ ಪಿಜಿ ಸ್ಥಾನಗಳ ಬಗ್ಗೆ ಮಾಹಿತಿ ಪಡೆಯಲು ಸೂಚಿಸಿದರು.

CM Meeting Highlights on Plan Implementation announced in Budget for Medical Education Department

4.ರಾಮನಗರ ಜಿಲ್ಲೆಯ ಅರ್ಚಕರಹಳ್ಳಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಪ್ರಕ್ರಿಯೆಗಳನ್ನು ಕೂಡಲೇ ಪೂರ್ಣಗೊಳಿಸಿ ಜೂನ್ ಅಂತ್ಯದೊಳಗೆ ಕಾಲೇಜು ನಿರ್ಮಾಣ ಕಾರ್ಯ ಪ್ರಾರಂಭಿಸಬೇಕು.

5.ಸೋಮವಾರದೊಳಗೆ ನಿರ್ಮಾಣ ಕಾರ್ಯಕ್ಕೆ ಅಗತ್ಯವಿರುವ ಎಲ್ಲಾ ಅನುಮೋದನೆಗಳನ್ನು ಪಡೆಯುವುದು.

6. ಬಜೆಟ್ ಘೋಷಣೆಯಂತೆ ಬೆಂಗಳೂರಿನಲ್ಲಿ ಅಂಗಾಂಗ ದಾನ ಕೇಂದ್ರವನ್ನು ಪ್ರಾರಂಭಿಸಲಾಗಿದ್ದು, ನಿಮ್ಹಾನ್ಸ್ ಮೂಲಕ ಅಂಗಾಂಗ ದಾನ ಪ್ರಕ್ರಿಯೆಯನ್ನು ಈ ವರ್ಷವೇ ಪ್ರಾರಂಭಿಸಲು ಸೂಚನೆ.

7.ಚಿತ್ರದುರ್ಗದಲ್ಲಿ ನೂತನ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಕೈಗೊಳ್ಳಲಾಗಿರುವ ಪ್ರಕ್ರಿಯೆಗಳಿಗೆ ವೇಗ ನೀಡುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+