ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ಬಗ್ಗೆ Oneindia Kannada ಬರಹ ಹಂಚಿಕೊಂಡು ಅಪ್ಡೇಟ್ ಕೊಟ್ಟ ಸಿ.ಎಂ
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಅಪ್ಡೇಟ್ಸ್ ಕೊಟ್ಟಿದ್ದಾರೆ. ಇದರೊಂದಿಗೆ ಅವರು Oneindia Kannada ಬರಹವನ್ನು ಸಹ ಹಂಚಿಕೊಂಡಿದ್ದಾರೆ.
ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದೆ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕೂಡಲೇ ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ. ಬಳ್ಳಾರಿ ಮೂಲದ 32 ಮಂದಿ ದುಬೈನಲ್ಲಿ ಸಿಲುಕಿರುವ ಬಗ್ಗೆ ಮಾಜಿ ಸಚಿವರಾದ ನಾಗೇಂದ್ರ ಅವರು ನನಗೆ ಮಾಹಿತಿ ನೀಡಿದ್ದು, ಅವರ ಸುರಕ್ಷತೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
https://kannada.oneindia.com/entertainment/rashmika-mandanna-wedding-post-goes-viral-with-vijay-deverakonda-how-educated-is-the-kodagu-beauty-445535.html
ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್
ಮಧ್ಯಪ್ರಾಚ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದಾರೆ. ಯುದ್ಧಗಳು ಸಾಮಾನ್ಯವಾಗಿ ಮೂರು ಪ್ರಮುಖ ಕಾರಣಗಳಿಂದ ನಡೆಯುತ್ತವೆ: ಅಧಿಕಾರ, ಧರ್ಮ ಮತ್ತು ಆರ್ಥಿಕ ಹಿತಾಸಕ್ತಿ. ದೇಶಗಳು ಮತ್ತು ಆಡಳಿತಗಾರರು ತಮ್ಮ ಪ್ರದೇಶವನ್ನು ವಿಸ್ತರಿಸಲು, ಪ್ರಭಾವ ಹೆಚ್ಚಿಸಲು ಅಥವಾ ತಂತ್ರಾತ್ಮಕ ಲಾಭ ಪಡೆಯಲು ಯುದ್ಧ ಮಾಡುತ್ತಾರೆ. ಅನೇಕ ಬಾರಿ ಜನರನ್ನು ಒಗ್ಗೂಡಿಸಲು ಮತ್ತು ಯುದ್ಧವನ್ನು ನ್ಯಾಯೀಕರಿಸಲು ಧರ್ಮವನ್ನು ಬಳಸಲಾಗುತ್ತದೆ. ಹಾಗೆಯೇ ಆರ್ಥಿಕ ಕಾರಣಗಳು ಕೂಡ ಪ್ರಮುಖವಾಗಿವೆ - ಸಂಪನ್ಮೂಲಗಳು, ವ್ಯಾಪಾರ ಮಾರ್ಗಗಳು, ಸಂಪತ್ತು ಅಥವಾ ಮಾರುಕಟ್ಟೆಗಳ ಮೇಲಿನ ನಿಯಂತ್ರಣಕ್ಕಾಗಿ ಯುದ್ಧಗಳು ನಡೆಯುತ್ತವೆ.
ವಾಸ್ತವವಾಗಿ ಈ ಎಲ್ಲ ಕಾರಣಗಳು ಪರಸ್ಪರ ಸೇರಿಕೊಂಡಿರುತ್ತವೆ: ಅಧಿಕಾರದ ಹೋರಾಟವನ್ನು ತತ್ತ್ವಗಳ ಹೆಸರಿನಲ್ಲಿ ತೋರಿಸಲಾಗುತ್ತದೆ ಮತ್ತು ಆರ್ಥಿಕ ಲಾಭಕ್ಕಾಗಿ ಸೈನಿಕ ಶಕ್ತಿಯನ್ನು ಬಳಸಲಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.












Click it and Unblock the Notifications