ಸಿಎಂ ಕುರ್ಚಿ ಉಳಿಸಿಕೊಳ್ಳಲು ಅಕ್ರಮ ವಲಸಿಗರಿಗೆ ಮನೆ ಕೊಟ್ಟ ಸಿದ್ದರಾಮಯ್ಯ: ಬಿ ವೈ ವಿಜಯೇಂದ್ರ

ಬೆಂಗಳೂರು: ಮನೆ ಕೆಡವಿದ್ದೇ ಕಾಂಗ್ರೆಸ್ ಸರಕಾರ. ಆದರೆ, ಕೆ.ಸಿ.ವೇಣುಗೋಪಾಲ್ ಅವರು ಬೆದರಿಸಿದ ತಕ್ಷಣ ಸಿದ್ದರಾಮಯ್ಯನವರು ತಮ್ಮ ಸಿಎಂ ಕುರ್ಚಿ ಕಳಕೊಳ್ಳುವ ಭೀತಿಯಿಂದ ಅಕ್ರಮ ವಲಸಿಗರಿಗೆ ಮನೆ ಕೊಡಲು ರಾಜ್ಯ ಸರಕಾರ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

"ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ" ಎನ್ನುವ ಘೋಷವಾಕ್ಯದೊಂದಿಗೆ ಇಂದು ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿ, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಕುರ್ಚಿ ಕಸಿದುಕೊಳ್ಳಬೇಕೆಂಬ ಕಾರಣಕ್ಕಾಗಿ ಕೆ.ಸಿ.ವೇಣುಗೋಪಾಲ್ ಮೂಲಕ ಸಿಎಂಗೆ ಧಮ್ಕಿ ಹಾಕಿಸಿ ಅವರೂ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿದ್ದಾರೆ. ಪ್ರತಿಭಟನೆಗೆ ವೇದಿಕೆ ಹಾಕಲು ಅವಕಾಶ ಕೊಡುವುದಿಲ್ಲ. ಇದೇನು ಇವರ ಅಪ್ಪನ ಮನೆಯ ಸರಕಾರವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದರು.

CM offers to give shelter to illegal immigrants to retain his chair BY Vijayendra

ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ಇಂಥ ಗೊಡ್ಡು ಬೆದರಿಕೆಗೆ ಹೆದರುವವರು ಬಿಜೆಪಿ ಕಾರ್ಯಕರ್ತರಲ್ಲ. ಇದನ್ನು ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಅರ್ಥ ಮಾಡಿಕೊಳ್ಳಲಿ. ಕೆ.ಸಿ.ವೇಣುಗೋಪಾಲ್ ಕರ್ನಾಟಕದ ಮುಖ್ಯಮಂತ್ರಿಯೇ? ಅಥವಾ ಸಿದ್ದರಾಮಯ್ಯ ಮುಖ್ಯಮಂತ್ರಿಯೇ ಎಂದು ಕರ್ನಾಟಕದ ಜನರು ಪ್ರಶ್ನಿಸುತ್ತಿದ್ದಾರೆ. ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ರಾಜ್ಯದಲ್ಲಿ 38 ಲಕ್ಷ ಜನರು ಮನೆಗಾಗಿ ಅರ್ಜಿ ಹಾಕಿದ್ದಾರೆ. ಡಾ. ಅಂಬೇಡ್ಕರ್ ಅವರ ಹೆಸರು ಹೇಳುವ ಮುಖ್ಯಮಂತ್ರಿಗಳು ಕಳೆದ ಎರಡೂವರೆ ವರ್ಷದಲ್ಲಿ ಕಾಂಗ್ರೆಸ್ ಸರಕಾರವು ಒಂದೇ ಒಂದು ಮನೆ ಕೊಟ್ಟಿಲ್ಲ ಎಂದು ಆರೋಪಿಸಿದರು.

ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟದ್ದು ಅಕ್ಷಮ್ಯ ಅಪರಾಧ. ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ಇದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದರು. ಕೋಗಿಲು ಅಕ್ರಮವಾಸಿಗಳಿಗೆ ಅಯೋಗ್ಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ನಲ್ಲಿ ನೀರಿನ ಸಂಪರ್ಕ, ವಿದ್ಯುತ್ ಸಂಪರ್ಕ ನೀಡಿದ್ದಾರೆ. ತಿಂಗಳಿಗೆ 2-3 ಲಕ್ಷ ಲಂಚ ವಸೂಲಿ ಮಾಡುತ್ತಿದ್ದರು ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಲಂಚ ಪಡೆದು ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಟೀಕಿಸಿದರು.

ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಮಾತೆತ್ತಿದರೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಹೆಸರು ಹೇಳುತ್ತಾರೆ. ಇವರ ಅಂಥ ದಲಿತರಿಗೆ ಅನ್ಯಾಯ ಮಾಡಲು ಹೊರಟಿದ್ದಾರಲ್ಲವೇ ಎಂದು ಕೇಳಿದರು. ರಾಜ್ಯದ ತೆರಿಗೆದಾರರ ಹಣದಲ್ಲಿ ಕಟ್ಟಿದ ಮನೆಗಳನ್ನು ಅಕ್ರಮವಾಗಿ ನೆಲೆಸಿದವರಿಗೆ ಅಕ್ರಮವಾಗಿ ವಿತರಿಸಲು ರಾಜ್ಯ ಸರಕಾರ ಮುಂದಾಗಿದೆ ಎಂದು ದೂರಿದರು. ರಾಜ್ಯದಲ್ಲಿ ನಮ್ಮ ಹೋರಾಟ ನಡೆಯಲಿದೆ ಎಂದು ಪ್ರಕಟಿಸಿದರು. ಸತ್ಯಕ್ಕೆ ಜಯ ಸಿಗಲಿದೆ ಎಂದು ತಿಳಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಕೇರಳದವರು ಇಲ್ಲಿ ಬಂದು ವಿವರ ಪಡೆದು ಹೋಗಿದ್ದಾರೆ. ಅವರು ರಾಜ್ಯಕ್ಕೆ ಬಂದಾಗ ಇಲ್ಲಿ ಬರಲು ಅವಕಾಶ ನೀಡಿದ್ದು ಸರಿಯಲ್ಲ; ಅವರನ್ನು ಬಂಧಿಸಬೇಕಿತ್ತು ಎಂದು ತಿಳಿಸಿದರು. ಬಾಂಗ್ಲಾ ದೇಶದಿಂದ ಬಂದ ರೋಹಿಂಗ್ಯಾಗಳಿಗೆ ಮನೆ ಕೊಡಲು ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿದರು. ಕಾನೂನಾತ್ಮಕವಾಗಿ ಮನೆ ಕೊಡಿ; ಇಲ್ಲಿ ನಿಮಗೆ ವಿಶೇಷ ಪ್ರೀತಿ ಬಂದುದೇಕೆ ಎಂದು ಕೇಳಿದರು. ಹಣ ಕಟ್ಟಿ ಕಾಯುತ್ತಿರುವವರಿಗೆ ನೀವು ಮನೆ ಕೊಡುತ್ತಿಲ್ಲ ಎಂದು ಟೀಕಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+