ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಡ್ಗಿಚ್ಚಿನಿಂದ ಬಂಡೀಪುರ ಅರಣ್ಯ ರಕ್ಷಿಸಿ : ನಟ ದರ್ಶನ್ ಮನವಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 24: ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ ಎಂದು ನಟ ದರ್ಶನ್ ತೂಗುದೀಪ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಕುರಿತಂತೆ ಎರಡು ಪೋಸ್ಟ್ ಮಾಡಿದ್ದಾರೆ. ಬೆಂಕಿಯಲ್ಲಿ ಬೆಂದಿರುವ ಪ್ರಾಣಿಗಳ ಚಿತ್ರ, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿರುವ ಗಿಡ ಮರಗಳ ಚಿತ್ರ ಹಾಕಿದ್ದಾರೆ. ದರ್ಶನ್ ಅವರ ಫೇಸ್ ಬುಕ್ ಪೋಸ್ಟ್ ಹೀಗಿದೆ.

ಬಂಡೀಪುರದಲ್ಲಿ ಆರದ ಬೆಂಕಿ;ವನ್ಯ ಪ್ರಾಣಿಗಳು ಸಾವು, ಅರಣ್ಯ ನಾಶ ಬಂಡೀಪುರದಲ್ಲಿ ಆರದ ಬೆಂಕಿ;ವನ್ಯ ಪ್ರಾಣಿಗಳು ಸಾವು, ಅರಣ್ಯ ನಾಶ

ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್ ಖಾತೆಯಿಂದಲೂ ಮನವಿ ಮಾಡಲಾಗಿದೆ. ಬಂಡೀಪುರ ಮೀಸಲು ಅರಣ್ಯದ ಬೆಂಕಿ ಅವಘಡದ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅರಣ್ಯ ಸಚಿವರು ಬೆಂಕಿ ಹರಡದಂತೆ ನಡೆಯುತ್ತಿರುವ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಿದ್ದಾರೆ. ಇಂತಹ ದುರಂತ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ಹೊತ್ತಿ ಉರಿದ ಬಂಡೀಪುರ: ಬೆಂಕಿಯಲ್ಲಿ ಬೆಂದ ಪ್ರಾಣಿಗಳು, 2500 ಎಕರೆ ಅರಣ್ಯ ಪ್ರದೇಶ ನಾಶ

CM of Karnataka, Actor Darshan Appeal to safeguard Bandipur Forest

ಬಂಡೀಪುರ ಮೀಸಲು ಅರಣ್ಯ ಪ್ರದೇಶದಲ್ಲಿನ ಅಗ್ನಿ ದುರಂತ ನೋವನ್ನುಂಟುಮಾಡಿದೆ. ಇಲ್ಲಿ ತಕ್ಷಣವೇ ಪರಿಸ್ಥಿತಿಯನ್ನು ಹತೋಟಿಗೆ ತರಲು ತಕ್ಷಣ ಕ್ರಮ ಕೈಗೊಳ್ಳಲಾಗಿದೆ. ಪರಿಸರ ಹಾಗೂ ವನ್ಯಜೀವಿಗಳಿಗೆ ಹೆಚ್ಚಿನ ಹಾನಿಯುಂಟಾಗದಂತೆ ನಿಗಾ ವಹಿಸಲಾಗಿದೆ ಎಂದಿದ್ದಾರೆ.

English summary
CM of Karnataka HD Kumaraswamy, Actor Darshan and many others appeal to safeguard Bandipur Forest and get volunteers to control Forest fire.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X