'ಪ್ರತಿ ಸೆಕೆಂಡ್ ಕೂಡ ಅಮೂಲ್ಯ': ತಾಯಿ ಜೀವ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿಗೆ ಸಿಎಂ ಮೆಚ್ಚುಗೆ

ಬೆಂಗಳೂರು, ಸೆಪ್ಟೆಂಬರ್ 06: ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ತಾಯಿಯನ್ನು ರಕ್ಷಿಸಲು ತನ್ನ ಪ್ರಾಣದ ಹಂಗು ತೊರೆದು ಧೈರ್ಯ ತೋರಿದ ದಕ್ಷಿಣ ಕನ್ನಡದ ಬಾಲಕಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬಾಲಕಿಯ ಧೈರ್ಯ ಮತ್ತು ಸಮಯ ಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಗೆ ಆಟೋ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಈ ದೃಶ್ಯವನ್ನು ಕಂಡ ಅಲ್ಲೇ ಇದ್ದ ಮಗಳು ಕೂಡಲೇ ಆಟೋವನ್ನು ಮೇಲೆತ್ತಿ ತಾಯಿಯ ಪ್ರಾಣವನ್ನು ಉಳಿಸಿದ್ದಾಳೆ. ಈ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದ್ದು, ಈ ದೃಶ್ಯ ನೋಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಲಕಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

CM Siddaramaiah Admired The Bravery Of The Girl Who Lifted The Auto To Save Her Mother

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ. ಅಲ್ಲೇ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೇ, ತಕ್ಷಣ ಕಾರ್ಯ ಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.

ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+