ಸಿಎಂ ಸ್ಥಾನದ ಪಟ್ಟು ಕೊನೆಗೂ ಅಂತ್ಯ: ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ

ಕರ್ನಾಟಕದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನ ಆಯ್ಕೆಯ ಬಳಿಕ ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆಗೆ ಶಾಸಕರನ್ನು ಆಹ್ವಾನಿಸಲಾಗಿದೆ. ಇಂದು ಸಂಜೆ 7ಗಂಟೆಗೆ ಬೆಂಗಳೂರು ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಭವನದಲ್ಲಿ ನೂತನವಾಗಿ ಆಯ್ಕೆಯಾಗಿರುವ ವಿಧಾನಸಭೆ ಸದಸ್ಯರುಗಳು, ವಿಧಾನಪರಿಷತ್ ಸದಸ್ಯರುಗಳು ಹಾಗೂ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಗೆ ಎಲ್ಲಾ ಸದಸ್ಯರುಗಳು ತಪ್ಪದೇ ಭಾಗವಹಿಸಬೇಕಾಗಿ ಕೋರಲಾಗಿದೆ.

ಮೇ 13ರಂದು ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಸಿಎಂ ಪಟ್ಟಕ್ಕಾಗಿ ನಡೆದ ಮುಸುಕಿನ ಗುದ್ದಾಟ ಕೊನೆಗೂ ಕೊನೆಗೊಂಡಿದೆ. ಹಲವಾರು ಬಾರಿ ಸಭೆ ಚರ್ಚೆ ಬಳಿಕ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಇತ್ತ ಸಿಎಂ ಆಕಾಂಕ್ಷಿಯಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.

Congress legislative meeting this evening

ಫಲಿತಾಂಶ ಬಂದ ನಂತರ ಹೈಕಮಾಂಡ್ ಮಟ್ಟದಲ್ಲಿ ಸಿಎಂ ಸ್ಥಾನದ ಬಗ್ಗೆ ಚರ್ಚೆ ಸಭೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇದ್ದವು. ಆದರೀಗ ಎರಡುವರೆ ವರ್ಷ ಸಿದ್ದರಾಮಯ್ಯ ಸಿಎಂ ಆದರೆ ನಂತರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎನ್ನುವ ಒಪ್ಪಂದದ ಮೇಲೆ ಡಿಕೆ ಶಿವಕುಮಾರ್ ತಮ್ಮ ಸಿಎಂ ಆಸೆಯಿಂದ ದೂರ ಸರಿದಿದ್ದಾರೆ ಎನ್ನಲಾಗುತ್ತಿದೆ. ಪಕ್ಷದ ಹಿತ ದೃಷ್ಟಿಯಿಂದ ಡಿಕೆ ಶಿವಕುಮಾರ್ ಸಿಎಂ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಶನಿವಾರ ಅಂದರೆ ಮೇ 20ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಮುಖ್ಯಮಮತ್ರಿಯಾಗಿ ಮತ್ತು ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಿಂದ ಸಿದ್ದರಾಮಯ್ಯ ಹುಟ್ಟೂರಿನಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಸಿದ್ದರಾಮಯ್ಯ ಅವರ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಸಿದ್ದರಾಮಯ್ಯ ಅಭಿಮಾನಿಗಳು ಸಂಭ್ರಮದಲ್ಲಿದ್ದಾರೆ.

Congress legislative meeting this evening

ಈ ನಡುವೆ ಕೆಸಿ ವೇಣುಗೋಪಾಲ್ ನಿವಾಸದಲ್ಲಿ ಇಂದು ಬೆಳಿಗ್ಗೆ 9.30ಕ್ಕೆ ಬ್ರೇಕ್‌ಫಾಸ್ಟ್ ಮೀಟಿಂಗ್ ಕರೆಯಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳಲ್ಲಿ ಭರ್ಜರಿ ಗೆಲುವಿನ ನಂತರ ವೇಣುಗೋಪಾಲ ಮನೆಯಲ್ಲಿ ಈ ಮೀಟಿಂಗ್ ನಡೆಯುತ್ತಿದೆ.

ತನ್ನ ಬೇಳೆ ಬೇಯಿಸಿಕೊಳ್ಳಲು ಮುಂದಾಯಿತಾ ಕಾಣದ ಕೈ?

ಇತ್ತ ಕಾಂಗ್ರೆಸ್ ಮುಖ್ಯಮಂತ್ರಿ ಸೀಟಿನ ಬಗ್ಗೆ ಬಿಜೆಪಿಗರಿಗೆ ಭಾರೀ ಕುತೂಹಲ ಹೆಚ್ಚಾಗಿದೆ. ಸಿದ್ದರಾಮಯ್ಯ ವಿರುದ್ಧ ಸೋತ ಸುಧಾಕರ್ ಆರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿಎಂ ಯಾರಾಗಬೇಕು ಎನ್ನುವ ಹುಗ್ಗಜಗ್ಗಾಟದ ಮಧ್ಯೆ ಬಿಜೆಪಿ ತನ್ನ ಬೇಳೆ ಕಾಳುಗಳನ್ನು ಬೇಯಿಸಿಕೊಳ್ಳುತ್ತಿದಿಯಾ ಅನ್ನೋ ಅನುಮಾನ ಶುರುವಾಗಿದೆ.

Congress legislative meeting this evening

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಟ್ಟನ್ನು ಸಡಿಲಗೊಳಿಸದೇ ಇರುವುದಕ್ಕೆ ಕಾಣದ ಕೈಗಳು ಕಾರಣಾನಾ? ಸಿದ್ದರಾಮಯ್ಯ ಸಿಎಂ ಆಗಲೇ ಬಾರದು ಎನ್ನುವ ಕುತಂತ್ರ ನಡೆತಾಯಿದಿಯಾ? ಇದೇ ಕಾರಣಕ್ಕೆ ನಾನು ಸಿಎಂ ಆಗಿಲ್ಲ ಅಂದರೂ ಪರವಾಗಿಲ್ಲ, ಸಿದ್ದರಾಮಯ್ಯ ಸಿಎಂ ಆಗಬಾರದು ಅಂತ ಹೇಳಿದ್ರಾ ಅನ್ನೋ ಪ್ರಶ್ನೆ ಮೂಡಿತ್ತು

ಈ ನಡುವೆ ಬಿಜೆಪಿ ಸಚಿವರಾಗಿ ನಾಲ್ಕು ವರ್ಷ ಅಧಿಕಾರ ಅನುಭವಿಸಿದ್ದ ಮತ್ತು ಚಿಕ್ಕಬಳ್ಳಾಪುರದಲ್ಲಿ ಸೋತ ಸುಧಾಕರ್ ಇದೀಗ ಸಿದ್ದರಾಮಯ್ಯ ಅವರ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿರೋದ್ಯಾಕೆ ಎನ್ನುವ ಅನುಮಾನಗಳು ವ್ಯಕ್ತವಾಗುತ್ತಿವೆ. ಇವರ ಒಂದು ಟ್ವೀಟ್ ರಾಜಕೀಯ ವಲಯದಲ್ಲಿ ಸಂಚಲವನ್ನೇ ಸೃಷ್ಟಿ ಮಾಡುತ್ತಿದೆ.

ಇವರ ಟ್ವೀಟ್‌ನಲ್ಲಿ ಇರುವಂತೆ 2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಲಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ವರೆಗೆ ತಡೆದುಕೊಳ್ಳಿ ಎಂದು ಸಿದ್ದರಾಮಯ್ಯ ಶಾಸಕರಿಗೆ ಸಮಾಧಾನ ಮಾಡುತ್ತಿದ್ದರು. ನಮ್ಮ ಕ್ಷೇತ್ರದಲ್ಲಿ ನಮ್ಮ ನಂಬಿದವರನ್ನು ಉಳಿಸಿಕೊಳ್ಳಲು ದೊಡ್ಡ ರಿಸ್ಕ್‌ ತೆಗೆದುಕೊಂಡು ರಾಜೀನಾಮೆ ಪಡೆದು ಮಂತ್ರಿಗಳಾದ್ವಿ. ಸಿದ್ದರಾಮಯ್ಯ ಇದನ್ನೆಲ್ಲಾ ನಿರಾಕರಿಸಲು ಸಾಧ್ಯವೇ? ಎಂದು ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

ಇದು ಸಿದ್ದರಾಮಯ್ಯ ಅವರ ಸಿಎಂ ಸ್ಥಾನ ಕಸಿದುಕೊಳ್ಳುವ ಸಂಚು ಎನ್ನಲಾಗುತ್ತಿದೆ. ಇದರಿಂದ ಸಿದ್ದರಾಮಯ್ಯ ಸಿಎಂ ಆದರೆ ಅವರಿಗೆ ತೊಂದರೆ ಆಗುತ್ತಾ ಎನ್ನುವ ಆತಂಕ ವಲಸೆ ಕಾಂಗ್ರೆಸ್‌ ರಿಗೆ ಶುರುವಾಗಿದೆ ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+